ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ತಿರಸ್ಕೃತ
ಉಡುಪಿ, ಮಾ.9: ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತನಾದ ಆರೋಪಿಗೆ ಕುಂದಾಪುರದಲ್ಲಿರುವ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು ಜಾಮೀನು ತಿರಸ್ಕರಿಸಿ ಆದೇಶ ನೀಡಿದೆ.
ಆರೋಪಿಯನ್ನು ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆ ನಿವಾಸಿ ಗಗನ್ ಪೂಜಾರಿ (25) ಎಂದು ಗುರುತಿಸಲಾಗಿದೆ. ಫೆ.23ರಂದು ರಾತ್ರಿ ಆರೋಪಿ ಗಗನ್, ಅಕ್ಷಯ್ ಮೊಗವೀರನ ತಲೆಗೆ ರಾಡಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಈತನ ವಿರುದ್ಧ ಕೋಟ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗೆ ಜಾಮೀನು ನೀಡುವಂತೆ ಸಲ್ಲಿಸಲಾದ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ನ್ಯಾಯಾ ಧೀಶ ನರಹರಿ ಪ್ರಭಾಕರ್ ಮರಾಠೆ ಆದೇಶ ನೀಡಿದರು. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.
Next Story





