Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಡಿತರ ಸೌಲಭ್ಯಕ್ಕೂ ಆಪತ್ತು: ಪಡಿತರದಾರರ...

ಪಡಿತರ ಸೌಲಭ್ಯಕ್ಕೂ ಆಪತ್ತು: ಪಡಿತರದಾರರ ಪ್ರಮಾಣ ಕುಗ್ಗಿಸಲು ನೀತಿ ಆಯೋಗ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ28 Feb 2021 11:31 PM IST
share
ಪಡಿತರ ಸೌಲಭ್ಯಕ್ಕೂ ಆಪತ್ತು: ಪಡಿತರದಾರರ ಪ್ರಮಾಣ ಕುಗ್ಗಿಸಲು ನೀತಿ ಆಯೋಗ ಶಿಫಾರಸು

ಹೊಸದಿಲ್ಲಿ, ಫೆ.28: ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಗೆ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದ ಜನರ ಪ್ರಮಾಣವನ್ನು ಕಡಿತಗೊಳಿಸುವ ಮೂಲಕ ಸಬ್ಸಿಡಿಯಲ್ಲಿ ವಾರ್ಷಿಕ ಸುಮಾರು 47,229 ಕೋಟಿ ರೂ. ಉಳಿತಾಯ ಮಾಡಬಹುದು ಎಂದು ಸರಕಾರದ ಚಿಂತಕರ ವೇದಿಕೆ ನೀತಿ ಆಯೋಗ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.

ದೇಶದ ಒಟ್ಟು ಜನಸಂಖ್ಯೆಯ 67% ಜನರು ಈಗ ಆಹಾರ ಭದ್ರತಾ ಕಾಯ್ದೆಯ (ಪಡಿತರ ಆಹಾರ ಪೂರೈಕೆ ವ್ಯವಸ್ಥೆ) ವ್ಯಾಪ್ತಿಯಲ್ಲಿದ್ದಾರೆ. ಈ ಯೋಜನೆಯಡಿ ಈಗ ಗ್ರಾಮೀಣ ಪ್ರದೇಶದ 75% ಜನರು ಬರುತ್ತಿದ್ದು ಈ ಪ್ರಮಾಣವನ್ನು 60%ಕ್ಕೆ ಕಡಿಮೆಗೊಳಿಸಬೇಕು ಮತ್ತು ನಗರ ಪ್ರದೇಶದಲ್ಲಿ ಈಗ 50% ಜನರು ಕಾಯ್ದೆಯ ವ್ಯಾಪ್ತಿಯಲ್ಲಿದ್ದು ಇದನ್ನು 40%ಕ್ಕೆ ಇಳಿಸಬಹುದು ಎಂದು ನೀತಿ ಆಯೋಗದ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

ಆಹಾರ ಭದ್ರತಾ ಕಾಯ್ದೆಯಡಿ, ದೇಶದ ಕಡುಬಡವರಿಗೆ ಇರುವ ‘ಅಂತ್ಯೋದಯ ಅನ್ನಯೋಜನೆಯ’ ಪ್ರತೀ ಕುಟುಂಬದವರಿಗೆ ತಿಂಗಳಿಗೆ 35 ಕಿ.ಗ್ರಾಂ ಆಹಾರ ಧಾನ್ಯ ಒದಗಿಸಲಾಗುತ್ತಿದೆ. 2021ರ ಫೆಬ್ರವರಿ 1ರ ದಿನಾಂಕದಂತೆ ಸುಮಾರು 9.01 ಕೋಟಿ ಜನತೆ ಈ ಯೋಜನೆಯ ಫಲಾನುಭವಿಗಳು. ಉಳಿದಂತೆ ಪಡಿತರ ಚೀಟಿ ಹೊಂದಿದ ಸುಮಾರು 70.35 ಕೋಟಿ ಜನತೆಗೆ ಕುಟುಂಬದ ಪ್ರತೀ ಸದಸ್ಯನಿಗೆ ತಿಂಗಳಿಗೆ 5 ಕಿ.ಗ್ರಾಂ ಆಹಾರ ಧಾನ್ಯ ದೊರಕುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಗೆ ಬರುವ ಗ್ರಾಮೀಣ ಮತ್ತು ನಗರ ನಿವಾಸಿಗಳ ಪ್ರಮಾಣವನ್ನು 75:50 ಎಂದು ಈ ಹಿಂದಿನ ಯೋಜನಾ ಆಯೋಗ ನಿಗದಿಗೊಳಿಸಿತ್ತು. 2011-12ರಲ್ಲಿ ನಡೆಸಿದ್ದ ಸಮೀಕ್ಷೆಯನ್ನು ಆಧರಿಸಿ ಈ ಅನುಪಾತವನ್ನು ನಿಗದಿಗೊಳಿಸಲಾಗಿದೆ. ಇದೇ ಅನುಪಾತವನ್ನು ಈಗಲೂ ಅನುಸರಿಸಿದರೆ, ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಗೆ ಬರುವ ಜನರ ಸಂಖ್ಯೆ 89.52 ಕೋಟಿಗೆ ಹೆಚ್ಚಲಿದೆ(ಈಗ 81.35 ಕೋಟಿ). ಅನುಪಾತವನ್ನು ಕಡಿಮೆ ಮಾಡಿದರೆ(60:40ಕ್ಕೆ) ಆಗ ಫಲಾನುಭವಿಗಳ ಪ್ರಮಾಣ 71.62 ಕೋಟಿಗೆ ಇಳಿಯಲಿದೆ ಎಂದು ನೀತಿ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ದಶಕಗಳಲ್ಲಿ ಜನಸಂಖ್ಯೆಯಲ್ಲಿ ಆಗಿರುವ ಹೆಚ್ಚಳ ಮತ್ತು ಕಾಯ್ದೆಯ ವ್ಯಾಪ್ತಿಗೆ ಬರುವ ಫಲಾನುಭವಿಗಳ ಪ್ರಮಾಣ ಕಡಿಮೆಯಾದರೆ ಉಳಿತಾಯವಾಗುವ ಸಬ್ಸಿಡಿಯ ಹಣ ಮತ್ತು ಈ ಉಳಿಕೆ ಮೊತ್ತವನ್ನು ಇತರ ಮಹತ್ವದ (ಶಿಕ್ಷಣ, ಆರೋಗ್ಯ) ಅಭಿವೃದ್ಧಿ ಕಾರ್ಯಗಳಿಗೆ ಬಳಸುವ ಅವಕಾಶವನ್ನು ಗಮನಿಸಿ, ಗ್ರಾಮೀಣ-ನಗರ ಅನುಪಾತ ದರವನ್ನು ಈಗಿರುವ 75-50ರಿಂದ 60-40ಕ್ಕೆ ಇಳಿಸಲು ಶಿಫಾರಸು ಮಾಡಲಾಗಿದೆ . ನೀತಿ ಆಯೋಗದ ಸದಸ್ಯ ರಮೇಶ್ ಚಂದ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಮುಖ್ಯ ಆರ್ಥಿಕ ಸಲಹೆಗಾರರು, ಆಹಾರ ಇಲಾಖೆಯ ಕಾರ್ಯದರ್ಶಿ, ಅಂಕಿಅಂಶ ಮತ್ತು ಯೋಜನೆ ಅನುಷ್ಟಾನ ಸಚಿವಾಲಯದ ಕಾರ್ಯದರ್ಶಿ ಪಾಲ್ಗೊಂಡಿದ್ದರು ಎಂದು ವರದಿ ತಿಳಿಸಿದೆ.

ಹೊಸ ಶಿಫಾರಸನ್ನು ಪರಿಗಣಿಸಿದರೆ, ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯಿಂದ ಹೊರಗೆ ಉಳಿಯುವ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ನೀತಿ ಆಯೋಗವನ್ನು ಕೇಳಿಕೊಂಡಿದೆ. ಆದರೆ ಈ ಬದಲಾವಣೆಯನ್ನು ಅನುಷ್ಟಾನಗೊಳಿಸಬೇಕಿದ್ದರೆ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆಯಬೇಕಾಗುತ್ತದೆ. ಬದಲಾವಣೆ ತರುವ ಅಧಿಕಾರ ಇಲಾಖೆಗೆ ಇಲ್ಲ ಎಂದು ಮೂಲಗಳು ಹೇಳಿವೆ.

ಬಾಕ್ಸ್:

ಶಾಂತಕುಮಾರ್ ಸಮಿತಿ ವರದಿ

  ಭಾರತದ ಆಹಾರ ನಿಗಮದ ಪಾತ್ರ ಮತ್ತು ಸ್ವರೂಪದ ಪುನರ್ರಚನೆಯ ಉದ್ದೇಶದಿಂದ ರಚಿಸಲ್ಪಟ್ಟಿದ್ದ ಶಾಂತಕುಮಾರ್ ಸಮಿತಿ 2015ರ ಜನವರಿಯಲ್ಲಿ ನೀಡಿದ್ದ ವರದಿಯಲ್ಲಿ ‘ಪಡಿತರ ಆಹಾರ ವ್ಯವಸ್ಥೆಯ ವ್ಯಾಪ್ತಿಗೆ ಬರುವ ಜನರ ಪ್ರಮಾಣವನ್ನು 40%ಕ್ಕೆ ಕಡಿಮೆಗೊಳಿಸುವ (ಈಗ 67%) ಅಗತ್ಯವಿದೆ ಎಂದು ಉಲ್ಲೇಖಿಸಿತ್ತು.

 ಸರಕಾರ ಈಗ ನೀಡುತ್ತಿರುವ 4,22,618 ಕೋಟಿ ರೂ. ಸಬ್ಸಿಡಿ ‘ನಿರ್ವಹಿಸಲಾಗದಷ್ಟು ಬೃಹತ್ ಮೊತ್ತವಾಗಿದೆ’ ಎಂದು 2020-21ರ ಆರ್ಥಿಕ ಸಮೀಕ್ಷೆಯ ವರದಿಯಲ್ಲೂ ಉಲ್ಲೇಖಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X