Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ 28 ಕಡೆ ಏಕಕಾಲದಲ್ಲಿ ಎಸಿಬಿ...

ರಾಜ್ಯದ 28 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ: 9 ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಶೋಧ

ವಾರ್ತಾಭಾರತಿವಾರ್ತಾಭಾರತಿ9 March 2021 9:42 AM IST
share
ರಾಜ್ಯದ 28 ಕಡೆ ಏಕಕಾಲದಲ್ಲಿ ಎಸಿಬಿ ದಾಳಿ: 9 ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಶೋಧ

ಬೆಂಗಳೂರು, ಮಾ.9: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಬೆನ್ನಲ್ಲೇ ವಿವಿಧ ಇಲಾಖೆಗಳ 9 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ ಮತ್ತು ಕಚೇರಿಗಳು ಸೇರಿ 11 ಜಿಲ್ಲೆಗಳ 28 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸಿಬಿ ತಿಳಿಸಿದೆ.

ರಾಜಧಾನಿ ಬೆಂಗಳೂರು, ಮೈಸೂರು, ದಾವಣಗೆರೆ, ಬೆಳಗಾವಿ, ಚಿಕ್ಕಬಳ್ಳಾಪುರ, ಯಾದಗಿರಿ, ಕೋಲಾರ, ಉಡುಪಿ, ಮಂಡ್ಯ, ಕಾರವಾರ, ಕನಕಪುರ ಕಡೆಗಳಲ್ಲಿ ಈ ದಾಳಿಗಳು ನಡೆದಿವೆ

ಯಾವೆಲ್ಲ ಅಧಿಕಾರಿಗಳು?:

ವಿಕ್ಟರ್ ಸೈಮನ್, ಪೊಲೀಸ್ ಇನ್ಸ್‌ಪೆಕ್ಟರ್ ಬಿಎಂಟಿಎಫ್: ಇವರ ಬೆಂಗಳೂರಿನ ಕಸವನಹಳ್ಳಿಯ ಮನೆ, ಮೈಸೂರಿನ ತಂದೆಯ ಹಾಗೂ ಮಾವನ ಮನೆ ಮತ್ತು ಬೆಂಗಳೂರಿನ ಬಿಎಂಟಿಎಫ್ ಕಚೇರಿ ಮೇಲೆ ದಾಳಿ ಪರಿಶೀಲನೆ.

*ಕೆ.ಸುಬ್ರಹ್ಮಣ್ಯಂ, ಜೂನಿಯರ್ ಇಂಜಿನಿಯರ್ ಅಸಿಸ್ಟೆಂಟ್ ಡೈರೆಕ್ಟರ್ ಟೌನ್ ಫ್ಲಾನಿಂಗ್ ಕಚೇರಿ ಬಿಬಿಎಂಪಿ: ಇವರ ಬೆಂಗಳೂರಿನ ಸಹಕಾರ ನಗರ ನಿವಾಸ ಮತ್ತು ಯಲಹಂಕ ಕಚೇರಿ ಮೇಲೆ ದಾಳಿ ಪರಿಶೀಲನೆ.

* ಹನಮಂತ ಶಿವಪ್ಪ ಚಿಕ್ಕಣ್ಣನವರ, ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಬೆಳಗಾವಿ: ಈ ಆಧಿಕಾರಿಯ ಮನೆ, ಅಂಕೋಲಾ, ಬೆಳಗಾವಿ ಕಚೇರಿ, ಜಮಖಂಡಿಯ ಹುಟ್ಟೂರು, ಬೆಳಗಾವಿಯ ಫ್ಲಾಟ್ ಗಳ ಮೇಲೆ ದಾಳಿ. (ಎಸ್ಪಿ ನ್ಯಾಮಗೌಡ ನೇತೃತ್ವದಲ್ಲಿ ಎಸಿಬಿ ದಾಳಿ ಪರಿಶೀಲನೆ).

* ಸುಬ್ರಹ್ಮಣ್ಯ ಕೆ ವಡ್ಡರ್, ಜಂಟಿ ನಿರ್ದೇಶಕರು, ಟೌನ್ ಆ್ಯಂಡ್ ಕಂಟ್ರಿ ಪ್ಲ್ಯಾನಿಂಗ್ ಮೈಸೂರು: ಇವರ ಉಡುಪಿಯಲ್ಲಿರುವ ಮನೆ, ಕಾರವಾರದ ತಾಯಿ ಮನೆ, ಮೈಸೂರಿನ ಬಾಡಿಗೆ ಮನೆ ಕಚೇರಿ ಮೇಲೆ ದಾಳಿ.( ಎಸ್ಪಿ ಬೋಪಯ್ಯ ನೇತೃತ್ವದ ಎಸಿಬಿ ತಂಡದಿಂದ ದಾಳಿ ಪರಿಶೀಲನೆ)

* ಮುನಿ ಗೋಪಾಲರಾಜು, ಸೂಪರಿಂಟೆಂಡೆಂಟ್ ಇಂಜಿನಿಯರ್ ಚೆಸ್ಕಾಂ ಮೈಸೂರು: ಇವರ ಮೈಸೂರು ಕುವೆಂಪು ನಗರದ ಚೆಸ್ಕಾಂ ಕಚೇರಿ, ಗೋಕುಲಂನ ನಿವಾಸ, ಕನಕಪುರದ ಹುಟ್ಟೂರಿನ ಮನೆ ಮೇಲೆ ದಾಳಿ.

* ಕೃಷ್ಣೇಗೌಡ, ಪ್ರಾಜೆಕ್ಟ್ ಡೈರೆಕ್ಟರ್, ನಿರ್ಮಿತಿ ಕೇಂದ್ರ ಚಿಕ್ಕಬಳ್ಳಾಪುರ: ಇವರಿಗೆ ಸೇರಿದ ಕೋಲಾರದ ಮನೆ, ಚಿಕ್ಕಬಳ್ಳಾಪುರದ ಕಚೇರಿ, ಸಹೋದರರ ಮನೆಗಳಲ್ಲಿ ಶೋಧ. (ಎಸ್ಪಿ ಕಲಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಪರಿಶೀಲನೆ)

* ಚನ್ನವೀರಪ್ಪ, ಎಫ್‌ಡಿಎ ಆರ್ ಟಿಒ ಮೈಸೂರು: ಮಂಡ್ಯದ ಕುವೆಂಪು ನಗರದಲ್ಲಿರುವ ಮನೆ, ಹುಟ್ಟೂರು ಹಲಕೆರೆಯ ಮನೆ, ಮೈಸೂರು ಲಕ್ಷ್ಮೀಪುರಂ ಕಚೇರಿ ಮೇಲೆ ದಾಳಿ.

* ರಾಜು ಫತ್ತರ್, ಅಕೌಂಟೆಂಟ್ ಆಫೀಸರ್ ಜೆಸ್ಕಾಂ ಯಾದಗಿರಿ: ಯಾದಗಿರಿಯಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ಪರಿಶೀಲನೆ.

*ಕೆ.ಎಂ.ಪ್ರಥಮ್, ಡೆಪ್ಯುಟಿ ಡೈರೆಕ್ಟರ್ ಪ್ಯಾಕ್ಟರಿಸ್ ಆ್ಯಂಡ್ ಬಾಯ್ಲರೀಸ್ ದಾವಣಗೆರೆ: ಇವರ ಬೆಂಗಳೂರಿನ ಸಂಜಯನಗರ ಬಳಿಯ ನಾಗಶೆಟ್ಟಿಹಳ್ಳಿ ಮನೆ, ಸಂಜಯ ನಗರದ ಸಹೋದರನ ಮನೆ, ದಾವಣಗೆರೆಯ ಕಚೇರಿ ಮೇಲೆ ದಾಳಿ ಪರಿಶೀಲನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X