Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಅನುಗ್ರಹ’ ಯೋಜನೆ ಮರು ಜಾರಿಗೆ...

‘ಅನುಗ್ರಹ’ ಯೋಜನೆ ಮರು ಜಾರಿಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಹೋರಾಟ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 March 2021 3:55 PM IST
share
‘ಅನುಗ್ರಹ’ ಯೋಜನೆ ಮರು ಜಾರಿಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಹೋರಾಟ: ಸಿದ್ದರಾಮಯ್ಯ

ಬೆಂಗಳೂರು, ಮಾ.1: ಕುರಿಗಳು ಸತ್ತರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ ‘ಅನುಗ್ರಹ’ ಯೋಜನೆಯನ್ನು ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಹೋರಾಟ ನಡೆಸುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ನಗರದ ಮೌರ್ಯ ವೃತ್ತದಲ್ಲಿ ನಡೆಸಿದ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಳೆ, ಸಿಡಿಲು, ಪ್ರವಾಹ ಹಾಗೂ ಅಪಘಾತದಲ್ಲಿ ಕುರಿಗಳು ಸಾವಿಗೀಡಾದರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿತ್ತು.

ಕುರಿಗಳು ಮಾತ್ರವಲ್ಲ, ದನ ಮತ್ತು ಎಮ್ಮೆಗಳು ಸತ್ತರೆ ಹತ್ತು ಸಾವಿರ ರೂ.ಗಳ ಪರಿಹಾರ ನಿಡಲಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷಗಳಿಂದ ಯೋಜನೆ ಸ್ಥಗಿತಗೊಳಿಸಿದೆ. 30 ಕೋಟಿ ರೂ.ಗಳ ಬಾಕಿಯನ್ನೂ ಪಾವತಿ ಮಾಡಿಲ್ಲ. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದಾಗ ಮುಖ್ಯಮಂತ್ರಿಗೆ ಯೋಜನೆ ಹೆಸರೇ ತಿಳಿದಿರಲಿಲ್ಲ. ಅಧಿಕಾರಿಗಳು ಮಾಹಿತಿ ನೀಡಿದರೂ ಪ್ರಯೋಜನವಾಗಲಿಲ್ಲ ಎಂದರು.

 ಕುರುಬರ ಮಾತ್ರವಲ್ಲ, ಹಲವಾರು ಸಮುದಾಯದವರು ಕುರಿಗಳ ಸಾಕಣೆ ಮಾಡುತ್ತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ತೋಟದಲ್ಲಿ 500 ಕುರಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಕುರಿ ಸಾಕಣೆ ಒಂದು ಸಮುದಾಯಕ್ಕೆ ಈಗ ಸೀಮಿತವಾಗಿಲ್ಲ. ಕುರಿ ಸಾಕಣೆ ಎಂಬುದು ಬದುಕಿಗೆ ಒಂದು ದಾರಿ. ಒಂದು ಕುರಿಗೆ ಹತ್ತರಿಂದ ಇಪ್ಪತ್ತು ಸಾವಿರ ರೂ.ಗಳ ಮೌಲ್ಯವಿದೆ. ಆ ಕುರಿ ಸತ್ತರೆ ಕುರಿಗಾರರ ಬದುಕಿನ ದಾರಿಯೇ ಮುಚ್ಚಿ ಹೋಗುತ್ತದೆ. ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರಿಹಾರದ ಮೊತ್ತವನ್ನು ಹತ್ತು ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. 

ಕುರಿಗಳನ್ನು ಕಾಡಿನಲ್ಲಿ ಮೇಯಿಸಲು ಹಾಗೂ ಕಾಯಿಲೆ ಕಾಣಿಸಿಕೊಂಡಾಗ ಕುರಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ಮತ್ತು ಔಷಧ ನೀಡಲು ತಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಮಾಡಲಾಗಿತ್ತು. ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಳ ರಚನೆಯಾಗಿದ್ದೂ ನಮ್ಮ ಸರ್ಕಾರ ಇದ್ದಾಗ. ಅನುಗ್ರಹ ಯೋಜನೆಯನ್ನು ಸರ್ಕಾರ ಮತ್ತೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಮತ್ತೆ ತೀವ್ರ ಹೋರಾಟ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು.

ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಟಿ.ಬಿ.ಜಯಚಂದ್ರ ಮತ್ತಿತರರು ಪ್ರಧರಣಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X