Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಗಲಭೆ ಪ್ರಕರಣದ ಎನ್‍ಐಎ...

ಬೆಂಗಳೂರು ಗಲಭೆ ಪ್ರಕರಣದ ಎನ್‍ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್‍ಡಿಪಿಐ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Feb 2021 10:41 PM IST
share
ಬೆಂಗಳೂರು ಗಲಭೆ ಪ್ರಕರಣದ ಎನ್‍ಐಎ ಆರೋಪಪಟ್ಟಿ ಪೂರ್ವ ನಿರ್ದೇಶಿತ: ಎಸ್‍ಡಿಪಿಐ ಆರೋಪ

ಬೆಂಗಳೂರು, ಫೆ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕೇಂದ್ರದ ಬಿಜೆಪಿ ಸರಕಾರದ ಒತ್ತಡಕ್ಕೆ ಮಣಿದು ಎನ್‍ಐಎ ಸಲ್ಲಿಸಿರುವ ಚಾರ್ಜ್‍ಶೀಟ್ ಪೂರ್ವ ನಿರ್ದೇಶಿತ ಮತ್ತು ಎಸ್‍ಡಿಪಿಐ ಪಕ್ಷವನ್ನು ಗುರಿಯಾಗಿಸಿ ರಚಿಸಿರುವುದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್ ಆರೋಪಿಸಿದ್ದಾರೆ.

ಶುಕ್ರವಾರ ನಗರದ ಕಬ್ಬನ್‍ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಷಾ ದರ್ಗಾ ಕಾಂಪ್ಲೆಕ್ಸ್ ನಲ್ಲಿರುವ ಎಸ್‍ಡಿಪಿಐ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿರುವಾಗಲೆ ಸಂಘಪರಿವಾರದ ಒತ್ತಡದಿಂದ ಕೇಂದ್ರ ಬಿಜೆಪಿ ಸರಕಾರವು ಎನ್‍ಐಎ ಅನ್ನು ಕಳುಹಿಸಿತ್ತು. ಬಿಜೆಪಿ ಸರಕಾರದ ನಿರ್ದೇಶನದಂತೆ ಎನ್‍ಐಎ ದಿಲ್ಲಿಯಿಂದಲೇ ಎಸ್‍ಡಿಪಿಐ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂದಿತ್ತು ಎಂದು ದೂರಿದರು.

ಈ ಬಗ್ಗೆ ಕಳೆದ ಆರು ತಿಂಗಳಲ್ಲಿ 2000ಕ್ಕೂ ಹೆಚ್ಚು ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿತ್ತು. ಈ ಪೈಕಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್, ಜೆಡಿಎಸ್ ಮತ್ತಿತರ ಪಕ್ಷಗಳ ಮುಖಂಡರು ನೇರ ಹೊಣೆಗಾರರು ಹಾಗೂ ಇದರಲ್ಲಿ ರಾಜಕೀಯ ಷಡ್ಯಂತ್ರ ಇದೆ ಎಂದು ಸ್ವತಃ ಅಲ್ಲಿನ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹಾಗೂ ತನಿಖೆ ನಡೆಸಿದ ಸಿಸಿಬಿ ಹೇಳಿಕೆ ನೀಡಿರುವುದು ವರದಿಯಾಗಿದ್ದರೂ, ತಪ್ಪಿತಸ್ಥರು ಸುಲಭವಾಗಿ ಜಾಮೀನಿನಲ್ಲಿ ಬಿಡುಗಡೆ ಹೊಂದಿರುವುದನ್ನು ಗಮನಿಸಿದರೆ ಅಮಾಯಕರನ್ನು ಸಿಲುಕಿಸಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ಎಸ್‍ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ಪ್ರವಾದಿ ಮುಹಮ್ಮದ್(ಸ) ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಘಪರಿವಾರದ ಕಾರ್ಯಕರ್ತ ನವೀನ್ ಎಂಬಾತನ ಕೃತ್ಯದಿಂದ ಈ ಹಿಂಸಾಚಾರ ನಡೆದಿತ್ತು ಎಂಬುದು ವಾಸ್ತವ. ಆದರೂ, ನವೀನ್ ಮೇಲೆ ದುರ್ಬಲ ಕೇಸು ಹಾಕುವ ಮೂಲಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದಲ್ಲಿ ಸಕ್ರಿಯವಾಗಿದ್ದ ಫೈರೋಝ್ ಎಂಬಾತನ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದರು.

ಇವರಿಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಧಾರ್ಮಿಕ ಭಾವನೆಗಳ ಬಗ್ಗೆ ಆರೋಪ-ಪ್ರತ್ಯಾರೋಪ ಹಾಕಿಕೊಂಡವರಾಗಿದ್ದಾರೆ. ಒಟ್ಟು ಹಿಂಸಾಚಾರದ ಮುಖ್ಯ ಕಾರಣ ಈ ಫೇಸ್‍ಬುಕ್ ಪೋಸ್ಟ್ ಗಳೇ ಎಂದು ತನಿಖಾಧಿಕಾರಿಗಳು ವರದಿ ಮಾಡಿದ್ದಾರೆ. ಆದರೆ, ಇಲ್ಲಿ ಧರ್ಮಾದಾರಿತ ತಾರತಮ್ಯ ನಡೆದಿರುವುದು ಕಾನೂನುಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.

ಎನ್‍ಐಎ ಅಧಿಕಾರಿಗಳು ಈ ಪ್ರಕರಣದಲ್ಲಿ ಆರಂಭದಿಂದಲೂ ನೇರವಾಗಿ ಎಸ್‍ಡಿಪಿಐಯನ್ನು ಸಿಲುಕಿಸಲು ಪ್ರಯತ್ನಪಟ್ಟಿದ್ದಾರೆ. ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳು ಮತ್ತು ಆರೆಸ್ಸೆಸ್‍ನ ಫ್ಯಾಶಿಸ್ಟ್ ಸಿದ್ಧಾಂತದ ವಿರುದ್ಧ ಧ್ವನಿ ಎತ್ತುತ್ತಿರುವ ಪ್ರಗತಿಪರರನ್ನು, ರೈತರನ್ನು, ವಿದ್ಯಾರ್ಥಿಗಳನ್ನು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕಳೆದ ಆರು ವರ್ಷಗಳಿಂದ ಮೋದಿ ಸರಕಾರ ಯುಎಪಿಎ, ಎನ್‍ಎಸ್‍ಎ ಹಾಗೂ ದೇಶದ್ರೋಹದಂತಹ ಕರಾಳ ಕೇಸುಗಳನ್ನು ಹಾಕಿ ಹಿಂಸಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.

ಬೆಂಗಳೂರು ಹಿಂಸಾಚಾರದ ಬಗ್ಗೆ ನಿವೃತ್ತ ನ್ಯಾ.ನಾಗಮೋಹನ್ ದಾಸ್, ಬಿಡುಗಡೆಗೊಳಿಸಿದ ಸ್ವತಂತ್ರ ಬುದ್ಧಿಜೀವಿಗಳ ಸತ್ಯಶೋಧನಾ ವರದಿಯಲ್ಲಿ ರಾಜ್ಯ ಸರಕಾರದ ಮತ್ತು ಗುಪ್ತಚರ ಇಲಾಖೆಯ ವೈಫಲ್ಯದಿಂದ ಈ ಹಿಂಸಾಚಾರ ನಡೆದಿದೆ ಹಾಗೂ ತನಿಖಾ ಸಂಸ್ಥೆಗಳು ಎಸ್‍ಡಿಪಿಐ ಪಕ್ಷವನ್ನು ಮತ್ತು ನಿರ್ದಿಷ್ಟ ಸಮುದಾಯವನ್ನು ಗುರಿಪಡಿಸುತ್ತಿರುವುದು ಸರಿಯಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ಅಫ್ಸರ್ ಕೊಡ್ಲಿಪೇಟೆ ತಿಳಿಸಿದರು.

ಸಂಘಪರಿವಾರ ಪ್ರಾಯೋಜಿತ ಸತ್ಯಶೋಧನಾ ವರದಿಯನ್ನೆ ಎನ್‍ಐಎ ಆರೋಪಪಟ್ಟಿಯಲ್ಲಿ ನಕಲಿಸಲಾಗಿದೆ. ಈ ಬಗ್ಗೆ ಹಿಂಸಾಚಾರ ನಡೆದ ಮರುದಿನವೆ ಎಸ್‍ಡಿಪಿಐ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸಿತ್ತು. ಎನ್‍ಐಎ ತನಿಖೆಯನ್ನು ಗಮನಿಸಿದರೆ ಕೆಲವು ನಿಷ್ಪಕ್ಷ ತನಿಖಾಧಿಕಾರಿಗಳ ಮೇಲೆ ನಿರ್ದಿಷ್ಟ ಪಕ್ಷ ಮತ್ತು ಸಮುದಾಯವನ್ನು ತೇಜೋವಧೆ ಮಾಡುವ ರೀತಿಯಲ್ಲಿ ವರದಿ ಮಾಡುವಂತೆ ಒತ್ತಡ ಹೇರಿರುವುದು ಸ್ಪಷ್ಟವಾಗುತ್ತದೆ. ಆದುದರಿಂದ, ನಮ್ಮ ಪಕ್ಷ ನಿರಪರಾಧಿಗಳ ಪರ ಕಾನೂನಾತ್ಮಕ ಹೋರಾಟದಲ್ಲಿ ಮುಂಚೂಣಿಯಲ್ಲಿ ಮುಂದುವರೆಯಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಬಿಬಿಎಂಪಿ ಸದಸ್ಯ ಮುಜಾಹಿದ್ ಪಾಷ, ಎಸ್‍ಡಿಪಿಐ ರಾಜ್ಯ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್, ಬೆಂಗಳೂರು ಜಿಲ್ಲಾ ಉಪಾಧ್ಯಕ್ಷ ಎಚ್.ಎಂ.ಗಂಗಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X