Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ:...

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಸೋಮವಾರ ಆಯವ್ಯಯ ಮಂಡಿಸಲಿರುವ ಸಿಎಂ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ7 March 2021 5:09 PM IST
share
ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಸೋಮವಾರ ಆಯವ್ಯಯ ಮಂಡಿಸಲಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು, ಮಾ. 7: ಕೊರೋನ ಸಂಕಷ್ಟದಿಂದಾಗಿ ಸಂಪನ್ಮೂಲ ಕ್ರೋಢೀಕರಣದಲ್ಲಿ ಖೋತಾ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿಯ ನಡುವೆ ನಾಳೆ (ಮಾ.8) ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಡಿಸಲಿರುವ 2021-22ನೆ ಸಾಲಿನ ಆಯವ್ಯಯದ ಮೇಲೆ ರಾಜ್ಯದ ಜನತೆಯ ದೃಷ್ಟಿನೆಟ್ಟಿದೆ.

ನಾಳೆ ಮಧ್ಯಾಹ್ನ 11:30ಕ್ಕೆ ಆಯವ್ಯಯ ಅನುಮೋದಿಸಲು ವಿಶೇಷ ಸಂಪುಟ ಸಭೆ ನಡೆಸಲಿರುವ ಸಿಎಂ ಯಡಿಯೂರಪ್ಪ, 12 ಗಂಟೆಗೆ ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡಿಸದ್ದಾರೆ. ಎಂಟನೆ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿರುವ ಯಡಿಯೂರಪ್ಪನವರು ಸಾಮಾನ್ಯ ಜನರಿಗೆ ಹೊರೆಯಾಗದ ಬಜೆಟ್ ಮಂಡಿಸಲಿದ್ದಾರೆಂದು ಹೇಳಲಾಗುತ್ತಿದೆ.

ಕೃಷಿ, ಕೈಗಾರಿಕೆ, ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸೇರಿದಂತೆ ಅಶಕ್ತರಿಗೆ ಆದ್ಯತೆ ನೀಡಲು ಉದ್ದೇಶಿಸಿರುವ ಯಡಿಯೂರಪ್ಪನವರ ಬಜೆಟ್ ಮೇಲೆ ಪ್ರತಿವರ್ಷದಂತೆಯೂ ಈ ಬಾರಿಯೂ ನಿರೀಕ್ಷೆಗಳು ಹೆಚ್ಚಾಗಿವೆ. ಎಲ್ಲ ಸಮುದಾಯಗಳನ್ನು ಗಣನೆಗೆ ತೆಗೆದುಕೊಂಡು ಉತ್ತಮ ಬಜೆಟ್ ಮಂಡಿಸಲು ಕಾರ್ಯತಂತ್ರ ರೂಪಿಸಿದ್ದಾರೆ.

ಸೋಂಕಿನ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಲು ಹಾಗೂ ಸಂಪನ್ಮೂಲ ಕ್ರೋಢೀಕರಣಕ್ಕೆ ಯಾವ ಪ್ರಸ್ತಾವವನ್ನು ಅನುಸರಿಸಲಿದ್ದಾರೆಂಬುದು ಕುತೂಹಲ ಸೃಷ್ಟಿಸಿದೆ. ಸುಮಾರು 89 ಸಾವಿರ ಕೋಟಿ ರೂ.ಗಳಷ್ಟು ಸಾಲ ಪಡೆದುಕೊಳ್ಳಲು ಕೇಂದ್ರ ಸರಕಾರ ಸಮ್ಮತಿಸಿದ್ದರೂ, ದೊಡ್ಡ ಮೊತ್ತದ ಸಾಲದ ಜೊತೆಗೆ ಹಳೆಯ ಸಾಲಕ್ಕೆ 25 ಸಾವಿರ ಕೋಟಿ ರೂ.ಗಳಷ್ಟು ಬಡ್ಡಿ ಪಾವತಿಸಬೇಕಾದ ಹೊಣೆಯೂ ಸಿಎಂ ಬಿಎಸ್‍ವೈ ಅವರ ಮೇಲಿದೆ.

ಪೆಟ್ರೋಲ್, ಡೀಸೆಲ್, ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಶ್ರೀಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ಈ ಹಿನ್ನೆಲೆಯಲ್ಲಿ ಇಂಧನ ದರದ ಮೇಲಿನ ಸುಂಕ ಕಡಿತ ಮಾಡಬೇಕೆಂಬ ಒತ್ತಡಗಳು ಕೇಳಿ ಬಂದಿವೆ. ಆದರೆ, ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಿದರೆ ರಾಜ್ಯಕ್ಕೆ ಬರುವ ಆದಾಯದಲ್ಲಿ ಖೋತಾ ಆಗಲಿದೆ. 2020-21ನೆ ಸಾಲಿನಲ್ಲಿ 2.37 ಲಕ್ಷ ಕೋಟಿ ರೂ.ಬಜೆಟ್ ಮಂಡಿಸಲಾಗಿತ್ತು. ಆದರೆ, ಈ ಬಾರಿ ಬಜೆಟ್ ಮಂಡನೆಯ ಗಾತ್ರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ಇಲಾಖೆಯ ಮೂಲಗಳು ತಿಳಿಸಿವೆ.

ಈ ಮಧ್ಯೆ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಸಿಂಧಗಿ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಆ ಕ್ಷೇತ್ರಗಳಿಗೂ ಬಜೆಟ್‍ನಲ್ಲಿ ವಿಶೇಷ ಕೊಡುಗೆ ನೀಡಲು ಸಾಧ್ಯತೆಗಳಿವೆ. ಜೊತೆಗೆ ತಾವು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೂ ಆಯವ್ಯಯದಲ್ಲಿ ಪ್ರಾತಿನಿಧ್ಯ ನೀಡುವ ನಿರೀಕ್ಷೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X