ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಯೂಸುಫ್ ಪಠಾಣ್

ಹೊಸದಿಲ್ಲಿ, ಫೆ.26: ಭಾರತದ ಮಾಜಿ ಆಲ್‌ರೌಂಡರ್ ಯೂಸುಫ್ ಪಠಾಣ್ ಅವರು ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಯೂಸುಫ್ ಪಠಾಣ್ ಎರಡು ಬಾರಿ ವಿಶ್ವಕಪ್ ವಿಜೇತರಾಗಿದ್ದು, 2007ರ ಐಸಿಸಿ ಟಿ20 ವಿಶ್ವಕಪ್ ಮತ್ತು 2011ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು.
‘’ನನಗೆ ಬೆಂಬಲ ನೀಡಿದ್ದಕ್ಕೆ ಹಾಗೂ ನನ್ನನ್ನು ಪ್ರೀತಿಸಿದ್ದಕ್ಕೆ ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಧನ್ಯವಾದಗಳು’’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಯೂಸುಫ್ 2007ರಲ್ಲಿ ಅಂತರ್ ರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ನಂತರ ಭಾರತದ ಪರ 57 ಏಕದಿನ ಮತ್ತು 22 ಟಿ20 ಪಂದ್ಯಗಳನ್ನು ಆಡಿದ್ದಾರೆ.
ಮಾರ್ಚ್ 2012ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಕೊನೆಯ ಬಾರಿಗೆ ಭಾರತ ಪರ ಆಡಿದ್ದರು.
I thank my family, friends, fans, teams, coaches and the whole country wholeheartedly for all the support and love. #retirement pic.twitter.com/usOzxer9CE
— Yusuf Pathan (@iamyusufpathan) February 26, 2021







