Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ...

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ಒಳಪಡಿಸಿದರೆ ಅದು ರಾಜ್ಯದ ಪಾಲಿಗೆ ಮರಣ ಶಾಸನ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ7 March 2021 12:01 PM IST
share
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ಒಳಪಡಿಸಿದರೆ ಅದು ರಾಜ್ಯದ ಪಾಲಿಗೆ ಮರಣ ಶಾಸನ: ಕುಮಾರಸ್ವಾಮಿ

ಬೆಂಗಳೂರು : ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿಎಸ್ ಟಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ ವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್‌ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ಅನ್ನು ಜಿಎಸ್ ಟಿಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ ಎಂದು ಟೀಕಿಸಿದ್ದಾರೆ.

ರಾಜ್ಯಗಳು ಜಿಎಸ್ ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈ ವರೆಗೆ ಸರಿಯಾಗಿ ಕೊಟ್ಟೇ ಇಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್‌ ಮಂಡಿಸಬೇಕಾಗುತ್ತದೆ. ಅಥವಾ, ಬಜೆಟ್‌ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ  ನಮ್ಮನ್ನು ಕಾಡಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ.
1/6

— H D Kumaraswamy (@hd_kumaraswamy) March 7, 2021

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ.
6/6

— H D Kumaraswamy (@hd_kumaraswamy) March 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X