Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಮುರುಗೇಶ್ ನಿರಾಣಿಯನ್ನು...

ಸಚಿವ ಮುರುಗೇಶ್ ನಿರಾಣಿಯನ್ನು ಪ್ರಶ್ನಿಸಿದ್ದಕ್ಕೆ ನೋಟಿಸ್ ಜಾರಿ: ಕಾರ್ಮಿಕರಿಂದ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ1 March 2021 11:16 PM IST
share
ಸಚಿವ ಮುರುಗೇಶ್ ನಿರಾಣಿಯನ್ನು ಪ್ರಶ್ನಿಸಿದ್ದಕ್ಕೆ ನೋಟಿಸ್ ಜಾರಿ: ಕಾರ್ಮಿಕರಿಂದ ತೀವ್ರ ಆಕ್ರೋಶ

ರಾಯಚೂರು, ಮಾ.1: ರಾಯಚೂರಿನ ಹಟ್ಟಿ ಚಿನ್ನದ ಕಂಪೆನಿಯಲ್ಲಿ ಕೆಲಸ ಮಾಡುವಾಗ ಸತ್ತವರ ಕುಟುಂಬಸ್ಥರಿಗೆ ಕೆಲಸ ನೀಡದಿರುವ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಅವರನ್ನು ಪ್ರಶ್ನಿಸಿದ ಬೆನ್ನಲ್ಲೇ ಹಟ್ಟಿ ಚಿನ್ನದ ಗಣಿ ಕಂಪೆನಿಯ ಆಡಳಿತ ಮಂಡಳಿಯು ಕಾರ್ಮಿಕರಿಗೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿಗೆ ಕಾರ್ಮಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.      

ಕಂಪನಿಯಲ್ಲಿನ ಅನ್ಯಾಯಗಳ ಕುರಿತು ಸಚಿವರನ್ನ ಪ್ರಶ್ನೆ ಮಾಡಿದ್ದ ಕಾರ್ಮಿಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇ ತಪ್ಪಾಯ್ತಾ? ಎಂದು ಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.

ಫೆ.26ರಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ರಾಯಚೂರಿನ ಹಟ್ಟಿ ಚಿನ್ನದ ಕಂಪೆನಿಗೆ ಭೇಟಿ ನೀಡಿದ್ದರು. ಈ ವೇಳೆ ಸಚಿವರನ್ನು ಮುತ್ತಿಗೆ ಹಾಕಿದ ಕಾರ್ಮಿಕರು, 'ನಾವು ಸತ್ತ ಮೇಲೆ ನಮ್ಮ ಕುಟುಂಬದವರು ಏನು ಮಾಡಬೇಕು? ಈ ಕಂಪೆನಿಯಲ್ಲಿ ಕೆಲಸ ಮಾಡುವಾಗ ಸತ್ತವರ ಕುಟುಂಬಸ್ಥರಿಗೆ ಕೆಲಸ ನೀಡಿಲ್ಲ. ಈ ರೀತಿ 60 ಜನ ಸಂತ್ರಸ್ತರಿದ್ದು, ಕಳೆದ ಮೂರು ವರ್ಷಗಳಿಂದ ಯಾರಿಗೂ ಕೆಲಸ ಕೊಟ್ಟಿಲ್ಲ. ನಾವು ಸತ್ತ ಮೇಲೆ ನಮ್ಮ ಕುಟುಂಬದವರು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದರು.

ಅಲ್ಲದೇ, ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸಚಿವರಿಗೆ ಘೇರಾವ್ ಹಾಕಲು ಯತ್ನಿಸಿದ್ದರು. ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು, ಜೊತೆಗೆ ಅನ್ಫಿಟ್ ಆದರೆ ಅವರ ಕಟುಂಬಸ್ಥರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿದ್ದ ಕಾರ್ಮಿಕರು, ಗಣಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ದೂರಿದ್ದರು.

ಇದೀಗ ಸಚಿವರು ಭೇಟಿ ನೀಡಿದ್ದ ವೇಳೆ ಗಣಿ ಆವರಣದಲ್ಲಿ ಗಲಾಟೆ ಮಾಡಲು ಮುಂದಾಗಿದ್ದಲ್ಲದೆ, ಮಾಧ್ಯಮಗಳ ಮುಂದೆ ಮಾತನಾಡಿದ್ದೀರಿ ಎಂದು ಹಲವು ಕಾರ್ಮಿಕರಿಗೆ ನೋಟಿಸ್ ನೀಡಿರುವ ಹಟ್ಟಿ ಚಿನ್ನದ ಗಣಿ ಕಂಪೆನಿಯ ಆಡಳಿತ ಮಂಡಳಿ, ಮೂರು ದಿನದೊಳಗೆ ನೋಟಿಸ್‍ಗೆ ಉತ್ತರಿಸುವಂತೆ ಸೂಚಿಸಿದೆ. ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದಕ್ಕೆ ಇದೆಂಥಾ ಶಿಕ್ಷೆ? ಎಂದು ನೋಟಿಸ್ ನೀಡಿದ್ದಕ್ಕೆ ಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X