Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಆದಾಯ ದ್ವಿಗುಣ ಆಗುತ್ತೆ ಎಂದು...

ರೈತರ ಆದಾಯ ದ್ವಿಗುಣ ಆಗುತ್ತೆ ಎಂದು ಬುರುಡೆ ಬಿಡುತ್ತಿದ್ದಾರೆ: ಪ್ರಧಾನಿ ವಿರುದ್ಧ ಯೋಗೇಂದ್ರ ಯಾದವ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ5 March 2021 10:13 PM IST
share
ರೈತರ ಆದಾಯ ದ್ವಿಗುಣ ಆಗುತ್ತೆ ಎಂದು ಬುರುಡೆ ಬಿಡುತ್ತಿದ್ದಾರೆ: ಪ್ರಧಾನಿ ವಿರುದ್ಧ ಯೋಗೇಂದ್ರ ಯಾದವ್ ವಾಗ್ದಾಳಿ

ಕಲಬುರಗಿ: ದೇಶದಲ್ಲಿ ರೈತರ ಹೋರಾಟ ನಡೆಯುತ್ತಿದೆ. ದೇಶದ ಪ್ರಧಾನ ಮಂತ್ರಿಗಳು ರೈತರಿಗೆ ಮೂರು ಕೃಷಿ ಕಾನೂನುಗಳು ಉಡುಗೊರೆಯಾಗಿ ನೀಡುತ್ತಿದ್ದೇನೆ, ರೈತರೆಲ್ಲರ ಆದಾಯ ದ್ವಿಗುಣ ಆಗುತ್ತೆ ಅಂತ ಬುರುಡೆ ಬಿಡುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕ ಹಾಗೂ ಖ್ಯಾತ ಹೋರಾಟಗಾರ ಯೋಗೇಂದ್ರ ಯಾದವ್ ಹೇಳಿದರು.

ಅವರು ನಗರದ ಗಂಜ್ ಪ್ರದೇಶದ ಎಪಿಎಂಸಿ ಆವರಣದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ದಲಿತ, ರೈತರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಮಹಿಳಾ ಸಂಘಟನೆಯ ಸಮನ್ವ ಸಮಿತಿಯ ವತಿಯಿಂದ ಆಯೋಜಿಸಿದ ‘ಬೆಂಬಲ ಬೆಲೆ ಕೊಡಿ ಆಂದೋಲನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರಿಗೆ ಬೆಂಬಲ ಬೆಲೆ ಕೊಡಿ ಎಂಬ ಹಕ್ಕಿನ ಹೋರಾಟ ಪ್ರಾರಂಭವಾಗಿದೆ. ಈ ಹೋರಾಟ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಕೃಷಿ ಭೂಮಿ ಉಳಿವಿಗಾಗಿ ಅವಶ್ಯಕವಾಗಿದೆ. ಪ್ರೊಫೆಸರ್ ನಂಜುಂಡಸ್ವಾಮಿ ಕಟ್ಟಿದ ರೈತ ಸಂಘಟನೆಯು ಇದೇ ಕರ್ನಾಟಕದ ಕಲಬುರಗಿಯಿಂದಲೇ ಬೆಂಬಲ ಬೆಲೆ ಕೊಡಿಸಿ ಅಭಿಯಾನ ಆರಂಭಿಸಿದೆ ಎಂದು ತಿಳಿಸಿದರು.

ಮೂರು ಕಪ್ಪು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ನಾಲ್ಕು ದಿಕ್ಕುಗಳಲ್ಲಿ ರೈತರು ಕುಳಿತಿದ್ದಾರೆ. ನೂರು ದಿನಗಳು ಕಳೆದಿವೆ. ಆದರೂ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.

ಕಡಲೆಗೆ 5,100 ರೂ. ಬೆಂಬಲ ಬೆಲೆ ಸಿಗಬೇಕು. ಆದರೆ, ಇಲ್ಲಿ ಈಗ 4,800 ರೂ.ಗೆ ಕಡಲೆ ಮಾರಾಟವಾಗುತ್ತದೆ. ಮೋದಿ ಅವರೇ ಬೆಂಬಲ ಬೆಲೆ ಕೊಡಿಸಿ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಾ.ಮನಮೋಹನ್ ಸಿಂಗ್ ಗೆ ಬೆಂಬಲ ಬೆಲೆ ಕಾನೂನು ಮಾಡಿ ಎಂದು ಪತ್ರ ಬರೆದಿದ್ದರು. ಆ ಮಾತನ್ನೇ ಇಂದು ನಾವು ಕೇಳುತ್ತಿದ್ದೇವೆ, ಕಾನೂನು ಮಾಡಿ ಎಂದು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಬಿಆರ್ ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಶೌಕತ್ ಅಲಿ ಆಲೂರ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಹಾರದ ದೀಪಕ್ ಲಂಬಾ, ಪಂಜಾಬ್ ನ ಸದ್ದಾಂ ಸಿಂಗ್, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಎಚ್ ಕೆಸಿಸಿಐ ಮಾಜಿ ಅಧ್ಯಕ್ಷ ಅಮರನಾಥ ಪಾಟೀಲ್, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಜನವಾದಿ ಮಹಿಳಾ ಸಂಘಟನೆಯ ಕೆ ನೀಲಾ, ಚಾಮರಾಜ ಪಾಟೀಲ್, ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಮಹಿಳೆಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X