ದ.ಕ. ಜಿಲ್ಲೆ : 14 ಮಂದಿಗೆ ಕೋವಿಡ್
ಮಂಗಳೂರು, ಮಾ.8: ದ.ಕ. ಜಿಲ್ಲೆಯಲ್ಲಿ ಸೋಮವಾರ 14 ಮಂದಿಗೆ ಕೊರೋನ ಸೋಂಕು ತಗುಲಿದ್ದು, 20 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 34,583 ಸೋಂಕಿತರ ಪೈಕಿ 33,624 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 740 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜಿಲ್ಲೆಯಲ್ಲಿ 35,743 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 36,80,810 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story