ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ
ಉಡುಪಿ, ಮಾ.6: ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸರ್ವೇ ಕಾರ್ಯದಲ್ಲಿ ಉಡುಪಿ ನಗರಸಬೆಯ ಸಿಬ್ಬಂದಿಗಳು/ ಸ್ವಯಂಸೇವಕರು/ ಸಂಸ್ಥೆಯ ಸದಸ್ಯರು / ನಗರಸಬೆ ನಿಯೋಜಿಸಿದ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕರು ಕುಟುಂಬದ ಎಲ್ಲಾ ಸದಸ್ಯರ ಪಡಿತರ ಚೀಟಿ, 18 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಪ್ರತಿ ಮತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು ನೀಡಿ ಸದರಿ ಸರ್ವೇ ಕಾರ್ಯದಲ್ಲಿ ನಗರಸಬೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
Next Story





