ಮಲ್ಪೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸಮುದ್ರದಲ್ಲಿ ಮಹಿಳೆಯರ ಕಯಾಕಿಂಗ್ ಸಾಹಸ
ಉಡುಪಿ, ಮಾ.6: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾ.8ರಂದು ಬೆಳಗ್ಗೆ 9 ರಿಂದ ಮಲ್ಪೆಯ ಕಡಲಿನಲ್ಲಿ ಮಹಿಳೆಯರ ಕಯಾಕಿಂಗ್ ಸಾಹಸ ಯಾತ್ರೆಯೊಂದು ಮಲ್ಪೆ ಬೀಚ್‌ನಿಂದ ಸೈಂಟ್ ಮೇರೀಸ್ ದ್ವೀಪದವರೆಗೆ ನಡೆಯಲಿದೆ.
ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಅಜ್ಜರಕಾಡಿನ ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಈ ಸಾಹಸ ಪ್ರದರ್ಶನ ಆಯೋಜನೆಯಾಗಿದೆ.
ಈ ಸಾಹಸವನ್ನು ಮಾ.8ರ ಬೆಳಗ್ಗೆ 9 ಗಂಟೆಗೆ ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಸಿಇಓ ಡಾ.ನವೀನ್ ಭಟ್ ಉಪಸ್ಥಿತರಿರುವರು.
Next Story





