Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಂತ್ರಜ್ಞಾನ ಬಳಕೆ ಜೊತೆಗೆ ಸುರಕ್ಷತೆಗೂ...

ತಂತ್ರಜ್ಞಾನ ಬಳಕೆ ಜೊತೆಗೆ ಸುರಕ್ಷತೆಗೂ ಒತ್ತು ನೀಡಿ: ಡಿಸಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ5 March 2021 8:32 PM IST
share
ತಂತ್ರಜ್ಞಾನ ಬಳಕೆ ಜೊತೆಗೆ ಸುರಕ್ಷತೆಗೂ ಒತ್ತು ನೀಡಿ: ಡಿಸಿ ಜಿ.ಜಗದೀಶ್

ಉಡುಪಿ, ಮಾ.5: ದೈನಂದಿನ ಕಾರ್ಯಗಳಲ್ಲಿ ತಂತ್ರಜ್ಞಾನದ ಬಳಕೆಯ ಜೊತೆಗೆ ಅವುಗಳ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣ ದಲ್ಲಿ ಶುಕ್ರವಾರ ಆಡಳಿತ ತರಬೇತಿ ಸಂಸ್ಥೆ, ಇ-ಆಡಳಿತ ಕೇಂದ್ರ ಬೆಂಗಳೂರು, ಇ-ಆಡಳಿತ ದತ್ತಾಂಶ ಕೇಂದ್ರ ಮೈಸೂರು ಇವರ ಸಹಯೋಗದೊಂದಿಗೆ ಸಾಮರ್ಥ್ಯ ಸಂಘಟನೆ ಯೋಜನೆ ಅಡಿಯಲ್ಲಿ ನಡೆದ ಸೈಬರ್ ಸೆಕ್ಯೂರಿಟಿ ಮತ್ತು ಇ- ಆಡಳಿತ ವಿಷಯಗಳ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಾಹಿತಿ ತಂತ್ರಜ್ಞಾನದ ಬಳಕೆ ದೈನಂದಿನ ಜೀವನದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೆಲವರು ಇದರ ದುರುಪಯೋಗ ಪಡಿಸಿಕೊಂಡು ದೇಶದ ಯಾವುದೋ ಮೂಲೆಯಲ್ಲಿ ಕುಳಿತು ಅಮಾಯಕರ ಬ್ಯಾಂಕ್ ಖಾತೆಗಳಿಗೆ ಕನ್ನ, ಇ-ಮೇಲ್ ಐಡಿಗಳ ಹ್ಯಾಕ್, ಜಾಲತಾಣಗಳ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇವುಗಳಿಗೆ ಕಡಿವಾಣ ಹಾಕಲು ಸೈಬರ್ ಸೆಕ್ಯೂರಿಟಿಗಳ ಮಾಹಿತಿ ಹೊಂದಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಒಳ್ಳೆಯದು ಎಂದರು.

ಯಾವುದೇ ಓರ್ವ ಅಪರಿಚಿತ ವ್ಯಕ್ತಿಯ ಹೆಸರಿನಿಂದ ಮೇಲ್ ಅಥವಾ ಸಂದೇಶಗಳು ಬಂದರೆ ಅವುಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ತಪ್ಪಿದ್ದಲ್ಲಿ ಅವುಗಳ ತೆರೆಯುವಿಕೆಯಿಂದ ವೈರಸ್ ಹರಡಿ ದತ್ತಾಂಶಗಳು ಹಾಳಾಗುವ ಸಾಧ್ಯತೆ ಇರುತ್ತದೆ ಎಂದವರು ಎಚ್ಚರಿಸಿದರು. ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗೆ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸೈಬರ್ ಅಪರಾಧಿ ತಡೆ ತಾಣಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಇವು ತಾಲೂಕು ಗಳಿಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದರು. ಕಚೇರಿಯಲ್ಲಿ ಬಳಸುವ ಗಣಕ ಯಂತ್ರಗಳಿಗೆ ವೈರಸ್ ನಿರೋಧಕ ತಂತ್ರಾಂಶಗಳನ್ನು ತಪ್ಪದೇ ಅಳವಡಿಸಬೇಕು. ಈ ಬಗ್ಗೆ ನಿರ್ಲಕ್ಷ ತಾಳಬಾರದು ಎಂದರು.

ಸುರತ್ಕಲ್ ಎನ್‌ಐಟಿಕೆ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಲ್ವಿನ್ ರೋಶನ್ ಪಾಯಸ್ ಮಾತನಾಡಿ, ಆನ್‌ಲೈನ್‌ನಲ್ಲಿ ವ್ಯವಹಾರ ಹೆಚ್ಚಿದಂತೆ ಸುರಕ್ಷತೆ ಮತ್ತು ಜಾಗೃತಿ ಇಲ್ಲದೇ ಹಣ ಕಳೆದುಕೊಳ್ಳುತ್ತಿರುವವರು ಹೆಚ್ಚುತ್ತಿ ದ್ದಾರೆ. ಯಾವುದೋ ಉದ್ದೇಶಕ್ಕೆ ಇಟ್ಟುಕೊಂಡ ಹಣ ಕಳೆದುಕೊಂಡು ಅಮಾಯಕರಾಗಿ ಜನರು ಕಂಗಾಲಾಗುತ್ತಿದ್ದಾರೆ. ಕಳೆದುಕೊಂಡ ಹಣ ಮರಳಿ ಸಿಗುವುದು ತೀರ ವಿರಳ ಎಂದರು.

ವೆಬ್‌ಸೈಟ್‌ಗಳನ್ನು ರೂಪಿಸುವ ಸುರಕ್ಷತಾ ಕ್ರಮಗಳಿಗೂ ಹೆಚ್ಚಿನ ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಪೇಸ್‌ ಬುಕ್, ಇನ್‌ಸ್ಟಾಗ್ರಾಂಗಳಲ್ಲಿ ಪಾಸ್‌ವರ್ಡ್‌ಗಳನ್ನು ನಿರಂತರವಾಗಿ ಬದಲಾಯಿಸುತ್ತಿರುವುದು ಅತೀ ಅಗತ್ಯ ಎಂದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರು, ಮಂಗಳೂರು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವೆಂಕಟೇಶ್ ಜಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X