Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕೀಯ ಷಡ್ಯಂತ್ರ, ಮಾಧ್ಯಮಗಳನ್ನು ಬಳಸಿ...

ರಾಜಕೀಯ ಷಡ್ಯಂತ್ರ, ಮಾಧ್ಯಮಗಳನ್ನು ಬಳಸಿ ತೇಜೋವಧೆ ಮಾಡಲಾಗುತ್ತಿದೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ6 March 2021 1:09 PM IST
share
ರಾಜಕೀಯ ಷಡ್ಯಂತ್ರ, ಮಾಧ್ಯಮಗಳನ್ನು ಬಳಸಿ ತೇಜೋವಧೆ ಮಾಡಲಾಗುತ್ತಿದೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾ.6: ರಾಜ್ಯದಲ್ಲಿ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಮಾಧ್ಯಮಗಳನ್ನು ಬಳಸಿಕೊಂಡು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಇದನ್ನು ತಡೆಯಲು ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಮಾಧ್ಯಮಗಳಲ್ಲಿ ಎಲ್ಲವೂ ಬರುತ್ತದೆ. ಇದರಿಂದಾಗಿ ಅನೇಕ ವರ್ಷಗಳಿಂದ ಸಂಪಾದಿಸಿದ ಜನಪ್ರಿಯತೆ ಹೆಸರು, ಗೌರವ ಹಾಳಾಗಿ ಚಾರಿತ್ರ್ಯವಧೆಯಾಗುತ್ತದೆ. ಇದಕ್ಕೆ ಇತಿಶ್ರೀ ಹಾಡಲು ಈ ರೀತಿ ಮಾಡಿದ್ದೇವೆ. ಇದಕ್ಕೆ ತಡೆಹಾಕಲು ಬಲವಾದ ಕಾನೂನು ರೂಪಿಸಲು ಚಿಂತನೆ ನಡೆದಿದೆ ಎಂದರು.

ರಾಜಕಾರಣ ಮಾತ್ರವಲ್ಲದೆ, ಬೇರೆ ಕ್ಷೇತ್ರಗಳಲ್ಲೂ ಈ ರೀತಿ ನಡೆಯುತ್ತದೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡಲು ತಪ್ಪು ಮಾಹಿತಿ ನೀಡಿ, ಅದಕ್ಕಾಗಿ ಸಾಮಾಜಿಕ ಜಾಲತಾಣ, ಮಾಧ್ಯಮ ಬಳಸಿಕೊಳ್ಳಲಾಗುತ್ತಿದೆ. ನೈಜತೆ ಇದ್ದಲ್ಲಿ ಅದನ್ನು ಯಾರೂ ನಿಷೇಧ ಮಾಡಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷಯಾಗಬೇಕು. ಆದರೆ ತೇಜೋವಧೆ ಮಾಡಬಾರದು. ಆರೋಪ ಮಾಡುವವರು ನೇರವಾಗಿ ನ್ಯಾಯಾಲಯಕ್ಕೆ ಹೋಗಬಹುದು. ಆದರೆ ಇಂತಹವರು ನ್ಯಾಯಾಲಯಕ್ಕೆ ಹೋಗದೆ ಬೇರೆ ಮಾರ್ಗ ಹಿಡಿದು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಇದು ಹೊಸ ಅನೈತಿಕ, ಮೌಲ್ಯರಹಿತ ಟ್ರೆಂಡ್ ಆಗಿದೆ ಎಂದರು.

ರಶ್ಯ, ದುಬೈನಿಂದ ವೀಡಿಯೋ ಹಾಕುವುದು, ಸಾಮಾಜಿಕ ಜಾಲತಾಣ ಬಳಸಿಕೊಳ್ಳುವುದನ್ನು ನೋಡಿದರೆ ಇದು ಷಡ್ಯಂತ್ರ ಎನಿಸುವುದಿಲ್ಲವೇ? ಸಾರ್ವಜನಿಕ ಬದುಕಿನಲ್ಲಿ ಹಲವಾರು ವರ್ಷಗಳಿಂದ ಇದ್ದವರಿಗೆ ಸಾಮಾಜಿಕ ಬದ್ಧತೆ, ಕಳಕಳಿ ಇರುತ್ತದೆ. ಯಾವುದೇ ಆರೋಪ ಬಂದಾಗ ಅದನ್ನು ಪರಾಮರ್ಶಿಸಬೇಕು. ನೈಜತೆ ಇದ್ದಲ್ಲಿ 24 ಗಂಟೆಯೂ ಸುದ್ದಿ ಪ್ರಸಾರ ಮಾಡಬಹುದು ಎಂದರು.

 ಚಾರಿತ್ರ್ಯಹರಣವಾಗಬಾರದು ಎಂಬ ಕಾರಣಕ್ಕೆ ಇಂಜೆಂಕ್ಷನ್ ಪಡೆಯುವ ಪ್ರಯತ್ನ ಪಡೆಯಲಾಗಿದೆ. ಈಗ ಹಿಟ್ ಆ್ಯಂಡ್ ರನ್ ಜನರಿಂದಾಗಿ ಭಯಪಡಬೇಕಾಗಿದೆ. ಸಂತ್ರಸ್ತರು, ಅನ್ಯಾಯಕ್ಕೊಳಗಾದವರು ಇನ್ನೂ ಮುಖ್ಯವಾಹಿನಿಗೆ ಬಂದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X