Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಳೇ ಪಿಂಚಣಿ ಯೋಜನೆ ಜಾರಿಗೆ ಪರಿಷತ್...

ಹಳೇ ಪಿಂಚಣಿ ಯೋಜನೆ ಜಾರಿಗೆ ಪರಿಷತ್ ಸದಸ್ಯರಿಂದ ಒಕ್ಕೊರಲ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ5 March 2021 9:43 PM IST
share
ಹಳೇ ಪಿಂಚಣಿ ಯೋಜನೆ ಜಾರಿಗೆ ಪರಿಷತ್ ಸದಸ್ಯರಿಂದ ಒಕ್ಕೊರಲ ಒತ್ತಾಯ

ಬೆಂಗಳೂರು, ಮಾ.5: 2006ರ ನಂತರ ನೇಮಕಗೊಂಡಿರುವ ರಾಜ್ಯದ ಎಲ್ಲ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆ(ಎನ್‍ಪಿಎಸ್) ಬದಲು ಹಳೇ ಪಿಂಚಣಿ ಯೋಜನೆ(ಒಪಿಎಸ್)ಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ವಿಧಾನ ಪರಿಷತ್‍ನಲ್ಲಿ  ಪಕ್ಷಾತೀತವಾಗಿ ರಾಜ್ಯ ಸರಕಾರವನ್ನು ಒತ್ತಾಯಿಸಲಾಯಿತು.

ಶುಕ್ರವಾರ ನಿಯಮ 330ರ ಅಡಿಯಲ್ಲಿ ಮಾತನಾಡಿದ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರು, 2006ರ ನಂತರ ನೇಮಕಗೊಂಡಿರುವ ರಾಜ್ಯದ ಎಲ್ಲ ಸರಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆ ಅನ್ವಯವಾಗುತ್ತಿದೆ. ಇದರಿಂದ, ಅವರು ನಿವೃತ್ತಿಯ ನಂತರ ಕಷ್ಟದಲ್ಲಿ ಜೀವನ ದೂಡಬೇಕಾಗುತ್ತದೆ ಎಂದು ಹೇಳಿದರು.

ಎನ್‍ಪಿಎಸ್ ಜಾರಿಗೆ ಸಮಿತಿ ರಚಿಸಿದ್ದೀರಿ, ವರದಿ ತರಿಸಿಕೊಳ್ಳಿ. ಆದರೆ, ಈಗ ಅನುದಾನಿತ ಶಿಕ್ಷಕರಿಗೆ ಎನ್‍ಪಿಎಸ್ ಇಲ್ಲ, ಓಪಿಎಸ್ ಕೂಡ ಇಲ್ಲ. ನಿಮ್ಮ ಷೇರು ಕೊಡದಿದ್ದಲ್ಲಿ ಹೇಗೆ? ಉದ್ಯೋಗಿಗಳು ಅವರ ಷೇರು ಕೊಡಲು ಸಿದ್ಧರಿದ್ದಾರೆ. ಸರಕಾರ ತನ್ನ ಷೇರು ಕೊಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಅವರ ಷೇರು ಕೊಡುತ್ತಾರೆ, ಇನ್ನರ್ಧ ಸಂಸ್ಥೆ ಕೊಡಲು ಸಾಧ್ಯವೇ ಇಲ್ಲ, ಸರಕಾರವೇ ಕೊಡಬೇಕು ಎಂದರು.

ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ನನಗೆ ಎನ್‍ಪಿಎಸ್ ಮತ್ತು ಒಪಿಎಸ್ ಎರಡೂ ಪೆನ್ಷನ್ ಬರುತ್ತಿದೆ. ಈಗ ನನ್ನನ್ನ ಯಾವ ಯೋಜನೆಗೆ ಸೇರಿಸುತ್ತೀರಿ, ನಾನು 2006ಕ್ಕೆ ಮೊದಲು ಸಂಸದನಾಗಿದ್ದೆ, ಈಗ ಶಾಸಕನಾಗಿದ್ದೇನೆ. ಸಂಸದರ ಪಿಂಚಣಿ ಇನ್ನೂ ಬರುತ್ತಿದೆ. ಈಗ ಶಾಸಕರ ಪಿಂಚಣಿಯೂ ಬರುತ್ತಿದೆ. ನಮಗೆ ಎರಡೆರಡು ಪೆನ್ಷನ್ ಬರುತ್ತಿದೆ ಎಂದರು.

ಶಾಸಕಾಂಗ ವ್ಯವಸ್ಥೆಯಲ್ಲಿ ನಮಗೆ ಹಳೆ ಪಿಂಚಣಿ ವ್ಯವಸ್ಥೆ ಇದೆ. ಅದೇ ರೀತಿಯಾಗಿ ನ್ಯಾಯಮೂರ್ತಿಗಳಿಗೂ ಹಳೇ ಪಿಂಚಣಿ ವ್ಯವಸ್ಥೆ ಇದೆ. ಆದರೆ, ಕಾರ್ಯಾಂಗದ ಸಿಬ್ಬಂದಿಗೆ ಹೊಸ ಪಿಂಚಣಿ ವ್ಯವಸ್ಥೆ ಅನ್ವಯವಾಗಲಿದೆ ಅಂದರೆ ಹೇಗೆ? ನಮ್ಮಂತೆಯೇ ಅವರೂ ಅಲ್ಲವಾ? ಈ ರೀತಿಯ ತಾರತಮ್ಯ ನೀತಿ ಸರಿಯಾಗಲ್ಲ. ಅಲ್ಲದೆ, ಹೊಸ ಪಿಂಚಣಿ ನೀತಿ ಸರಕಾರಿ ನೌಕರರಿಗೆ ಮಾರಕವಾಗಲಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಗಂಭೀರವಾಗಿ ಆಲೋಚಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಎನ್‍ಪಿಎಸ್ ಅಂದರೆ ನೋ ಪೆಕ್ಷನ್ ಸ್ಕೀಂ ಆಗಿ ಪರಿವರ್ತನೆ ಆಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವಾಗಲೂ ಸರಕಾರಿ ನೌಕರರ, ಶಿಕ್ಷಕರ ಪರ ಇರುವವರು. ಅವರ ಕಷ್ಟಗಳಿಗೆ ಸ್ಪಂದಿಸುವವರು. ಹೀಗಾಗಿ, ಈ ಕೂಡಲೇ ಎನ್‍ಪಿಎಸ್ ತೆಗೆದುಹಾಕಿ ಒಪಿಎಸ್ ಜಾರಿಗೆ ತರಬೇಕು ಎಂದರು.

ಪ್ರತಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಕೂಡ ಎನ್‍ಪಿಎಸ್ ಗೆ ವಿರೋಧ ವ್ಯಕ್ತಪಡಿಸಿದರು. ಯಾವತ್ತಿದ್ದರೂ ದೇಶದಲ್ಲಿ ಒಪಿಎಸ್ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರಲೇಬೇಕು. ನಮ್ಮ ರಾಜ್ಯದಲ್ಲೇ ಮೊದಲು ತಂದು ಇಡೀ ದೇಶಕ್ಕೆ ನೀವೇ ಮಾದರಿಯಾಗಿ ಎಂದು ಪಕ್ಷಾತೀತವಾಗಿ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮುಖ್ಯಮಂತ್ರಿಗಳ ಪರವಾಗಿ ಸದನಕ್ಕೆ ಉತ್ತರ ನೀಡಿದ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಹೊಸ ಪಿಂಚಣಿ ಬೇಡ, ಹಳೆ ಪಿಂಚಣಿ ವ್ಯವಸ್ಥೆ ಕೊಡಬೇಕು ಎನ್ನುವ ಒತ್ತಾಯ ಕೇಳಿಬಂದಿದೆ. ಹಳೆ ಪಿಂಚಣಿ ಕೊಡಬೇಕು ಹೊಸ ಪಿಂಚಣಿ ಸ್ಕೀಂ ಬೇಡ ಎಂದು ಎಲ್ಲಾ ಸರಕಾರಿ ನೌಕರರು ಹೋರಾಟ ಮಾಡಿದ್ದಾರೆ. ನಾನು ಕೂಡ ಒಂದು ಕಡೆ ಹೋಗಿದ್ದೆ, ಸಿಬ್ಬಂದಿ ರಕ್ತ ಕೊಡುತ್ತೇವೆ ಪಿಂಚಣಿ ಬಿಡಲ್ಲ ಎಂದಿದ್ದಾರೆ ಎಂದು ತಿಳಿಸಿದರು.

ರಿಸರ್ವ್ ಬ್ಯಾಂಕ್ ಸೂಚನೆ ಮೇರೆಗೆ ಹಳೆ ಪಿಂಚಣಿ ಯೋಜನೆ ಬದಲು 2004 ರಿಂದ ನೂತನ ಪಿಂಚಣಿ ಯೋಜನೆ ಜಾರಿ ಮಾಡಲಾಯಿತು. 2006ರಲ್ಲಿ ಕರ್ನಾಟಕ ಸರಕಾರ ಹೊಸ ಪಿಂಚಣಿ ಯೋಜನೆ ಅನುಷ್ಠಾನಕ್ಕೆ ತಂದು ಆದೇಶ ಹೊರಡಿಸಿದೆ. ಆದರೆ, ಅದರಲ್ಲಿ ಸಮಸ್ಯೆಗಳಿಂದ ಬದಲಾವಣೆ ತರಬೇಕಿದೆ ಎನ್ನುವ ಕೂಗು ಕೇಳಿ ಬಂದ ಕಾರಣ 2018 ರಲ್ಲಿ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಏಳು ಜನ ಹಿರಿಯ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಸಮಿತಿಯಿಂದ ಆದಷ್ಟು ಬೇಗ ವರದಿ ತರಿಸಿಕೊಳ್ಳಲಾಗುತ್ತದೆ. ಸಿಎಂ ಜೊತೆಯಲ್ಲಿಯೂ ಚರ್ಚೆ ನಡೆಸಲಾಗುತ್ತದೆ. ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೀಗುವ ನಿಟ್ಟಿನಲ್ಲಿ ಸಮಿತಿಯಲ್ಲಿ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಈ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X