ಪಶ್ಚಿಮಬಂಗಾಳ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕೋಲ್ಕತಾ: ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಶನಿವಾರ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 8 ಹಂತಗಳ ಚುನಾವಣೆಯ ಮೊದಲೆರಡು ಹಂತಕ್ಕೆ 13 ಸ್ಪರ್ಧಿಗಳನ್ನು ಹೆಸರಿಸಿದೆ.
ಬಿಜೆಪಿ ಪಕ್ಷ ತನ್ನ ಮೊದಲ ಪಟ್ಟಿಯಲ್ಲಿ 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕೆಲವೇ ಗಂಟೆಗಳ ಬಳಿಕ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿತು. ಆಡಳಿತಾರೂಢ ಟಿಎಂಸಿ 294 ಸದಸ್ಯಬಲದ ವಿಧಾನಸಭೆಯಲ್ಲಿ ಸ್ಪರ್ಧಿಸುವವರ ಹೆಸರನ್ನು ಶುಕ್ರವಾರ ಘೋಷಿಸಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.
ಮಾ.27ರಿಂದ ಎ.29ರ ತನಕ ದೀರ್ಘಕಾಲ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ದೀರ್ಘಕಾಲದ ಪ್ರತಿಸ್ಪರ್ಧಿ ಎಡಪಕ್ಷದೊಂದಿಗೆ ಮೈತ್ರಿಮಾಡಿಕೊಂಡು ಸ್ಪರ್ಧಿಸುತ್ತಿದೆ.
Next Story





