ಕಂಬಳ ಕ್ರೀಡಾ ಸಂಸ್ಥೆಗಳ ವಿವರ ಸಲ್ಲಿಸಲು ಸೂಚನೆ
ಉಡುಪಿ ಮಾ.2: ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜಾನಪದ ವೈಭವಕ್ಕೆ ಮೆರುಗು ನೀಡಿ ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಕಳಸ ಪ್ರಾಯ ಕ್ರೀಡೆಯಾಗಿರುವ ಕಂಬಳ ಕ್ರೀಡೆಯನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿ ಪ್ರತಿಬಿಂಬಿಸುವ ನಿಟ್ಟಿನಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಸಂಸ್ಥೆಗಳ ವಿವರವನ್ನು ಸಂಗ್ರಹಿಸಿ, ಸರಕಾರಕ್ಕೆ ಮಾಹಿತಿ ಸಲ್ಲಿಸಲು ನಿರ್ಧರಿಸಲಾಗಿದೆ.
ಆದ್ದರಿಂದ ಜಿಲ್ಲೆಯಲ್ಲಿ ಇಡೀ ಜನ ಸಮುದಾಯವನ್ನು ಸಾಂಸ್ಕೃತಿಕವಾಗಿ ಒಗ್ಗೂಡಿಸಿ ಕಂಬಳ ಕ್ರೀಡೆಯನ್ನು ಪ್ರಚಾರ ಮಾಡುತ್ತಿರುವ ಸಂಘ ಸಂಸ್ಥೆಗಳು ತಮ್ಮ ಸಂಪೂರ್ಣ ವಿವರಗಳನ್ನು ಮಾ.6ರೊಳಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 9480201994 ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





