ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವರೆಗೆ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್

ಮುಝಫರ್ ನಗರ, ಮಾ 7: ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವರೆಗೆ ತಮ್ಮ ಚಳವಳಿ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 100 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಝಪ್ಫರ್ನಗರ ರಾಮರಾಜ್ ಪಟ್ಟಣದಲ್ಲಿ ಶನಿವಾರ ಅವರು ಮಾತನಾಡಿದರು.
ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ರೈತರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕೇಂದ್ರ ಸರಕಾರ ತಮ್ಮ ಬೇಡಿಕೆ ಈಡೇರಿಸುವ ವರೆಗೆ ಚಳವಳಿ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದ್ದಾರೆ.
ಟ್ರಾಕ್ಟರ್ ರ್ಯಾಲಿಗೆ ಹಸಿರು ನಿಶಾನೆ ತೋರಿಸಿದ ಕಾರ್ಯಕ್ರಮದಲ್ಲಿ ಅವರು, ತಾನು ಉತ್ತರಪ್ರದೇಶ ಹಾಗೂ ಉತ್ತರಾಖಂಡದ ಜಿಲ್ಲೆಗಳಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ ಹಾಗೂ ಮಾರ್ಚ್ 27ರಂದು ಗಾಝಿಪುರದ ಪ್ರತಿಭಟನಾ ಸ್ಥಳಕ್ಕೆ ತಲುಪಲಿದ್ದೇನೆ ಎಂದರು.
Next Story