Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ...

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ: ಸಚಿವ ಕೆಎಸ್.ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ2 March 2021 5:14 PM IST
share
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ: ಸಚಿವ ಕೆಎಸ್.ಈಶ್ವರಪ್ಪ

ಶಿವಮೊಗ್ಗ : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗಳಿಸಲಿದ್ದು, ಗೆಲುವಿನ ನಾಗಲೋಟವನ್ನು ಕಾಯ್ದುಕೊಳ್ಳಲಿದೆ ಎಂದು ಸಚಿವ ಕೆಎಸ್.ಈಶ್ವರಪ್ಪ ಹೇಳಿದರು.

ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ವತಿಯಿಂದ ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಾಗೂ ಸ್ಪರ್ಧಿಸಿ ದವರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಕ್ಷದ ಕಾರ್ಯಕರ್ತರ ಶ್ರಮದಿಂದ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 50ರಲ್ಲಿ 39 ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಗದ್ದುಗೆಯೇರಿದ್ದಾರೆ ಎಂದರು.

ಮೈಸೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್‌ನ ನಾಯಕರ ನಡುವೆ ಗುದ್ದಾಟ ಶುರುವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರನ್ನು ಕಳುಹಿಸುವ ಪರಿಸ್ಥಿತಿಯುಂಟಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದವರು ಜನರ ಋಣ ತೀರಿಸಬೇಕು. ಜನ ಪ್ರತಿನಿಧಿಗಳು ಸಿಟ್ಟಾಗಬಾರದು. ಸೋತವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮಗಳ ಅಭಿವೃದ್ಧಿ ಮಾಡಿ, ಮುಂದಿನ ಚುನಾವಣೆಯಲ್ಲೂ ಮತ್ತೆ ಆಯ್ಕೆಯಾಗಬೇಕು. ಇದಕ್ಕಾಗಿ ಹೆಚ್ಚಿನ ಅನುದಾನ ಪಡೆಯಲು ಸಂಸದರು, ಶಾಸಕರ ಬೆನ್ನು ಹತ್ತಿ ಎಂದು ಕಿವಿಮಾತು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಯೋಜನೆಯಡಿ ಗ್ರಾಮ ಪಂಚಾಯತ್‌ಗಳಿಗೆ ಅನುದಾನ ಬರುತ್ತದೆ. ಸ್ಥಳೀಯ ಗ್ರಾಮ ಪಂಚಾಯತ್ ನಿಂದಲೂ ತೆರಿಗೆ ಸಂಗ್ರಹವಾಗುತ್ತದೆ. ಇದರ ಬಳಕೆಯಾವ ರೀತಿ ಮಾಡಬೇಕು ಮತ್ತು ಅನುದಾನ ಯಾವ ರೀತಿ ತರಬೇಕು ಎಂಬ ವಿಷಯದಲ್ಲಿ ಗೆದ್ದ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧ್ಯಕ್ಷ, ಉಪಾಧ್ಯಕ್ಷರಿಗೆ ರಾಜ್ಯದ ಒಟ್ಟ ೨೮೫ ಕೇಂದ್ರಗಳಲ್ಲಿ ತರಬೇತಿ ನೀಡಲಾಗುವುದು. ಒಂದು ಕೇಂದ್ರದಲ್ಲಿ ೪೦ ಜನರಿಗೆ ಅವಕಾಶವಿದೆ. ತರಬೇತಿಯನ್ನು ತಪ್ಪಿಸಿಕೊಳ್ಳಬೇಡಿ ಎಂದರು.

ಶೌಚಾಲಯ ನಿರ್ಮಾಣಕ್ಕೆ ಮೊದಲ ಆದತೆ ನೀಡಿ, ಶಾಲಾ ಮೈದಾನ, ಅಂಗನವಾಡಿ ರಿಪೇರಿ, ಕಾಂಪೌಂಡ್ ನಿರ್ಮಾಣಕ್ಕೆ ಸರ್ಕಾರ ಹಣ ನೀಡುತ್ತದೆ. ಅದನ್ನು ಬಳಸಿಕೊಳ್ಳಿ ಮೊದಲ ಆಧ್ಯತೆ ಶೌಚಾಲಯ ನಿರ್ಮಾಣಕ್ಕೆ ಕೊಡಿ. ಗ್ರಾಮದ ಯಾವೊಬ್ಬ ಹೆಣ್ಣು ಮಕ್ಕಳು ಶೌಚಾಲಯವನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಇರಬಾರದು. ಅದರ ಜೊತೆಗೆ ಪಕ್ಷ ಸಂಘಟನೆಗೆ ಮತ್ತು ಪಕ್ಷದ ಕೆಲಸಕ್ಕೆ ಆದ್ಯತೆ ನೀಡಿ ಎಂದರು.

ಶಾಸಕ ಕೆ.ಬಿ. ಅಶೋಕ್ ನಾಯ್ಕ ಮಾತನಾಡಿ, ಕಟ್ಟಡಕ್ಕೆ ತಳಪಾಯ ಗಟ್ಟಿಇರುವ ರೀತಿಯಲ್ಲಿಯೇ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮುಂದಿನ ಎಲ್ಲಾ ಚುನಾವಣೆಯಲ್ಲೂ ಗೆಲವು ಸಾದಿಸಬಹುದು. ಇತ್ತೀಚಿನ ಚುನಾವಣೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದ್ದು, ಸರ್ಕಾರದ ಎಲ್ಲಾ ಯೋಜನೆಗಳನ್ನು ನಾಗರೀಕರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಬಿಜೆಪಿ ಪ್ರಮುಖರಾದ ಭಾನು ಪ್ರಕಾಶ್, ಕೆ.ಜಿ. ಕುಮಾರಸ್ವಾಮಿ,  ಪವಿತ್ರಾ ರಾಮಯ್ಯ, ಸಿದ್ರಾಮಣ್ಣ, ಜ್ಯೋತಿ ಪ್ರಕಾಶ್, ಕೆ.ಇ. ಕಾಂತೇಶ್, ಗೀತಾ ಜಯಶೇಖರ್ ಮೊದಲಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X