Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿ ಬಸ್ ಪಾಸ್ ವಿಳಂಬ ನಿವಾರಣೆಗೆ...

ವಿದ್ಯಾರ್ಥಿ ಬಸ್ ಪಾಸ್ ವಿಳಂಬ ನಿವಾರಣೆಗೆ ಸಚಿವ ಸುರೇಶ್ ಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Feb 2021 8:30 PM IST
share
ವಿದ್ಯಾರ್ಥಿ ಬಸ್ ಪಾಸ್ ವಿಳಂಬ ನಿವಾರಣೆಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು, ಫೆ.26: ವಿದ್ಯಾರ್ಥಿ ರಿಯಾಯ್ತಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆ ನಿವಾರಿಸಿ ಸಕಾಲದಲ್ಲಿ ಪಾಸ್ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್ ಪಡೆಯುವಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಕುರಿತು ಸಕಾಲ ಮತ್ತು ಸೇವಾ ಸಿಂಧು ಅಧಿಕಾರಿಗಳು ಹಾಗೂ ರಾಜ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೇವಾಸಿಂಧು ಪೋರ್ಟಲ್ ಮೂಲಕ ವಿದ್ಯಾರ್ಥಿಗಳ ರಿಯಾಯ್ತಿ ಬಸ್ ಪಾಸ್ ಪಡೆಯುವ ಸಂಬಂಧದಲ್ಲಿ ಸಮಸ್ಯೆಯಾಗುತ್ತಿರುವ ಕುರಿತು ನಮ್ಮ ಕಚೇರಿಗೆ ಇ-ಮೇಲ್ ಮೂಲಕ, ಪತ್ರಗಳ ಮೂಲಕ ದೂರುಗಳು ಬಂದಿವೆ. ಪ್ರವಾಸದ ಸಮಯದಲ್ಲಿ ರಾಜ್ಯದೆಲ್ಲೆಡೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕುರಿತ ಸಮಸ್ಯೆಗಳನ್ನು ನನ್ನಲ್ಲೂ ಹೇಳಿಕೊಂಡಿದ್ದು, ಪಾಸ್ ಪಡೆಯುವಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಅವರು ಹೇಳಿದರು.

ಪ್ರಸ್ತುತ ಶೈಕ್ಷಣಿಕ ವರ್ಷ ಬಹಳ ತಡವಾಗಿ ಆರಂಭವಾಗಿದೆ. ಈ ಬಾರಿ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲವೆಂದು ಇಲಾಖೆಯ ಆದೇಶವಿದ್ದಾಗ್ಯೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುತ್ತಿರುವುದು ಸಂತೋಷದ ಹಾಗೂ ಸ್ಪೂರ್ತಿದಾಯಕ ಸಂಗತಿಯಾಗಿದೆ. ಆದರೆ ಸಕಾಲದಲ್ಲಿ ಬಸ್ ಪಾಸ್ ದೊರೆಯದೇ ಕೆಲವರು ಶಾಲೆಗೆ ಬಾರದೇ ಇರುವ ಕುರಿತು ಇಲಾಖೆಯ ಅಧಿಕಾರಿಗಳು ಪ್ರತಿದಿನ ಹಾಜರಾತಿ ವಿವರದಲ್ಲಿ ಷರಾ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದರು.

ನಿಗದಿತ ಅವಧಿಯಲ್ಲಿ ರಿಯಾಯ್ತಿ ಪಾಸ್ ದೊರೆಯದೇ ತರಗತಿಗೆ ಗೈರು ಹಾಜರಾಗುವ ಸಮಸ್ಯೆ ಉದ್ಭವಿಸದಂತೆ ಎರಡೂ ಇಲಾಖೆಗಳು ಗಮನಹರಿಸಬೇಕು ಎಂದ ಅವರು, ಸೇವಾಸಿಂಧು ಮೂಲಕ ಪಾಸ್ ಪಡೆಯುವ ಅರ್ಜಿ ಭರ್ತಿ ಮಾಡುವಾಗ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆನ್ನು ಕಡ್ಡಾಯಗೊಳಿಸಿರುವುದರಿಂದ ಆಧಾರ್ ಕಾರ್ಡ್ ಮತ್ತು ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಪಾಸ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳೂ ಇವೆ ಎಂದರು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸೈಬರ್ ಕೆಫೆಗಳ ಮೊರೆಹೋಗಬೇಕಿರುವುದರಿಂದ ಸೈಬರ್ ಕೆಫೆಗಳಿಗೆ ಸೇವಾಶುಲ್ಕ ಪಾವತಿಸಬೇಕಾಗಿರುವುದರಿಂದ ಮಕ್ಕಳಿಗೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತಿದೆ ಎಂದು ಕೆಲ ಪೋಷಕರು ಹೇಳಿರುವುದರಿಂದ ಇದನ್ನು ಹೇಗೆ ಸರಳೀಕರಿಸಬೇಕೆಂಬುದರ ಕುರಿತೂ ಚಿಂತನೆ ನಡೆಸಬೇಕೆಂದೂ ಸುರೇಶ್ ಕುಮಾರ್ ಸಲಹೆ ನೀಡಿದರು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಹಲವು ರೀತಿಯ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವಾಗ ಅಪ್‍ಲೋಡ್ ಮಾಡಲಾದ ದಾಖಲೆಗಳ ಝೆರಾಕ್ಸ್ ಪ್ರತಿಗಳನ್ನು ಪುನಃ ಭರ್ತಿ ಮಾಡಲಾದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅದರೊಂದಿಗೆ ಭೌತಿಕವಾಗಿ ಪಾಸ್ ಕೌಂಟರ್ ನಲ್ಲಿ ಸಲ್ಲಿಸಬೇಕಾಗಿರುವುದು ಹೆಚ್ಚಿನ ಕೆಲಸದ ಹೊರೆಯಾಗುವುದು ಹಾಗೆಯೇ ಇದು ಅನಗತ್ಯವಾದ ಹಂತವಾಗಿದೆ. ಇದು ಎರಡು ಹಂತದ ಕೆಲಸವಾದ್ದರಿಂದ ಅರ್ಜಿಸಲ್ಲಿಕೆ ಹಂತಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕೆಂದು ಅವರು ಹೇಳಿದರು.

ಯಾವುದೇ ಆನ್‍ಲೈನ್ ಸೇವೆಗಳು ಸರಳ, ಸುಲಭ ಪ್ರಕ್ರಿಯೆ ಹಾಗೂ ಜನಸ್ನೇಹಿಯಾಗಿರಬೇಕಾಗಿರುತ್ತದೆ. ವಿದ್ಯಾರ್ಥಿಗಳಿಗೆ ಪಾಸ್ ಪಡೆಯುವಲ್ಲಿ ಎದುರಾಗುವ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಂಡು ಸಕಾಲದಲ್ಲಿ ಪಾಸ್ ದೊರೆಯುವಂತೆ ಮಾಡಬೇಕಿರುವುದು ಅಗತ್ಯವಾಗಿದೆ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು. 

ತಮ್ಮ ಕೋರಿಕೆ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಸಮಯಕ್ಕೆ ಸರಿಯಾಗಿ ಸಾರಿಗೆ ಸಂಸ್ಥೆ ಬಸ್‍ಗಳನ್ನು ಒದಗಿಸಿದೆ. ಆದರೆ ಬಸ್‍ಪಾಸ್ ಇಲ್ಲದೇ ಶಾಲೆಗೆ ಹೋಗಿ ಬರಲು ತೊಂದರೆಯಾದರೆ ಬಸ್ ಸೌಲಭ್ಯ ಒದಗಿಸಿಯೂ ಪ್ರಯೋಜನವಾಗುವುದಿಲ್ಲ. ಹಾಗಾಗಿ ಈ ಸೌಲಭ್ಯದ ಪೂರ್ಣಪ್ರಯೋಜನ ಮಕ್ಕಳಿಗೆ ದೊರೆಯಬೇಕಾದರೆ ಸಕಾಲದಲ್ಲಿ ಪಾಸ್ ದೊರೆಯುವಂತೆ ಮಾಡಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಈಗಾಗಲೇ ಪಾಸ್‍ಗೆ 12 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 8.5 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಿ ಪಾಸ್‍ಗಳನ್ನು ವಿತರಿಸಲಾಗಿದೆ ಎಂದು ಸಾರಿಗೆ ಸಂಸ್ಥೆ ಅಧಿಕಾರಿ ವಿಶ್ವನಾಥ್ ಹೇಳಿದರು.

ಸಭೆಯಲ್ಲಿ ಸಕಾಲ ಮಿಷನ್ ನಿರ್ದೇಶಕಿ ಡಾ.ಬಿ.ಆರ್. ಮಮತಾ, ಇಡಿಸಿಎಸ್ ನಿರ್ದೇಶಕಿ ದೀಪ್ತಿ ಕಾನಡೆ, ಸಕಾಲ ಮಿಷನ್ ಅಧಿಕಾರಿ ವರಪ್ರಸಾದರೆಡ್ಡಿ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X