Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಡಿಕೆ ಬೆಳೆ ನಾಶ: ಬಜೆಟ್‍ನಲ್ಲಿ 25 ಕೋಟಿ...

ಅಡಿಕೆ ಬೆಳೆ ನಾಶ: ಬಜೆಟ್‍ನಲ್ಲಿ 25 ಕೋಟಿ ರೂ. ವಿಶೇಷ ಪ್ಯಾಕೇಜ್‍ಗೆ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ5 March 2021 9:57 PM IST
share
ಅಡಿಕೆ ಬೆಳೆ ನಾಶ: ಬಜೆಟ್‍ನಲ್ಲಿ 25 ಕೋಟಿ ರೂ. ವಿಶೇಷ ಪ್ಯಾಕೇಜ್‍ಗೆ ಸಿಎಂಗೆ ಮನವಿ

ಮಡಿಕೇರಿ, ಮಾ.5: ಹಳದಿ ರೋಗದಿಂದ ಅಡಿಕೆ ತೋಟ ನಾಶ ಹೊಂದಿದವರಿಗೆ ಒಂದು ಬಾರಿ ಪರಿಹಾರವಾಗಿ 25 ಕೋಟಿ ರೂ. ಪ್ಯಾಕೇಜ್‍ನ್ನು ಬಜೆಟ್‍ನಲ್ಲಿ ಘೋಷಿಸಲು ಹಾಗೂ ಹಳದಿ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಚಿವರು ಮತ್ತು ಶಾಸಕರು ತೋಟಗಾರಿಕೆ ಸಚಿವರಾದ ಆರ್.ಶಂಕರ್ ಅವರೊಂದಿಗೆ ಸಭೆ ನಡೆಸಿ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.  

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್‍ನಲ್ಲಿ ಪ್ಯಾಕೇಜ್ ಘೋಷಿಸುವುದಾಗಿ ಭರವಸೆ ನೀಡಿದ್ದಾರೆ. ಹಳದಿ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವುದಾಗಿಯೂ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ.   

ತೋಟಗಾರಿಕಾ ಸಚಿವರಾದ ಆರ್.ಶಂಕರ್ ಅವರ ಜೊತೆ ಸಚಿವರಾದ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿತ್ತು. ಅಡಿಕೆಗೆ ಪ್ರಸ್ತುತ ಬೆಲೆ ಬಂದಿದೆ. ಆದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹಳದಿ ರೋಗದಿಂದ ಅಡಿಕೆ ತೋಟಗಳು ಸರ್ವ ನಾಶವಾಗಿವೆ. ಅಡಿಕೆ ಬೆಳೆಗಾರರನ್ನು ರಕ್ಷಣೆ ಮಾಡುವ ಅವಶ್ಯಕತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ರೋಗದಿಂದ ಭಾದಿತರಾದ ರೈತರಿಗೆ ಸಾಲ ಮನ್ನಾ ಮಾಡಬೇಕು. ಪರ್ಯಾಯ ಕೃಷಿ ಮಾಡುವವರಿಗೆ ದೀರ್ಘಾವಧಿ ಸಾಲ ಮಂಜೂರು ಮಾಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಶಾಸಕರಾದ ಕೆ.ಜಿ.ಬೋಪಯ್ಯ, ಸಂಜೀವ ಮಠಂದೂರು, ಹರೀಶ್ ಪೂಂಜಾ, ರಾಜೇಶ್ ನಾಯ್ಕ, ಅರಗ ಜ್ಞಾನೇಂದ್ರ ಇತರರು ನಿಯೋಗದಲ್ಲಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X