Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ 150 ಐಟಿಐಗಳ ಅಭಿವೃದ್ಧಿಗೆ 5...

ರಾಜ್ಯದ 150 ಐಟಿಐಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ವೆಚ್ಚ: ಡಿಸಿಎಂ ಡಾ. ಅಶ್ವತ್ಥನಾರಾಯಣ

ಎಂಜಿನಿಯರಿಂಗ್ ಸಂಶೋಧನೆ-ಅಭಿವೃದ್ಧಿ ನೀತಿ-2021ʼ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ2 March 2021 4:22 PM IST
share
ರಾಜ್ಯದ 150 ಐಟಿಐಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ವೆಚ್ಚ: ಡಿಸಿಎಂ ಡಾ. ಅಶ್ವತ್ಥನಾರಾಯಣ

ಬೆಂಗಳೂರು: ಕೈಗಾರಿಕೆ ತರಬೇತಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ರಾಜ್ಯದಲ್ಲಿನ  150 ಐಟಿಐ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲು 5,000 ಕೋಟಿ ರೂ.ಗಳನ್ನು ರಾಜ್ಯ ಸರಕಾರ ವೆಚ್ಚ ಮಾಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ʼ ಯನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು; "ಕೇವಲ ಅಕೆಡಿಮಿಕ್‌ ಶಿಕ್ಷಣಕ್ಕೆ ಒತ್ತು ಕೊಡುವುದಲ್ಲ, ಕೈಗಾರಿಕೆ ಹಾಗೂ ಪ್ರಗತಿಗೆ ಪೂರಕವಾದ ಕೈಗಾರಿಕಾ ತರಬೇತಿ ಶಿಕ್ಷಣಕ್ಕೆ ಸರಕಾರ ಮಹತ್ವ ಕೊಡುತ್ತಿದೆ. ಆ ಮೂಲಕ ಕೈಗಾರಿಕೆಗಳಿಗೆ ಕುಶಲತೆಯುಳ್ಳ ಮಾನವ ಸಂಪನ್ಮೂಲವನ್ನು ಸ್ಥಳೀಯವಾಗಿಯೇ ಒದಗಿಸುವುದು ಗುರಿಯಾಗಿದೆ. ಜ್ಞಾನ ಮತ್ತು ಕುಶಲತೆಯಷ್ಟೇ ನಮ್ಮ ಭವಿಷ್ಯವಾಗಿದೆ. ಈ ಅಂಶವನ್ನು ದೃಷ್ಟಿಯಲ್ಲಿಟ್ಟುಕೊಂಡು ಇಷ್ಟು ಮೊತ್ತ ದಷ್ಟು ಹಣವನ್ನು ಐಟಿಐ ಸಂಸ್ಥೆಗಳಿಗಾಗಿ ವೆಚ್ಚ ಮಾಡಲಾಗುತ್ತಿದೆ" ಎಂದರು.

ಒಂದೆಡೆ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ನ್ನು ರೂಪಿಸಿರುವ ಬೆನ್ನಲ್ಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಜಾರಿಗೆ ಬರುತ್ತಿದೆ. ಈ ಮೂಲಕ ಇಡೀ ಶಿಕ್ಷಣ ವ್ವವಸ್ಥೆಯೇ ಆಮೂಲಾಗ್ರವಾಗಿ ಬದಲಾವಣೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು.

'ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ'

ಹೊಸ ಐಟಿಐ ಸಂಸ್ಥೆಗಳ ಸ್ಥಾಪನೆಯೂ ಸೇರಿದಂತೆ ಈಗಾಗಲೇ ಇರುವ ಎಲ್ಲ ಐಟಿಐಗಳನ್ನು ಜಾಗತಿಕ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲಾ ಗುವುದು. ಗುಣಮಟ್ಟದ ಬೋಧನೆ-ಕಲಿಕೆಯ ಉದ್ದೇಶವಿಟ್ಟುಕೊಂಡು ಈ ಪ್ರಯತ್ನ ಕೈಗೊಳ್ಳಲಾಗಿದೆ. ಭಾರತೀಯ ಕುಶಲತೆ ಮಾನದಂಡಕ್ಕೆ ತಕ್ಕಂತೆ ಇವೆಲ್ಲ ಮರುರೂಪ ಪಡೆಯಲಿವೆ. ಕೇವಲ ಶೈಕ್ಷಣಿಕ ಸಂಸ್ಥೆಗಳಾಗಿಯೇ ಇವು ಉಳಿದರೆ ಉದ್ಯಮ ಕ್ಷೇತ್ರಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಎಂಜಿನಿಯರಿಂಗ್‌ ಇಂಟರ್ನ್‌ಶಿಪ್‌ ಅವಧಿ ಹೆಚ್ಚಳ

ಉಳಿದಂತೆ ದಿಪ್ಲೊಮೋ ತರಗತಿಗಳ ಪಠ್ಯವನ್ನು ಆಮೂಲಾಗ್ರವಾಗಿ ಪರಿಷ್ಕರಣೆ ಮಾಡಲಾಗಿದೆ. ಈಗಾಗಲೇ ಮೊದಲ ವರ್ಷದ ವಿದ್ಯಾರ್ಥಿಗಳು ಪರಿಷ್ಕೃತ ಪಠ್ಯದಲ್ಲೇ ಕಲಿಯುತ್ತಿದ್ದಾರೆ. ಇನ್ನು ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಇಂಟರ್ನ್‌ ‌ಶಿಪ್‌ ಅವಧಿ 9 ತಿಂಗಳಿನಿಂದ 1 ವರ್ಷಕ್ಕೆ ವಿಸ್ತರಿಸಿ, ಅದನ್ನು ಕೈಗಾರಿಕೆಗಳಲ್ಲಿಯೇ ಮುಗಿಸುವ ಯೋಜನೆ ರೂಪಿಸಲಾಗಿದೆ. ಇದು ಕಡ್ಡಾಯವೂ ಹೌದು.  ವಿದ್ಯಾರ್ಥಿಗಳ ಇಂಟರ್ನ್‌ ‌ಶಿಪ್ ‌ಗೆ ಉದ್ಯಮಿಗಳು ಮುಕ್ತವಾಗಿ ಅವಕಾಶ ನೀಡಬೇಕು ಎಂದು ಡಿಸಿಎಂ ಕೋರಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಡಾ.ಅಶ್ವತ್ಥನಾರಾಯಣ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಮೊದಲ ಸ್ಥಾನದಲ್ಲೂ ಇದೆ. ಈ ಹಿನ್ನೆಲೆಯಲ್ಲಿ ʼಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021ʼ ಯನ್ನು ರೂಪಿಸಿ ಲೋಕಾರ್ಪಣೆ ಮಾಡಲಾಗಿದೆ ಎಂದರು.

ರಾಜ್ಯದ್ದು ಶೇ.40ರಷ್ಟು ಪಾಲು

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ರಾಜ್ಯದ ಪಾಲು ಶೇ.40ರಷ್ಟು, ಅಂದರೆ; ದೇಶದಲ್ಲಿ ವಾರ್ಷಿಕ 30 ಶತಕೋಟಿ ಡಾಲರ್‌ ವಹಿವಾಟು ನಡೆಯುತ್ತಿದೆ. ಅದನ್ನು 100 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಹೆಗ್ಗುರಿಯೂ ಸರಕಾರಕ್ಕಿದೆ ಎಂದ ಡಿಸಿಎಂ, ವೈಮಾಂತರಿಕ್ಷ ಮತ್ತು ರಕ್ಷಣೆ, ವಾಹನ-ವಾಹನ ಬಿಡಿಭಾಗಗಳು-ವಿದ್ಯುತ್ ಚಾಲಿತ ವಾಹನ, ಜೈವಿಕ ತಂತ್ರಜ್ಞಾನ, ಔಷಧ ಮತ್ತು ವೈದ್ಯಕೀಯ ಉಪಕರಣ-ಸಾಧನಗಳು, ಅರೆ ವಾಹಕಗಳು, ದೂರಸಂಪರ್ಕ, ಎಲೆಕ್ಟ್ರಾನಿಕ್‌ ವ್ಯವಸ್ಥೆ ಮತ್ತು ಅಭಿವೃದ್ಧಿ ನಿರ್ವಹಣೆ (ಇ.ಎಸ್.ಡಿ.ಎಂ.) ಹಾಗೂ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಇದಕ್ಕೆ ಪೂರಕವಾಗಿ ಹೊಸ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದರು. 

ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಕಲ್ಪನೆಯಂತೆ ಈ ನೀತಿ ರೂಪುಗೊಂಡಿದೆ. ನಮಗೆ ಅಗತ್ಯವಾದ ಎಲ್ಲ ವಸ್ತುಗಳನ್ನು ನಮ್ಮಲ್ಲಿಯೇ ಉತ್ಪಾದನೆ ಮಾಡಿಕೊಳ್ಳುವ ಕಾರ್ಯಕ್ರಮ ಇದು. ಎಲ್ಲ ಕ್ಷೇತ್ರದಲ್ಲಿ ಸ್ವಾವಲಂಭನೆ ಸಾಧಿಸಬೇಕು ಎಂಬುದು ಗುರಿಯಾಗಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X