ತಂಬಾಕು ತನಿಖಾ ದಳದಿಂದ ದಾಳಿ
ಉಡುಪಿ, ಫೆ.26: ಜಿಲ್ಲೆಯಲ್ಲಿ ಕೋಟ್ಪಾ2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಗುರುವಾರ ಉಡುಪಿ ತಾಲೂಕಿನ ಉಡುಪಿ ನಗರ ಬಸ್ ನಿಲ್ದಾಣದ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 22 ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಲಾಯಿತು.
ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ಉಡುಪಿ ತಾಲೂಕು ಹಿರಿಯ ಆರೋಗ್ಯ ಸಹಾಯಕ ದೇವಪ್ಪಪಟಗಾರ್, ಜಗದೀಶ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್‌ಟಿಸಿಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು
Next Story





