ಮಾಣಿ: ಶೌಚಾಲಯ ಉದ್ಘಾಟನೆ

ವಿಟ್ಲ, ಮಾ.9: ಬಂಟ್ವಾಳ ತಾಲೂಕು ಮಾಣಿಯ ಸಂತೆ ಮಾರುಕಟ್ಟೆ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಉದ್ಘಾಟಿಸಲಾಯಿತು.
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಉದ್ಘಾಟಿಸಿದರು. ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹೀಂ ಕೆ. ಮಾಣಿ, ನಾರಾಯಣ ಶೆಟ್ಟಿ ತೋಟ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ ಡಿ. ಪೂಜಾರಿ, ಸೀತಾ ಮೊದಲಾದವರು ಉಪಸ್ಥಿತರಿದ್ದರು.
Next Story





