Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರಟ ವಾದನ ಕಲಾವಿದಗೆ ಒಲಿದ ಪ್ರತಿಷ್ಠಿತ...

ಕರಟ ವಾದನ ಕಲಾವಿದಗೆ ಒಲಿದ ಪ್ರತಿಷ್ಠಿತ ಜಾನಪದ ಲೋಕ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ8 March 2021 5:04 PM IST
share
ಕರಟ ವಾದನ ಕಲಾವಿದಗೆ ಒಲಿದ ಪ್ರತಿಷ್ಠಿತ ಜಾನಪದ ಲೋಕ ಪ್ರಶಸ್ತಿ

ಮಡಿಕೇರಿ,ಮಾ.8: ಕರ್ನಾಟಕ ಜಾನಪದ ಪರಿಷತ್ತಿನಿಂದ ಕೊಡಮಾಡುವ ಪ್ರಸಕ್ತ ಸಾಲಿನ ಪ್ರತಿಷ್ಠಿತ ಜಾನಪದ ಲೋಕ ಪ್ರಶಸ್ತಿಗೆ ಕೊಡಗಿನ ಕರಟವಾದನ ಕಲಾವಿದ ಬೆಸೂರು ಶಾಂತೇಶ್ ಅವರು ಭಾಜನರಾಗಿದ್ದಾರೆ.

ಅಪರೂಪದ ಕರಟ ವಾದನ ಕಲೆಯನ್ನು ತಮ್ಮಲ್ಲಿ ಅಂತರ್ಗತವಾಗಿ ಕಾಪಿಟ್ಟುಕೊಂಡು ಬಂದಿರುವ ಶಾಂತೇಶ್ ಅವರು ಜಾನಪದ ಕಲೆಯ ಉಳಿವಿಗೆ ನೀಡಿದ ಸೇವೆಯನ್ನು ಪರಿಗಣಿಸಿ ಕೊಡಗು ಜಿಲ್ಲಾ ಜಾನಪದ ಪರಿಷತ್‍ನಿಂದ ಇವರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಜಾನಪದ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಜಾನಪದ ಪರಿಷತ್‍ನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ.

ಮಾ.12 ರಿಂದ 14ರವರೆಗೆ ಬೆಂಗಳೂರು ರಾಮನಗರದಲ್ಲಿರುವ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವ ನಡೆಯಲಿದ್ದು, ಮಹಾಮೇಳದ 2ನೇ ದಿನವಾದ ಮಾ.13ರಂದು ಸಂಜೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಹೊಂದಿದೆ ಎಂದು ಜಾನಪದ ಪರಿಷತ್‍ನ ರಾಜ್ಯಾಧ್ಯಕ್ಷ ಟಿ. ತಿಮ್ಮೇಗೌಡ ಅವರು ಮಾಹಿತಿ ನೀಡಿದ್ದಾರೆ.

ವೃತ್ತಿಯಲ್ಲಿ ಕೃಷಿಕರಾಗಿರುವ ಬೆಸೂರು ಶಾಂತೇಶ್ ಅವರು ಅಪರೂಪದ ಕಲೆಯನ್ನು ತಮ್ಮೊಳಗೆ ಇಟ್ಟುಕೊಂಡಿದ್ದು, ಜಿಲ್ಲೆ, ರಾಜ್ಯಮಟ್ಟದ ಜಾನಪದ ಉತ್ಸವಗಳಲ್ಲಿ ಭಾಗವಹಿಸಿ ತಮ್ಮ ಕರಟ ವಾದನ ಕಲೆಯನ್ನು ಪ್ರದರ್ಶಿಸಿದ್ದಾರೆ. ತಮ್ಮೊಂದಿಗೆ ಈ ಕಲೆ ನಶಿಸಬಾರದು ಎಂಬ ಮಹದಾಸೆಯಿಂದ ತಮ್ಮ ಪುತ್ರನಿಗೂ ಈ ಕಲೆಯ ಪರಿಚಯ ಮಾಡಿಸಿ, ಮುಂದಿನ ತಲೆಮಾರಿಗೂ ಹಸ್ತಾಂತರಿಸುವ ಕಾರ್ಯ ಮಾಡುತ್ತಿದ್ದಾರೆ.

ಕೊಡ್ಲಿಪೇಟೆ ಹೋಬಳಿ, ಬೆಸೂರು ಗ್ರಾಮ ನಿವಾಸಿ, ಶಾಂತೇಶ್ ಅವರು ದೇಶದ ಯಾವದೇ ಮೂಲೆಯಲ್ಲೂ ಕಾಣಸಿಗದ ಅಪರೂಪದ ಕರಟವಾದನ ಕಲಾವಿದ. ತೆಂಗಿನ ಚಿಪ್ಪಿನ ಕರಟ, ಗಂಧ, ಬೈನೆ ಅಥವಾ ಬೀಟೆ ಮರದಿಂದ ಮಾಡುವ ದುಡಿಯಿಂದ ಹೊರಹೊಮ್ಮುವ ಶಬ್ದ- ತಬಲದ ನಾದ, ತಾಳವಾದ್ಯ ಹೊಂದಿದೆ. ಮೂಲತಃ ಸೋಮವಾರಪೇಟೆಯ ರೇಂಜರ್ ಬ್ಲಾಕ್ ನಿವಾಸಿ, ಪೋಸ್ಟ್ ಮ್ಯಾನ್ ಆಗಿದ್ದ ಬಿ.ಜಿ. ದೇವಿದಾಸ್ ಅವರು ಈ ಕರಟ ವಾದನದ ನಿರ್ಮಾತೃ. 

1979-80ರಲ್ಲಿ ಬೆಸೂರು ನಂಜಣ್ಣ ಅವರು ನಿರ್ವಹಿಸುತ್ತಿದ್ದ ಜಾನಪದ ರಾಗರಂಜಿನಿ ಎಂಬ ಕಲಾತಂಡದಲ್ಲಿದ್ದ ದೇವಿದಾಸ್ ಅವರಿಂದ ಬೆಸೂರು ನಂಜಣ್ಣ ಅವರು ಈ ಕಲೆಯನ್ನು ಕರಗತ ಮಾಡಿಕೊಂಡರು. ಇದೇ ತಂಡದಲ್ಲಿದ್ದ ನಂಜಣ್ಣ ಅವರ ಪುತ್ರ ಶಾಂತೇಶ್ ಅವರಿಗೂ ಸಹ ಈ ಕಲೆಯ ವ್ಯಾಮೋಹ ಹೆಚ್ಚಿತು. ಇವರಿಗೆ 11 ವರ್ಷ ಪ್ರಾಯವಿದ್ದಾಗ ಕರಟ ವಾದನವನ್ನು ಅಭ್ಯಾಸ ಮಾಡಲು ಆಸಕ್ತಿ ಬೆಳೆಯಿತು.

ದೇವಿದಾಸ್ ಹಾಗೂ ಬೆಸೂರು ನಂಜಣ್ಣ ಅವರ ಕಾಲಾನಂತರ ಈ ಕಲೆ ಅಳಿದುಹೋಗಬಾರದು ಎಂಬ ಉದ್ದೇಶದಿಂದ ಶಾಂತೇಶ್ ಅವರು ತಮ್ಮ ತಂದೆಯಿಂದ ಕರಟ ವಾದನ ಕಲಿತರು. ನಂತರದ ದಿನಗಳಲ್ಲಿ ಕಲೆಯನ್ನು ಕರಗತ ಮಾಡಿಕೊಂಡು ಇದೀಗ ರಾಜ್ಯಮಟ್ಟದ ಜಾನಪದ ಉತ್ಸವಗಳಲ್ಲಿ ಪ್ರದರ್ಶನ ನೀಡುವ ಮೂಲಕ ಅಪರೂಪದ ಕಲೆಯನ್ನು ಪರಿಚಯಿಸುತ್ತಿದ್ದಾರೆ.

ಈ ಹಿಂದೆ ಜಿಲ್ಲೆಯ ಬಾಚರಣಿಯಂಡ ಅಪ್ಪಣ್ಣ, ಕಾಶಿ ಅಚ್ಚಯ್ಯ, ಬೈತಡ್ಕ ಜಾನಕಿ,ಜೇನುಕುರುಬರ ರಾಮು, ಜೇನುಕುರುಬರ ಮರಿ ಅವರುಗಳಿಗೆ ಪ್ರಶಸ್ತಿ ಲಭಿಸಿದ್ದು, 2021ನೇ ಸಾಲಿನ ಪ್ರಶಸ್ತಿಗೆ ಬೆಸೂರು ಶಾಂತೇಶ್ ಭಾಜನರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X