Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಂಚಕ್ಕೆ ಬೇಡಿಕೆ ಆರೋಪ: ಗಣಿ ಮತ್ತು ಭೂ...

ಲಂಚಕ್ಕೆ ಬೇಡಿಕೆ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಅಮಾನತು

ವಾರ್ತಾಭಾರತಿವಾರ್ತಾಭಾರತಿ5 March 2021 8:58 PM IST
share

ಬೆಂಗಳೂರು, ಮಾ.5: ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲಕರಿಗೆ ಲಂಚದ ಬೇಡಿಕೆ ಇಟ್ಟು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಇಂದು ಸೇವೆಯಿಂದ ಅಮಾನತು ಪಡಿಸಲಾಗಿದೆ.

ಗಮನಿಸಬೇಕಾದ ಅಂಶವೆಂದರೆ ಇದೇ ಆರೋಪದ ಮೇಲೆ ಎರಡು ವಾರಗಳ ಹಿಂದೆಯಷ್ಟೇ ಫಯಾಜ್ ಅಹಮ್ಮದ್ ಖಾನ್ ಎಂಬ ಭೂ ವಿಜ್ಞಾನಿಯನ್ನು ಸೇವೆಯಿಂದ ಅಮಾನತುಪಡಿಸಲಾಗಿತ್ತು. ಪ್ರಸ್ತುತ  ಬಿ.ಎಂ.ಲಿಂಗರಾಜು ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಮೇಲೆ ಆರೋಪ ಕೇಳಿಬಂದಿದ್ದರಿಂದ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು.

ಈ ಹಿಂದೆ ಬಾಗಲಕೋಟೆ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸ್ಟೋನ್ ಕ್ರಷರ್ ಮಾಲಕರು ಮತ್ತು ಸಾರ್ವಜನಿಕರಿಂದ ಲಂಚಕಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಎದುರಿಸುತ್ತಿದ್ದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯವರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿದ ವೇಳೆ ಬಿ.ಎಂ.ಲಿಂಗರಾಜು ಅವರ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲಕರು ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಚಿವರು ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಲಿಂಗರಾಜು ವಿರುದ್ಧ ತನಿಖೆ ನಡೆಸಿದ ವೇಳೆ ಗುಲ್ಬರ್ಗ ಜಿಲ್ಲೆ, ಸ್ಟೋನ್ ಕ್ರಷರ್ ಇಂಡಸ್ಟ್ರೀಸ್ ಅಸೋಸಿಯೇಷನ್‍ನಿಂದ ಹೆಚ್ಚುವರಿ ರಾಜಧನ ಪಡೆದಿರುವುದು ಸಾಬೀತಾಗಿದೆ.

ಇದೇ ರೀತಿ ಸುರಕ್ಷಿತ ವಲಯದ ಅಂತರ ಕಡಿಮೆಯಿದೆ ಎಂದು ನವೀಕರಣ ಅರ್ಜಿಯನ್ನು ತಿರಸ್ಕರಿಸಿ ಕೆ.ಎಸ್.ಕಂಕಲೆ ಎಂಬುವರಿಂದ 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿರುವುದು ಜಯದೇವ ಸ್ಟೋನ್ ಕ್ರಷರ್ ಅವರಿಂದ ಕ್ರಷರ್ ಘಟಕದ ನವೀಕರಣವನ್ನು, ಸುರಕ್ಷಿತವಲ್ಲದ ಕಾರಣ ನವೀಕರಣಕ್ಕೆ ಸಾಕಷ್ಟು ಸತಾಯಿಸಿ ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ.

ಲಿಂಗರಾಜು ಅವರಿಗೆ ದೊಡ್ಡ ಮಟ್ಟದ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಬ್ಯಾಂಕ್‍ನಿಂದ ಸಾಲ ಪಡೆದು ಆಸ್ತಿಪಾಸ್ತಿ ಮಾರಾಟ ಮಾಡಿ ಗುತ್ತಿಗೆದಾರರು ಆತ್ಮಹತ್ಯೆಗೆ ಪ್ರಯತ್ನಿಸಿರುವುದು ರುಜುವಾತಾಗಿದೆ. ಅಧಿಕೃತ ಖನಿಜ ಪರಾವನಿಗೆ ಇಲ್ಲದೆ ಕಟ್ಟಡ ಕಲ್ಲು, ಕಲ್ಲಿನ ಸಾಗಾಣಿಕೆ, ದಾಸ್ತಾನು ಮಾಡಿರುವ ಜಯದೇವ ಸ್ಟೋನ್ ಕ್ರಷರ್ ಇವರಿಗೆ ನೋಟಿಸ್ ಜಾರಿ ಮಾಡಿ ಲಿಂಗರಾಜು 13.17 ಲಕ್ಷ ರೂ.ದಂಡ ಪಾವತಿಸಲು ನೋಟಿಸ್ ಜಾರಿ ಮಾಡಿದ್ದರು.

ಜಯದೇವ ಸ್ಟೋನ್ ಕ್ರಷರ್ ಅನ್ನು ರದ್ದು ಮಾಡಿ ದುಬಾರಿ ದಂಡ ವಿಧಿಸಿರುವ ಕ್ರಮವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿರುವುದು ಲಿಂಗರಾಜು ಕರ್ತವ್ಯ ಲೋಪಕ್ಕೆ ಮತ್ತೊಂದು ಸಾಕ್ಷಿ. ವೆಂಕಟೇಶ್ವರ ಸ್ಟೋನ್ ಕ್ರಷರ್ಸ್ ಅವರ ದೂರು ಅರ್ಜಿಯನ್ನು ಅವಲೋಕಿಸಿದಾಗ ಕ್ರಷರ್ ನವೀಕರಣ ಮಾಡುವಾಗ ಲಿಂಗರಾಜು ಸತಾಯಿಸಿರುವುದು, ಮುಂದಿನ ಪರವಾನಿಗೆಯನ್ನು ನ್ಯಾಯಾಲಯದಿಂದಲೇ ಪಡೆಯಿರಿ ಎಂದು ಸೂಚನೆ ಕೊಟ್ಟಿದ್ದರು.

ಈ ಸಂಬಂಧ ಶ್ರದ್ದಾನಂದ ಸ್ಟೋನ್ ಕ್ರಷರ್ಸ್ ಅವರು ಉಚ್ಚ ನ್ಯಾಯಾಲಯದ ಮೊರೆ ಹೋಗಿ ಕ್ರಷರ್ ಅನ್ನು ರದ್ದುಪಡಿಸಿದ ಆದೇಶವನ್ನು ಪ್ರಾದೇಶಿಕ ಆಯುಕ್ತರು ರದ್ದುಪಡಿಸಿ ಕಾನೂನು ಬದ್ದವಾಗಿ ಕ್ರಮ ಜರುಗಿಸಲು ನಿರ್ದೇಶನ ನೀಡಿದ್ದರು.

ಇದೇ ರೀತಿ ಹಲವಾರು ಸ್ಟೋನ್ ಕ್ರಷರ್ ಮಾಲಕರಿಂದ ಲಂಚ ನೀಡಲು ಆಮಿಷವೊಡ್ಡಿದ್ದು ತನಿಖೆಯಿಂದ ಗೊತ್ತಾಗಿದೆ. ಈವೆಲ್ಲವನ್ನು ಪರಿಗಣಿಸಿ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಸೇವೆಯಿಂದ ಅಮಾನತು ಪಡಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ ಎಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X