Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆ ಇಟ್ಟ...

ರಾಜ್ಯದಲ್ಲಿ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿ ಅಧ್ಯಕ್ಷರ ಜತೆ ಡಿಸಿಎಂ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ25 Feb 2021 11:37 PM IST
share

ಬೆಂಗಳೂರು, ಫೆ.25: ಲ್ಯಾಪ್‍ಟಾಪ್, ಟ್ಯಾಬ್ ಇತ್ಯಾದಿ ಎಲೆಕ್ಟ್ರಾನಿಕ್ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು ಈ ಬಗ್ಗೆ ಐಟಿ-ಬಿಟಿ, ಎಲೆಕ್ಟ್ರಾನಿಕ್ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಂಪನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. 

ಗುರುವಾರ ನಗರದಲ್ಲಿ ಉಪ ಮುಖ್ಯಮಂತ್ರಿ ಮುಂದೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿಯ ಕಾರ್ಯಕಾರಿ ಅಧ್ಯಕ್ಷ ಸುನಿಲ್ ವಚಾನಿ, ಅಗತ್ಯವಾದ ಜಾಗ ಹಾಗೂ ಇತರೆ ಅಂಶಗಳ ಬಗ್ಗೆ ಬೇಡಿಕೆ ಇಟ್ಟರು. ಕಂಪನಿಯ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಜಮೀನು ಕೊಡುವ ಭರವಸೆ ನೀಡಿದರು. 

ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣಾ(ಇಎಸ್‍ಡಿಎಂ) ಇಲಾಖೆಯ ವ್ಯಾಪ್ತಿಯಲ್ಲಿ ಈ ಯೋಜನೆ ಕಾರ್ಯಗತವಾಗಲಿದೆ. ಕೋಲಾರ ಜಿಲ್ಲೆಯ ಮಾಸ್ತೇನಹಳ್ಳಿ, ಮಿಂಡೇನಹಳ್ಳಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು, ರಾಮನಗರ ಜಿಲ್ಲೆಯ ಹಾರೋಹಳ್ಳಿ ಇವಿಷ್ಟೂ ಜಾಗಗಳ ಪೈಕಿ ಯಾವುದಾದರೂ ಒಂದು ಸ್ಥಳದಲ್ಲಿ ತಯಾರಿಕಾ ಘಟಕವನ್ನು ಡಿಕ್ಸನ್ ಕಂಪನಿ ಸ್ಥಾಪನೆ ಮಾಡಲು ಜಮೀನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು. 

ಕಂಪನಿಯು 10 ರಿಂದ 15 ಎಕರೆಯಷ್ಟು ಭೂಮಿಗೆ ಬೇಡಿಕೆ ಇಟ್ಟಿದೆ. ಇಎಸ್‍ಡಿಎಂ ನೀತಿಯ ಪ್ರಕಾರ ಬೆಂಗಳೂರಿನ ಹೊರಗೆ ಮೇಲೆ ತಿಳಿಸಿದ ಯಾವುದೇ ಜಾಗದಲ್ಲಿ ಕಂಪನಿ ತನ್ನ ಘಟಕವನ್ನು ಸ್ಥಾಪನೆ ಮಾಡಿದರೆ ಸರಕಾರದಿಂದ ಸಿಗಲಿರುವ ಎಲ್ಲ ಸಬ್ಸಿಡಿ, ಪ್ರಯೋಜನಗಳು ದೊರೆಯಲಿವೆ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆಯೂ ಕಂಪನಿಗೆ ಮನವರಿಕೆ ಮಾಡಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು. 

ಸುಮಾರು 30 ಸಾವಿರ ಕೋಟಿ ರೂ.ಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಡಿಕ್ಸನ್ ಕಂಪನಿಯು ಲ್ಯಾಪ್‍ಟಾಪ್, ಟ್ಯಾಬ್, ಡೆಸ್ಟಾಪ್, ಸಿಎಫ್‍ಎಲ್ ಬಲ್ಬ್‍ಗಳು, ಎಲ್‍ಇಡಿ ಟಿವಿಗಳು, ಸಿಸಿಟಿವಿ, ವಾಷಿಂಗ್ ಮಷಿನ್ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಕೆಯಲ್ಲಿ ಹೆಸರುವಾಸಿಯಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಅತುಲ್ ಲಾಲ್, ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ ಸರಕಾರದ ಹಿರಿಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X