Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೆರಿಗೆ ಹೊರೆ ಇಲ್ಲದ ಅಭಿವೃದ್ಧಿ ಕನಸಿನ...

ತೆರಿಗೆ ಹೊರೆ ಇಲ್ಲದ ಅಭಿವೃದ್ಧಿ ಕನಸಿನ ಆಯವ್ಯಯ: 2,46,207 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ವಾರ್ತಾಭಾರತಿವಾರ್ತಾಭಾರತಿ8 March 2021 8:33 PM IST
share
ತೆರಿಗೆ ಹೊರೆ ಇಲ್ಲದ ಅಭಿವೃದ್ಧಿ ಕನಸಿನ ಆಯವ್ಯಯ: 2,46,207 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಬೆಂಗಳೂರು, ಮಾ. 8: ಯಾದಗಿರಿಯಲ್ಲಿ 1,478 ಕೋಟಿ ರೂ.ವೆಚ್ಚದಲ್ಲಿ ‘ಬಲ್ಕ್ ಡ್ರಗ್ಸ್ ಪಾರ್ಕ್', ಒಕ್ಕಲಿಗ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ತಲಾ 500 ಕೋಟಿ ರೂ., ಜಾನುವಾರು ಸಂರಕ್ಷಣೆಗೆ ಜಿಲ್ಲೆಗೊಂದು ಗೋಶಾಲೆ ಸ್ಥಾಪಿಸುವುದು, ಮಂಗಳೂರಿನ ಗಂಜಿಮಠದಲ್ಲಿ 100 ಎಕರೆ ಪ್ರದೇಶದಲ್ಲಿ 66 ಕೋಟಿ ರೂ.ವೆಚ್ಚದಲ್ಲಿ ‘ಪ್ಲಾಸ್ಟಿಕ್ ಪಾರ್ಕ್' ಅಭಿವೃದ್ಧಿ ಸೇರಿದಂತೆ ರಾಜ್ಯದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೆ ಸಾಲಿನ ಬಜೆಟ್ ಮಂಡಿಸಿದ್ದು, ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಸೇರಿ ಅಲ್ಪಸಂಖ್ಯಾತರು, ಎಸ್ಸಿ-ಎಸ್ಟಿ, ಮಹಿಳೆಯರು ಸೇರಿದಂತೆ ಆಡಳಿತ ಸುಧಾರಣೆಗೆ ಆದ್ಯತೆ ನೀಡಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಭಾತ್ಯಾಗದಿಂದ ಅವರ ಅನುಪಸ್ಥಿತಿಯಲ್ಲಿ ಹಸಿರು ಶಾಲು ಹೊದ್ದು ಆಯವ್ಯಯ ಮಂಡಿಸಿದ ಯಡಿಯೂರಪ್ಪ, ಕೊರೋನ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಮೇಲೆ ಯಾವುದೇ ರೀತಿಯ ತೆರಿಗೆಯ ಹೊರೆಯನ್ನು ಹೇರದೆ, ಸಮೃದ್ಧ ಕರ್ನಾಟಕ ನಿರ್ಮಾಣದ ಕಾರ್ಯಸೂಚಿಯ 2,46,207 ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದ್ದಾರೆ.

ಕೃಷಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಸೇರಿ ಆರು ವಲಯವಾರು ಬಜೆಟ್ ಮಂಡಿಸಿದ್ದು, ರಾಮನಗರದಲ್ಲಿ ಹೈಟೆಕ್ ರೇಶ್ಮೆಗೂಡು ಮಾರುಕಟ್ಟೆ ಸ್ಥಾಪನೆ, ಶಿವಮೊಗ್ಗ ಪಶುವೈದ್ಯಕೀಯ ಕಾಲೇಜಿನಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ, ಯಾತ್ರಿಕೃತ ದೋಣಿಗಳಿಗೆ ಡೀಸೆಲ್ ಡೆಲಿವರಿ ಪಾಯಿಂಟ್‍ನಲ್ಲಿಯೇ ಕರರಹಿತ ದರದಲ್ಲಿ ಡೀಸೆಲ್ ವಿತರಣೆ ಮಾಡಲಾಗುವುದು ಎಂದು ಪ್ರಕಟಿಸಿದರು.

100 ಕೋಟಿ ರೂ.ವೆಚ್ಚದಲ್ಲಿ 50 ಸರಕಾರಿ ಶಾಲೆಗಳ ಅಭಿವೃದ್ಧಿ, 100 ಪಬ್ಲಿಕ್ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ವೃತ್ತಿ ತರಬೇತಿ, ತಾಯಿ-ಮಗುವಿನ ಉತ್ತಮ ಆರೋಗ್ಯಕ್ಕಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ಮಾಡುವುದನ್ನು ಉತ್ತೇಜಿಸಲು 10 ಕೋಟಿ ರೂ.ವೆಚ್ಚದಲ್ಲಿ ‘ಚಿಗುರು' ಕಾರ್ಯಕ್ರಮ ಆರಂಭಿಸಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದರು.

ಬುದ್ಧಿಮಾಂದ್ಯರ ಆರೈಕೆ ಮಾಡಲು ಶೇ.75ಕ್ಕಿಂತ ಹೆಚ್ಚಿನ ಮನೋವೈಕಲ್ಯತೆ ಹೊಂದಿರುವವರಿಗೆ ಮಾಸಾಶನ 1,400 ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಳ, ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ)ದ ಅಭಿವೃದ್ಧಿಗೆ ಎಸಿಪಿ-ಟಿಎಸ್ಪಿ ಯೋಜನೆಯಡಿ ಒಟ್ಟು 27,700 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.: ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ಒಟ್ಟು 16 ನಿಗಮಗಳಿಗೆ ಪ್ರಸಕ್ತ ಸಾಲಿನಲ್ಲಿ ಒಟ್ಟು 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ವೀರಶೈವ ಲಿಂಗಾಯತ ನಿಗಮಕ್ಕೆ 500 ಕೋಟಿ ರೂ. ಮೀಸಲಿಟ್ಟಿದ್ದು, ಈಗಾಗಲೇ 100 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸುವುದರ ಜೊತೆಗೆ 500 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ ರೂ., 400 ಸರಕಾರಿ ಉರ್ದು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1,500 ಕೋಟಿ ರೂ., ಕರಾವಳಿ ಅಭಿವೃದ್ದಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್ ರಚಿಸಲು ವಿಧೇಯಕ ತರಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಅಯೋಧ್ಯೆ ರಾಮ ಜನ್ಮಭೂಮಿಗೆ ತೆರಳುವ ಭಕ್ತಾಧಿಗಳಿಗೆ 10 ಕೋಟಿ ರೂ.ವೆಚ್ಚದಲ್ಲಿ ಯಾತ್ರಿ ನಿವಾಸ, ಸಾಹಿತಿ ಎಸ್.ಎಲ್.ಭೈರಪ್ಪನವರ ‘ಪರ್ವ' ನಾಟಕ ಪ್ರದರ್ಶನಕ್ಕೆ 1 ಕೋಟಿ ರೂ., ಪ್ರವಾಸೋದ್ಯಮ ಆಕರ್ಷಣೆಗೆ ಉಡುಪಿ ಜಿಲ್ಲೆಯ ತ್ರಾಸಿ, ಮರವಂತೆ ಸಹಿತ ಕಡಲ ತೀರಗಳ ಅಭಿವೃದ್ಧಿಗೆ 10 ಕೋಟಿ ರೂ., ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ರಸ್ತೆ ಸಂಪರ್ಕವಿಲ್ಲದ ಸ್ಥಳಗಳಲ್ಲಿ ಕಾಲು ಸಂಕಗಳ ನಿರ್ಮಿಸುವ ಗ್ರಾಮಬಂಧ ಸೇತುವೆ ಯೋಜನೆಗೆ 100 ಕೋಟಿ ರೂ.ಒದಗಿಸಲಾಗಿದೆ.

‘ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಈ ವರ್ಷ ಆಯೋಜಿಸಲಾಗುವುದು. ಯಾದಗಿರಿಯಲ್ಲಿ 1,478 ಕೋಟಿ ರೂ.ವೆಚ್ಚದಲ್ಲಿ ‘ಬಲ್ಕ್ ಡ್ರಗ್ಸ್ ಪಾರ್ಕ್', ಮಂಗಳೂರಿನ ಗಂಜಿಮಠದಲ್ಲಿ 100 ಎಕರೆ ಪ್ರದೇಶದಲ್ಲಿ 66 ಕೋಟಿ ರೂ.ವೆಚ್ಚದಲ್ಲಿ ‘ಪ್ಲಾಸ್ಟಿಕ್ ಪಾರ್ಕ್'ನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.

ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಕೋಟಿ ರೂ.ಖಾಸಗಿ ಬಂಡವಾಳ ಆಕರ್ಷಿಸುವ ಮೂಲಕ 5 ಲಕ್ಷ ಉದ್ಯೋಗ ಸೃಷ್ಟಿಸುವ ನಿರೀಕ್ಷೆಯನ್ನು ಹೊಂದಲಾಗಿದೆ ಎಂದು ತಿಳಿಸಿರುವ ಯಡಿಯೂರಪ್ಪ, ರಾಷ್ಟ್ರೀಯ ಖನಿಜ ನೀತಿಗೆ ಸಮಾನವಾಗಿ ರಾಜ್ಯ ಖನಿಜ ನೀತಿ-2021-26 ಅನ್ನು ರೂಪಿಸಲಾಗುವುದು, ಗಣಿ, ಕಲ್ಲುಗಣಿ ಗುತ್ತಿಗೆ, ಕ್ರಷರ್ ಲೈಸನ್ಸ್ ಕೋರಿ ಸಲ್ಲಿಸುವ ಅರ್ಜಿ ತ್ವರಿತ ವಿಲೇಗೆ ಏಕಗವಾಕ್ಷಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಪ್ರಕಟಿಸಿದರು.

ಸೈಬರ್ ಭದ್ರತಾ ಕಾರ್ಯನೀತಿ, ಕ್ವಾಂಟಂ ಕಂಪ್ಯೂಟರಿಂಗ್ ಮತ್ತು ಸಂಬಂಧಿತ ತಂತ್ರಜ್ಞಾನಗಳ ಸಂಶೋಧನೆ ಉತ್ತೇಜಿಸಲು 10 ಕೋಟಿ ರೂ.ವೆಚ್ಚದಲ್ಲಿ ‘ಸಂಶೋಧನಾ ಪಾರ್ಕ್', ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಉತ್ತರ ಕನ್ನಡದ ಶಿರಸಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು 7 ಕೋಟಿ ರೂ.ವೆಚ್ಚದಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ನಾಗರಿಕರು ತಮ್ಮ ಕುಟುಂಬದೊಂದಿಗೆ ವಿರಾಮಕ್ಕೆ ಮೂರು ವೃಕ್ಷೊದ್ಯಾನವನಗಳ ಅಭಿವೃದ್ಧಿ, ಜಯದೇವ ಹೃದ್ರೋಗ ಆಸ್ಪತ್ರೆ ಮೇಲಿನ ಒತ್ತಡ ಕಡಿಮೆ ಮಾಡಲು ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ.ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದರು.

ನೂತನ ವಿಜಯನಗರ ಜಿಲ್ಲೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು, ಕನ್ನಡ ಭಾಷೆಗೆ ತಾಂತ್ರಿ ಪರಿಕರಗಳ ಸೂಟ್ ಒಂದನ್ನು 2 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಸ್ವಂತ ಕಟ್ಟಡಗಳಿಲ್ಲ ನೂರು ಪೊಲೀಸ್ ಠಾಣೆಗಳಿಗೆ ಮುಂದಿನ 5 ವರ್ಷಗಳಲ್ಲಿ 200 ಕೋಟಿ ರೂ.ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ, ಕರಾವಳಿ ಪ್ರದೇಶದ ಸುರಕ್ಷತೆಗೆ ಕರಾವಳಿ ಕಾವಲು ಪಡೆಯನ್ನು ಆಧುನಿತ ತಂತ್ರಜ್ಞಾನವನ್ನು ಆಳವಡಿಸಿ ಬಲಪಡಿಸುವುದು.

ಕೃಷಿ ಮತ್ತು ಪೂರಕ ವಲಯಕ್ಕೆ ಒಟ್ಟು-31,028 ಕೋಟಿ ರೂ., ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ-62,150 ಕೋಟಿ ರೂ., ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆಗೆ-52,529 ಕೋಟಿ ರೂ., ಬೆಂಗಳೂರು ಸಮಗ್ರ ಅಭಿವೃದ್ಧಿಗೆ-7,795 ಕೋಟಿ ರೂ. ಹಾಗೂ ಸಂಸ್ಕೃತಿ, ಪರಂಪರೆ-ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ-2,645 ಕೋಟಿ ರೂ. ಹಾಗೂ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ -52,519 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಯಡಿಯೂರಪ್ಪ ಪ್ರಕಟಿಸಿದರು.

2,46,207 ಕೋಟಿ ರೂ.ಬಜೆಟ್ ಗಾತ್ರ

2021-22 ಆಯವ್ಯಯ ಗಾತ್ರ(ಸಂಚಿತ ನಿಧಿ)-2,46,207 ಕೋಟಿ ರೂ., ಒಟ್ಟು ಸ್ವೀಕೃತಿ-2,43,734 ಕೋಟಿ ರೂ., ರಾಜಸ್ವ ಸ್ವೀಕೃತಿ-1,72,271 ಕೋಟಿ ರೂ., ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು

ಬಂಡವಾಳ ಸ್ವೀಕೃತಿ 71,463 ಕೋಟಿ ರೂ. ಒಟ್ಟು ವೆಚ್ಚ- 2,46,207 ಕೋಟಿ ರೂ., ರಾಜಸ್ವ ವೆಚ್ಚ 1,87,405 ಕೋಟಿ ರೂ., ಬಂಡವಾಳ ವೆಚ್ಚ 44,237 ಕೋಟಿ ರೂ. ಹಾಗೂ ಸಾಲ

ಮರುಪಾವತಿ 14,565 ಕೋಟಿ ರೂ.

ರಾಜ್ಯದ ಅರ್ಥವ್ಯವಸ್ಥೆ

2020-21ನೆ ಸಾಲಿನಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ತೆಗೆದುಕೊಂಡ ಲಾಕ್‍ಡೌನ್ ಕ್ರಮಗಳಿಂದಾಗಿ ರಾಜ್ಯದ ಒಟ್ಟಾರೆ ಆಂತರಿಕ ಉತ್ಪನ್ನವು(ಜಿಎಸ್‍ಡಿಪಿ) ಕುಸಿತ ಕಂಡಿದೆ. ಮುಂಗಡ ಅಂದಾಜುಗಳ ಪ್ರಕಾರ ಸ್ಥಿರ ಬೆಲೆಗಳಲ್ಲಿ ರಾಜ್ಯದ ಒಟ್ಟಾರೆ ಆಂತರಿಕ ಉತ್ಪನ್ನವು 2019-20ನೆ ಸಾಲಿಗೆ ಹೋಲಿಸಿದರೆ ಶೇ.2.6ರಷ್ಟು ಕುಸಿತ ಕಂಡಿದೆ.

2020-21ರ ಅವಧಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬಂದ ಪ್ರವಾಹದ ನಡುವೆಯೂ ಕೃಷಿ ಕ್ಷೇತ್ರದಲ್ಲಿ ಶೇ.6.4ರಷ್ಟು ಗಣನೀಯ ಬೆಳವಣಿಗೆ ಕಂಡು ಬಂದಿದೆ. ಆದರೆ, ಕೈಗಾರಿಕೆ ಮತ್ತು ಸೇವಾ ವಲಯವು ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಕುಸಿತ ಕಂಡಿದೆ. 2020-21ನೆ ಸಾಲಿನಲ್ಲಿ ಕೈಗಾರಿಕೆ ವಲಯವು ಶೇ.5.1ರಷ್ಟು ಹಾಗೂ ಸೇವಾ ವಲಯವು ಶೇ.3.1ರಷ್ಟು ಇಳಿಕೆ ಕಂಡಿದೆ.

ರಾಜ್ಯದ ಹಣಕಾಸು ಪರಿಸ್ಥಿತಿ

ರಾಜ್ಯದ ತೆರಿಗೆ ಪಾಲು 2020-21ನೆ ಸಾಲಿನಲ್ಲಿ ಆಯವ್ಯಯದಲ್ಲಿ ಅಂದಾಜಿಸಿದ್ದ 28,591 ಕೋಟಿ ರೂ.ಗಳಿಗೆ ಎದುರಾಗಿ ಪರಿಷ್ಕೃತ ಅಂದಾಜಿನಲ್ಲಿ 20,053 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ. 2020-21ನೆ ಸಾಲಿನಲ್ಲಿ ರಾಜ್ಯದ ರಾಜಸ್ವ ಸಂಪನ್ಮೂಲವು ಆಯವ್ಯಯದ ಗುರಿಗಳನ್ನು ತಲುಪಲು ಕಷ್ಟವಾಗಿದೆ. 2021-22ನೆ ಸಾಲಿಗೆ ರಾಜ್ಯಕ್ಕೆ 24,273 ಕೋಟಿ ರೂ.ಗಳ ತೆರಿಗೆ ಪಾಲನ್ನು ನೀಡುವುದಾಗಿ ಕೇಂದ್ರ ಸರಕಾರ ತನ್ನ ಆಯವ್ಯಯದಲ್ಲಿ ತಿಳಿಸಿದೆ.

ರಾಜ್ಯದ ಜಿಎಸ್‍ಟಿ ಸಂಗ್ರಹಣೆಯು ಕೋವಿಡ್-19 ಕಾರಣದಿಂದ ಇಳಿಕೆಯಾಗಿದೆ. 2020-21ನೆ ಸಾಲಿನಲ್ಲಿ 12,407 ಕೋಟಿ ರೂ.ಗಳನ್ನು ಕೇಂದ್ರ ಸರಕಾರವು ಸಾಲ ಪಡೆದು ರಾಜ್ಯಕ್ಕೆ ಜಿ.ಎಸ್.ಟಿ.ಪರಿಹಾರವಾಗಿ ನೀಡುತ್ತದೆ. 2021-22ನೆ ಸಾಲಿಗೆ ಕೇಂದ್ರ ಸರಕಾರವು ರಾಜ್ಯಗಳಿಗೆ ಜಿಎಸ್‍ಡಿಪಿಯ ಶೇ.4ರವರೆಗೆ ಸಾಲ ಪಡೆಯಲು ಅನುಮತಿಸಿದ್ದು, ಅದರಂತೆ ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ಕ್ಕೆ ತಿದ್ದುಪಡಿ ಮಾಡಲು ಪ್ರಸ್ತುತ ಬಜೆಟ್‍ನಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗುವುದು ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X