ಪುಣೆಯಲ್ಲಿ ಏಕದಿನ ಸರಣಿಗೆ ಹಸಿರು ನಿಶಾನೆ, ಪ್ರೇಕ್ಷಕರಿಗೆ ಅವಕಾಶ ನಿರಾಕರಣೆ

ಮುಂಬೈ: ಮಹಾರಾಷ್ಟ್ರ ಸರಕಾರವು ಪುಣೆಯಲ್ಲಿ ನಿಗದಿಯಾಗಿರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಹಸಿರು ನಿಶಾನೆ ತೋರಿದೆ, ಆದರೆ, ರಾಜ್ಯದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂನೊಳಗೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ನಿರಾಕರಿಸಿದೆ.
ಏಕದಿನ ಸರಣಿಯು ಬೇರೆಡೆಗೆ ಸ್ಥಳಾಂತರವಾಗಲಿದೆ ಎಂಬ ವದಂತಿ ಹರಡಿತ್ತು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವಿಕಾಸ್ ಕಾಕಾಟ್ಕರ್ ನಡುವಿನ ಸಭೆಯ ಬಳಿಕ ಪಂದ್ಯವನ್ನು ನಡೆಸಲು ಅನುಮತಿ ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಈಗ ಹೆಚ್ಚುತ್ತಿರುವ ಕೋವಿಡ್ ಕೇಸ್ ಗಳ ಗಂಭೀರತೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಗೌರವಾನ್ವಿತ ಗೃಹ ಸಚಿವರ ಸಲಹೆಯ ಮೇರೆಗೆ ಪ್ರೇಕ್ಷಕರಿಲ್ಲದೆ ಏಕದಿನ ಪಂದ್ಯಗಳನ್ನು ನಡೆಸಲು ಅನುಮತಿ ಲಭಿಸಿದೆ ಎಂದು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ತಿಳಿಸಿದೆ.
ಭಾರತ-ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯು ಮಾರ್ಚ್ 23, 26 ಹಾಗೂ 28ರಂದು ನಿಗದಿಯಾಗಿದೆ.
Next Story





