Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತದ ಔಷಧೋದ್ಯಮ 3 ವರ್ಷದಲ್ಲಿ...

ಭಾರತದ ಔಷಧೋದ್ಯಮ 3 ವರ್ಷದಲ್ಲಿ ಸ್ವಾವಲಂಬಿ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ27 Feb 2021 11:04 PM IST
share
ಭಾರತದ ಔಷಧೋದ್ಯಮ 3 ವರ್ಷದಲ್ಲಿ ಸ್ವಾವಲಂಬಿ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ಬೆಂಗಳೂರು, ಫೆ.27: ಎಲ್ಲ ನಮೂನೆಯ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿ ಮುಂದಿನ 3 ವರ್ಷಗಳಲ್ಲಿ ದೇಶವನ್ನು ಸಂಪೂರ್ಣ ಸ್ವಾವಲಂಬಿ ಮಾಡಬೇಕು ಎಂಬ ಗುರಿಯೊಂದಿಗೆ ಕೇಂದ್ರ ಸರಕಾರವು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಶನಿವಾರ ನಗರದ ಆರ್.ಆರ್.ಇನ್ಸಿಟಿಟ್ಯೂಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತವು ಜನರಿಕ್ ಮೆಡಿಸಿನ್ ಉತ್ಪಾದನೆಯಲ್ಲಿ ಜಾಗತಿಕವಾಗಿ ಮೂರನೇ ಸ್ಥಾನವನ್ನು ಹೊಂದಿದೆ. ಕೋವಿಡ್ ಸಂದರ್ಭದಲ್ಲಿ ಜಗತ್ತಿನ 120 ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್, ಪ್ಯಾರಾಸಟಮಾಲ್ ಮುಂತಾದ ಮಾತ್ರೆಗಳನ್ನು ಪೂರೈಸಿದೆವು. ಆದರೆ, ಬಹುತೇಕ ಔಷಧ ಉತ್ಪಾದನೆಗೆ ಬೇಕಾಗುವ ಮೂಲ ರಾಸಾಯನಿಕಗಳಿಗಾಗಿ(ಎಪಿಐ, ಕೆಎಸ್‍ಎಂ ಮುಂತಾದವು) ನಾವು ಚೀನಾ ಮತ್ತಿತರ ದೇಶಗಳ ಮೇಲೆ ಅವಲಂಬಿತವಾಗಿದ್ದೇವೆ ಎಂದು ಅವರು ಹೇಳಿದರು.

ಇದರಲ್ಲಿ ಸ್ವಾವಲಂಬನೆ ಸಾಧಿಸಲು ದೇಶದ ಬೇರೆ ಬೇರೆ ಭಾಗಗಳಲ್ಲಿ ಮೂರು ಬಲ್ಕ್ ಡ್ರಗ್ ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುತ್ತಿದೆ. ಅದೇ ರೀತಿ ಶೇ.85ರಷ್ಟು ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶದಲ್ಲಿಯೇ ಇವನ್ನು ತಯಾರಿಸುವ ಉದ್ದೇಶದಿಂದ ನಾಲ್ಕು ಮೆಡಿಕಲ್ ಡಿವೈಸ್ ಪಾರ್ಕುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇವೆಲ್ಲ ಪೂರ್ಣಪ್ರಮಾಣದಲ್ಲಿ ಫಲ ನೀಡಲು ಇನ್ನೂ ಮೂರು ವರ್ಷ ಬೇಕು ಎಂದು ಅವರು ಹೇಳಿದರು.

ಈಚೆಗೆ ಮಂಡಿಸಿದ ಬಜೆಟ್ ನಲ್ಲಿ ವಿವಿಧ ವಲಯಗಳ ಉತ್ತೇಜನಕ್ಕಾಗಿ 1.9 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ. ಇದರಲ್ಲಿ ತಾವು ನಿರ್ವಹಿಸುವ ಔಷಧ ಇಲಾಖೆಗೆ 50 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಸದಾನಂದಗೌಡ ತಿಳಿಸಿದರು.

ಪ್ರತಿಯೊಬ್ಬ ಬಡವರಿಗೂ ಕೈಗೆಟಕುವ ದರದಲ್ಲಿ ಔಷಧೋಪಚಾರ ದೊರೆಯುವಂತೆ ಮಾಡಲು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಹಾಗೂ ಆಯುಷ್ಮಾನ್ ಭಾರತದಂತಹ ಯೋಜನೆಗಳನ್ನು ರೂಪಿಲಾಯಿತು. ಜನೌಷಧಿ ಮೆಡಿಸಿನ್ ಬಾಸ್ಕೆಟ್‍ನಲ್ಲಿ 1439 ನಮೂನೆಯ ಔಷಧಗಳು ಹಾಗೂ 235 ಬಗೆಯ ವೈದ್ಯಕೀಯ ಉಪಕರಣಗಳು ಲಭ್ಯವಿವೆ. ಇದುವರೆಗೆ ದೇಶದ 734 ಜಿಲ್ಲೆಗಳಲ್ಲಿ 7500 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಹಾಗೆಯೇ ದೇಶದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲೂ ಬಡವರ ಅನುಕೂಲಕ್ಕಾಗಿ ಜನೌಷಧಿ ಕೆಂದ್ರಗಳು ಇರಬೇಕು ಎಂಬುದು ಕೇಂದ್ರ ಸರಕಾರದ ಇಚ್ಛೆಯಾಗಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲೂ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕು ಎಂದು ಕೋರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಸದಾನಂದ ಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಆರ್.ಆರ್.ಕಾಲೇಜು ಕಂಪ್ಯೂಟರ್ ವಿಭಾಗದವರು ಅಭಿವೃದ್ಧಿಪಡಿಸಿರುವ “ಬ್ಲಡ್ ಡೋನರ್ಸ್” ಆ್ಯಪ್ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ರಾಜಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದಾಸರಹಳ್ಳಿ ಮಾಜಿ ಶಾಸಕ ಎಸ್.ಮುನಿರಾಜು, ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ರಾಘವೇಂದ್ರ, ಅಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X