Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಜೈಶ್ರೀರಾಮ್' ಘೋಷಣೆಗೆ ತಡೆ ಹೇರಲು ಕೋರಿ...

'ಜೈಶ್ರೀರಾಮ್' ಘೋಷಣೆಗೆ ತಡೆ ಹೇರಲು ಕೋರಿ ಸಲ್ಲಿಸಿರುವ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 March 2021 2:38 PM IST
share
ಜೈಶ್ರೀರಾಮ್ ಘೋಷಣೆಗೆ ತಡೆ ಹೇರಲು ಕೋರಿ ಸಲ್ಲಿಸಿರುವ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ,ಮಾ.9: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಮತ್ತು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಮತ್ತು ಅದರ ನಾಯಕರು ‘ಜೈ ಶ್ರೀರಾಮ್’ ಘೋಷಣೆಯನ್ನು ಬಳಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಜಾಗೊಳಿಸಿದೆ.

ಪ.ಬಂಗಾಳದಲ್ಲಿ ಮಾತ್ರ ಎಂಟು ಹಂತಗಳಲ್ಲಿ ಚುನಾವಣೆ ನಡೆಸುವುದು ಸಂವಿಧಾನದ ವಿಧಿ 14ರಡಿ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರಾದ ನ್ಯಾಯವಾದಿ ಎಂ.ಎಲ್.ಶರ್ಮಾ ವಾದಿಸಿದ್ದರು. ತನ್ನಿಚ್ಛೆಯಂತೆ ಐದು ರಾಜ್ಯಗಳನ್ನು ಅಸಮಾನವಾಗಿ ನಡೆಸಿಕೊಳ್ಳುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡುವ ಯಾವುದೇ ಕಾನೂನು ಇನ್ನೂ ಅಸಿತ್ವದಲ್ಲಿಲ್ಲ. ಇತರ ರಾಜ್ಯಗಳಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆಸುವಾಗ ಯಾವುದೇ ಭಯೋತ್ಪಾದಕ ದಾಳಿಯ ಭೀತಿಯಲ್ಲಿಲ್ಲದ ಮತ್ತು ವಿವಾದಿತ ಯುದ್ಧ ವಲಯದಡಿ ಇಲ್ಲದಿರುವ ಪ.ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆಯನ್ನು ನಡೆಸುವುದು ಸಂವಿಧಾನದ ವಿಧಿ 14ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದೂ ಶರ್ಮಾ ತನ್ನ ಅರ್ಜಿಯಲ್ಲಿ ಹೇಳಿದ್ದರು.

ಪ.ಬಂಗಾಳದಲ್ಲಿ ಮಾ.27ರಿಂದ ಎ.29ರವರೆಗೆ ಎಂಟು ಹಂತಗಳಲ್ಲಿ,ಕೇರಳ,ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಎ.6ರಂದು ಒಂದೇ ಹಂತದಲ್ಲಿ ಮತ್ತು ಅಸ್ಸಾಮ್‌ನಲ್ಲಿ ಮಾ.27 ಮತ್ತು ಎ.6ರ ನಡುವೆ ಮೂರು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಚುನಾವಣಾ ಆಯೋಗವು ಪ್ರಕಟಿಸಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ‘ಜೈ ಶ್ರೀರಾಮ್’ ಘೋಷಣೆಯ ಬಳಕೆಯನ್ನೂ ತನ್ನ ಅರ್ಜಿಯಲ್ಲಿ ಆಕ್ಷೇಪಿಸಿದ್ದ ಶರ್ಮಾ,ಈ ಪ್ರಕರಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಪ.ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡುವಂತೆ ಕೋರಿದ್ದರು.

ಜಾತ್ಯತೀತ ವಾದವು ಸಂವಿಧಾನದ ಬದಲಿಸಲು ಸಾಧ್ಯವಿಲ್ಲದ ಮೂಲ ಸ್ವರೂಪವಾಗಿದೆ. ಧಾರ್ಮಿಕವಾಗಿ ಪ್ರಚೋದಕ ಘೋಷಣೆ ‘ಜೈ ಶ್ರೀರಾಮ್’ ಭಾರತದ ಪ್ರಜೆಗಳ ನಡುವೆ ಕೋಮು ಅಸಾಮರಸ್ಯ ಮತ್ತು ದ್ವೇಷವನ್ನು ಹುಟ್ಟುಹಾಕುತ್ತಿದೆ ಎಂದು ಬೆಟ್ಟು ಮಾಡಿದ್ದ ಶರ್ಮಾ,ಘೋಷಣೆಯ ಬಳಕೆಯು ಜನ ಪ್ರಾತಿನಿಧ್ಯ ಕಾಯ್ದೆಯ 123 ಮತ್ತು 125 ಕಲಮ್‌ಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು.

ಶರ್ಮಾರ ವಾದಗಳನ್ನು ತಳ್ಳಿಹಾಕಿದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ಪೀಠವು ಅರ್ಜಿಯನ್ನು ವಜಾಗೊಳಿಸಿತಲ್ಲದೆ,ಈ ಸಂಬಂಧ ಉಚ್ಚ ನ್ಯಾಯಾಲಯ ಅಥವಾ ಚುನಾವಣಾ ಆಯೋಗವನ್ನು ಸಂಪರ್ಕಿಸುವಂತೆ ಅವರಿಗೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X