Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕರ ಪ್ರದೇಶಾಭಿವೃದ್ಧಿ ಅನುದಾನ...

ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಸಂಪೂರ್ಣವಾಗಿ ಬಳಸಿಕೊಳ್ಳಿ: ಸಚಿವ ಡಾ. ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ26 Feb 2021 9:00 PM IST
share
ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಸಂಪೂರ್ಣವಾಗಿ ಬಳಸಿಕೊಳ್ಳಿ: ಸಚಿವ ಡಾ. ನಾರಾಯಣಗೌಡ

ಉಡುಪಿ, ಫೆ. 26: ಜಿಲ್ಲೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ನೀಡಲಾಗುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ, ನಿಗದಿತ ಅವಧಿಯೊಳಗೆ ಅಗತ್ಯ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಎಂದು ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ವೆಚ್ಚ ಮಾಡದೇ ಇದ್ದಲ್ಲಿ, ಆರ್ಥಿಕ ಇಲಾಖೆಯಿಂದ ಹೊಸ ಅನುದಾನ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಜಿಲ್ಲೆಯ ಎಲ್ಲಾ ಶಾಸಕರಿಂದ ಕ್ರಿಯಾ ಯೋಜನೆಯನ್ನು ಪಡೆದು ಕಾಲಮಿತಿಯಲ್ಲಿ ಯೋಜನೆ ಮುಕ್ತಾಯಗೊಳಿಸಿ ಅನುದಾನವನ್ನು ವೆಚ್ಚ ಮಾಡಿ. ಅನುದಾನವನ್ನು ಪಿಡಿ ಖಾತೆಯಲ್ಲಿ ಇಡಬೇಡಿ ಎಂದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸದೇ ಇರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆಗೆ ಅಡಚಣೆಯಾಗಿದೆ. ಉಡುಪಿ ಜಿಲ್ಲೆ ಅನುದಾನ ಬಳಕೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಪ್ರಸ್ತುತ ಸಾಲಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸಂಬಂದಪಟ್ಟ ಇಲಾಖೆಗಳ ಮೂಲಕ ಶೀಘ್ರದಲ್ಲಿ ಮುಕ್ತಾಯಗೊಳಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಸಚಿವರು ತಿಳಿಸಿದರು.

ಜಿಲ್ಲೆಯ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವರು, ಉಡುಪಿಯಲ್ಲಿ ಕ್ರೀಡಾ ಸೌಲ್ಯಗಳ ಬಗ್ಗೆ ಪರಿಶೀಲಿಸಿ ಇಡೀ ರಾಜ್ಯಕ್ಕೆ ಮಾದರಿ ಯಾಗುವಂತಹ ಸೌಲ್ಯಗಳು ಇಲ್ಲಿದ್ದು, ಇವುಗಳ ಸದ್ಬಳಕೆ ಮತ್ತು ಸಮರ್ಪಕ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿಗೆ ಕ್ರೀಡಾಂಗಣ: ಜಿಲ್ಲೆಯ ಎಲ್ಲಾ ತಾಲೂಕು ಕ್ರೀಡಾಂಗಣಗಳ ಅಭಿವೃದ್ದಿ ಕುರಿತಂತೆ ಸಂಬಂದಪಟ್ಟ ಶಾಸಕರಿಂದ ಪ್ರಸ್ತಾವನೆ ಸಲ್ಲಿಸಿ. ಕುಂದಾಪುರದಲ್ಲಿ ಸುಸಜ್ಜಿತ ಜಿಮ್ ಮತ್ತು ಈಜುಕೊಳ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉಡುಪಿ ಬ್ಯಾಡ್ಮಿಂಟನ್ ಕೋರ್ಟ್ ವಿಸ್ತರಣೆ ಹಾಗೂ ಕ್ರೀಡಾ ವಸತಿ ನಿಲಯದಲ್ಲಿ ಪದವಿವರೆಗೆ ಕ್ರೀಡಾಪಟುಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಕ್ರೀಡಾಂಗಣಗಳ ನಿರ್ಮಾಣ ಮತ್ತು ವಿಸ್ತರಣೆ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸುಸಜ್ಜಿತ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X