Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ವಿಕಲಚೇತನರ ಪುನರ್‌ ಸರ್ವೇ:...

ರಾಜ್ಯದಲ್ಲಿ ವಿಕಲಚೇತನರ ಪುನರ್‌ ಸರ್ವೇ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ1 March 2021 1:52 PM IST
share
ರಾಜ್ಯದಲ್ಲಿ ವಿಕಲಚೇತನರ ಪುನರ್‌ ಸರ್ವೇ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಮಾ.1: ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿಖರವಾಗಿ ಅಂಕಿ ಅಂಶಗಳನ್ನು ಕಲೆ ಹಾಕಲು ರಾಜ್ಯದಲ್ಲಿ ವಿಕಲಚೇತನರ ಪುನರ್‌ ಸರ್ವೇಗೆ ಸರಕಾರ ಚಿಂತನೆ ಮಾಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಇಂದು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶದಡಿ ವಿವಿಧ ಸವಲತ್ತುಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿಕಲಚೇತನರಿಗೆ ಒದಗಿಸಲಾಗುವ ವೈದ್ಯಕೀಯ ಸೌಲಭ್ಯದಲ್ಲಿ ನಿಯಮಿತ ಬದಲಾವಣೆ ಮಾಡಿ ಅರ್ಹರಿಗೆ ಸೌಲಭ್ಯ ಒದಗಿಸುವಂತಾಗಲು ವಿಭಿನ್ನ ರೀತಿಯ ವಿಕಲಚೇತನರ ನಿಖರವಾದ ಸಂಖ್ಯೆಯನ್ನು ಪಡೆಯುವ ನಿಟ್ಟಿನಲ್ಲಿ ಈ ಸರ್ವೇ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ದೊರಕಿ ಇಷ್ಟು ವರ್ಷಗಳಾದರೂ ಇನ್ನೂ ನಗರ ಪ್ರದೇಶದಲ್ಲೂ ಮನೆ, ಶೌಚಾಲಯ, ವಿದ್ಯುತ್ ಇಲ್ಲದಿರುವ ಮನೆಗಳಿರುವುದನ್ನು ಗುರುತಿಸಿ ಸಮಾಜದ ಕಟ್ಟಕಡೆಯ ಜನರಿಗೆ ಸೌಲಭ್ಯ ಒದಗಿಸುವುದು ಸರಕಾರದ ಜವಾಬ್ದಾರಿ ಅದಕ್ಕೆ ಒತ್ತು ನೀಡುವ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ವೇಗ ನೀಡುವ ಕಾರ್ಯವಾಗುತ್ತಿದೆ ಎಂದು ಹೇಳಿದ ಅವರು, ಮೇಯರ್ ಹಾಗೂ ಉಪ ಮೇಯರ್, ಸ್ಥಾಯಿ ಸಮಿತಿಯ ಅವಧಿಯು ಕೊನೆಯ ದಿನವಾದ ಇಂದು ಬಡತನ ನಿರ್ಮೂಲನಾ ಕೋಶದಡಿ ಸೌಲಭ್ಯಗಳನ್ನು ಒದಗಿಸುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಶೇ. 24.10ರ ಮೀಸಲು ನಿಧಿಯಡಿ 12 ಫಲಾನುಭವಿಗಳಿಗೆ ಒಟ್ಟು 4,11,216 ರೂ.ಗಳ ವಿತರಣೆ, ಶೇ. 7.25 ಮೀಸಲು ನಿದಿಯಡಿ 59 ಫಲಾನುಭವಿಗಳಿಗೆ 2,64,600 ರೂ.ಗಳ ಸವಲತ್ತುಗಳ ವಿತರಣೆ, ಶೇ. 5 ವಿಕಲಚೇತನ ಕಲ್ಯಾಣ ಕಾರ್ಯಕ್ರಮದಡಿ 688 ಮಂದಿಗೆ ಒಟ್ಟು 45,05,521 ರೂ. ಮೌಲ್ಯದ ವಿವಿಧ ಸಾಧನ, ಸಲಕರಣೆಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

ಮನಪಾ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುವ 32 ಪೌರ ಕಾರ್ಮಿಕರಿಗೆ ಹಕ್ಕುಪತ್ರವನ್ನೊಳಗೊಂಡು ಮನೆಯ ಕೀಯನ್ನು ಈ ಸಂದರ್ಭ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಮೇಯರ್ ದಿವಾಕರ ಪಾಂಡೇಶ್ವರ, ಉಪ ಮೇಯರ್ ವೇದಾವತಿ ಯಾನೆ ಜಾನಕಿ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮನಪಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಜಗದೀಶ್ ಶೆಟ್ಟಿ, ಪೂರ್ಣಿಮಾ, ಶರತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X