Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಬಲ ಬೆಲೆಗೆ ಒತ್ತಾಯ: ಯೋಗೇಂದ್ರ ಯಾದವ್...

ಬೆಂಬಲ ಬೆಲೆಗೆ ಒತ್ತಾಯ: ಯೋಗೇಂದ್ರ ಯಾದವ್ ನೇತೃತ್ವದಲ್ಲಿ ಮಾ.22ರಂದು ವಿಧಾನಸೌಧಕ್ಕೆ ಮುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ7 March 2021 8:12 PM IST
share
ಬೆಂಬಲ ಬೆಲೆಗೆ ಒತ್ತಾಯ: ಯೋಗೇಂದ್ರ ಯಾದವ್ ನೇತೃತ್ವದಲ್ಲಿ ಮಾ.22ರಂದು ವಿಧಾನಸೌಧಕ್ಕೆ ಮುತ್ತಿಗೆ

ಬೆಂಗಳೂರು, ಮಾ.7: ರಾಷ್ಟ್ರವ್ಯಾಪಿ ನಡೆಯುತ್ತಿರುವ ಬೆಂಬಲ ಬೆಲೆ ಹಕ್ಕೊತ್ತಾಯ (ಎಂಎಸ್‍ಪಿ ದಿಲಾವ್) ಹೋರಾಟದ ಭಾಗವಾಗಿ ಮಾ.22ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಅಖಿಲ ಭಾರತ ರೈತ ಸಂಘಟನೆಗಳ ಮೈತ್ರಿಕೂಟದ ಸಂಚಾಲನಾ ಸಮಿತಿ ಸದಸ್ಯ ಯೋಗೇಂದ್ರ ಯಾದವ್ ಘೋಷಿಸಿದರು.

ರವಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಸಂಯುಕ್ತ ಹೋರಾಟ ಮೈತ್ರಿಕೂಟದ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರ್ಗಿಯಿಂದ ಆರಂಭವಾಗಿರುವ ಬೆಂಬಲ ಬೆಲೆ ಹಕ್ಕೊತ್ತಾಯ (ಎಂಎಸ್ ಪಿ ದಿಲಾವ್) ದೇಶದಾದ್ಯಂತ ಮುಂದುವರಿಯಲಿದೆ. ಹೋರಾಟದ ಭಾಗವಾಗಿ ಕರ್ನಾಟಕ ಸಂಯುಕ್ತ ಹೋರಾಟ ಮೈತ್ರಿಕೂಟದ ನೇತೃತ್ವದಲ್ಲಿ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹೋರಾಟ ನಡೆಯಲಿದೆ ಎಂದರು.

ಕೇಂದ್ರ ಸರಕಾರ ಜನಪರವಾಗಿಲ್ಲ, ರೈತಪರವಾಗಿಲ್ಲ, ದುಡಿವ ಜನರ ಪರವಾಗಿಲ್ಲ ಎಂಬುದು ಗೊತ್ತಾಗಿದೆ. ಅಲ್ಲದೆ, ಬೆಂಬಲ ಬೆಲೆಯ ವಿಚಾರದಲ್ಲಿ ಕೇಂದ್ರ ಸರಕಾರ ಸುಳ್ಳು ಹೇಳುತ್ತಿದೆ. ಕೃಷಿ ಸಂಬಂಧಿ ಹೊಸ ಕಾಯ್ದೆಗಳ ಜಾರಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಮತ್ತು ಬೆಂಬಲ ಬೆಲೆ ವ್ಯವಸ್ಥೆಗಳು ನಾಶವಾಗಲಿವೆ ಎಂದ ಅವರು, ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲೇ ಇದಕ್ಕೆ ಸಾಕ್ಷ್ಯ ದೊರೆತಿದೆ ಎಂದು ವಾಗ್ದಾಳಿ ನಡೆಸಿದರು.

ಸರಿಯಾದ ರೀತಿಯಲ್ಲಿ ಬೆಂಬಲ ಬೆಲೆ ದೊರಕದ ಕಾರಣದಿಂದ 2019-20ರಲ್ಲಿ ಕರ್ನಾಟಕದ ರೈತರಿಗೆ 13 ಬೆಳೆಗಳಲ್ಲಿ  3319 ಕೋಟಿ ರೂ. ನಷ್ಟವಾಗಿದೆ. ಸ್ವಾಮಿನಾಥನ್ ವರದಿಯ ಶಿಫಾರಸಿನಂತೆ ಲೆಕ್ಕ ಹಾಕಿದರೆ ನಷ್ಟದ ಪ್ರಮಾಣ 20,339 ಕೋಟಿ ಆಗುತ್ತದೆ. ಬೆಂಬಲ ಬೆಲೆ ನೀಡಲು ಲಕ್ಷಾಂತರ ಕೋಟಿ ರೂಪಾಯಿ ಬೇಕಾಗಿಲ್ಲ. ಅಧಿಕಾರದಲ್ಲಿ ಇರುವವರಿಗೆ ಬದ್ಧತೆ ಮತ್ತು ಇಚ್ಛಾಶಕ್ತಿ ಇರಬೇಕು ಎಂದು ನುಡಿದರು.

ಇನ್ನು, ಕರ್ನಾಟಕದ ಕಲಬುರ್ಗಿ, ಬಳ್ಳಾರಿ ಜಿಲ್ಲೆಗಳ ಎಪಿಎಂಸಿಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಲಾಗಿದೆ. ರೈತರಿಗೆ ಬೆಂಬಲ ಬೆಲೆಗಿಂತ ಕಡಿಮೆ ದರ ದೊರೆಯುತ್ತಿರುವುದು ಕಂಡುಬಂದಿದೆ. ಎಪಿಎಂಸಿಗಳಿಗೆ ಕೃಷಿ ಉತ್ಪನ್ನಗಳ ಆವಕದ ಪ್ರಮಾಣವೂ ಕುಸಿದಿದೆ. ಮತ್ತೊಂದೆಡೆ, ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯ ಆಧಾರದಲ್ಲಿ ಬೆಂಬಲ ಬೆಲೆಯನ್ನು ಕಾನೂನಿನ ಮೂಲಕ ಖಾತರಿಪಡಿಸಬೇಕು ಎಂಬುದು ರೈತರ ಬೇಡಿಕೆ. ಅದನ್ನು ಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಯಾದವ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಜಾಂಬೂರಿ ಕಿಸಾನ್ ಸಭಾ ಅಧ್ಯಕ್ಷ ಡಾ.ಸತ್ನಾಂ ಸಿಂಗ್ ಅಜ್ಞಾಲ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಪ್ರಕಾಶ್ ಕಮ್ಮರಡಿ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಜನಾಂದೋಲನ ಮಹಾಮೈತ್ರಿಯ ಅಧ್ಯಕ್ಷ ಎಸ್.ಆರ್.ಹಿರೇಮಠ ಸೇರಿ ಪ್ರಮುಖರಿದ್ದರು.

ಭೂಮಿಯೊಳಗೆ ಹೂತುಹಾಕಲು ಯತ್ನಿಸಿತು: ‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ರೈತ ಹೋರಾಟವನ್ನು ಹತ್ತಿಕ್ಕಿ, ಭೂಮಿಯೊಳಗೆ ಹೂತುಹಾಕಲು ಯತ್ನಿಸಿತು. ಅದಕ್ಕಾಗಿಯೇ ಸುಳ್ಳುಗಳನ್ನು ಹೊಸೆಯಿತು. ನಾನಾ ತರಹದ ಅಪಪ್ರಚಾರ ಮಾಡಿತು. ಸರಕಾರ ಹತ್ತಿಕ್ಕಲು ಯತ್ನಿಸಿದಂತೆಲ್ಲ ಹೋರಾಟ ವಿಸ್ತಾರವಾಗಿ ಬೆಳೆಯುತ್ತಿದೆ'

-ಯೋಗೇಂದ್ರ ಯಾದವ್, ರೈತ ಸಂಘಟನೆಗಳ ಮೈತ್ರಿಕೂಟದ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X