Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾ.8ರಿಂದ ಮೂರು ಸಾವಿರ ಕೇಂದ್ರಗಳಲ್ಲಿ...

ಮಾ.8ರಿಂದ ಮೂರು ಸಾವಿರ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ6 March 2021 9:51 PM IST
share
ಮಾ.8ರಿಂದ ಮೂರು ಸಾವಿರ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಮಾ.6: ಸೋಮವಾರ(ಮಾರ್ಚ್ 8)ದಂದು ಪ್ರಾಥಮಿಕ ಆರೋಗ್ಯ ಕೇಂದ್ರ(ಪಿಎಚ್‍ಸಿ), ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ ಸೇರಿ ಸುಮಾರು ಮೂರು ಸಾವಿರ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲಾಗುವುದು. ಪ್ರತಿದಿನ ಒಂದರಿಂದ ಒಂದೂವರೆ ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶನಿವಾರ ನಗರದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಚರ್ಚಿಸಲಾಗಿದೆ. ಮಾರ್ಚ್ 8ರಿಂದ ಮೂರು ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಲಸಿಕೆ ಪಡೆಯಬೇಕು ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 200-250 ಸೋಂಕಿತರು ಕಂಡುಬರುತ್ತಿದ್ದು, ನಿನ್ನೆ 400 ರವರೆಗೆ ತಲುಪಿದೆ. ನಗರದಲ್ಲಿ 12 ಕ್ಲಸ್ಟರ್ ಗುರುತಿಸಲಾಗಿದೆ. ನಗರದಲ್ಲಿ 30 ಸಾವಿರ ಕೋವಿಡ್ ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಅದನ್ನು 40 ಸಾವಿರಕ್ಕೆ ಏರಿಸಲಾಗುವುದು ಎಂದು ಸುಧಾಕರ್ ತಿಳಿಸಿದರು.

ಸೋಂಕಿತರು ಹೆಚ್ಚಿರುವ ಪ್ರದೇಶಗಳಲ್ಲಿ ಸಂಪರ್ಕ ಪತ್ತೆ ಹೆಚ್ಚಿಸಬೇಕಿದೆ. ಹಿಂದಿನಂತೆ ಒಬ್ಬ ಸೋಂಕಿತನಿಗೆ 20 ಸಂಪರ್ಕಿತ ವ್ಯಕ್ತಿ ಪತ್ತೆ ಕಾರ್ಯ ನಡೆಸಬೇಕೆಂದು ಕೇಂದ್ರದ ನಿಯೋಗ ಸೂಚಿಸಿದೆ. ಆ 20 ಮಂದಿಯನ್ನು ಪತ್ತೆ ಮಾಡಿ ಅವರಿಗೂ ಪರೀಕ್ಷೆ ಮಾಡಲಾಗುವುದು ಎಂದು ಅವರು ಹೇಳಿದರು.

ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವುದರಿಂದ ಸವಾಲು ಎದುರಾಗಿದೆ. ಇನ್ನು ಮುಂದೆ ನಿಗಾ ಇರಿಸುವುದರೊಂದಿಗೆ ಗುಂಪು ಸೇರುವುದನ್ನು ಕಡಿಮೆ ಮಾಡಬೇಕಿದೆ. ಸಭೆ ಸಮಾರಂಭ, ಹೋರಾಟಗಳಲ್ಲಿ ಒಂದು ತಿಂಗಳಾದರೂ ಹೆಚ್ಚು ಜನ ಸೇರದಂತೆ ಮಾಡಬೇಕು. ಮದುವೆ ಇನ್ನಿತರ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ 500 ಕ್ಕಿಂತ ಹೆಚ್ಚು ಜನರಿರಬಾರದು. ಗೃಹ ಇಲಾಖೆಯಿಂದ ಪೊಲೀಸ್ ಕ್ರಮ ಕಠಿಣವಾಗಿರಬೇಕು ಎಂದು ಸೂಚಿಸಲಾಗುವುದು ಎಂದು ಸುಧಾಕರ್ ಹೇಳಿದರು.

ಮಂಗಳೂರಿನಲ್ಲಿ ಹೆಚ್ಚು ತಪಾಸಣೆ

ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಲಿದ್ದಾರೆ. ಮಂಗಳೂರಿಗೆ ಹೊರಗಿನಿಂದ ಹೆಚ್ಚಿನವರು ಬರುವುದರಿಂದ ಅಲ್ಲಿ ಹೆಚ್ಚು ತಪಾಸಣೆ ಮಾಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರು ನಗರ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಉಡುಪಿ, ಕೊಡಗು, ಬೆಳಗಾವಿ, ತುಮಕೂರು ಜಿಲ್ಲೆಗಳು ಬಹಳ ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ.

-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X