Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ವೈದ್ಯಕೀಯ ಸಂಸ್ಥೆ ನೋಂದಣಿಗೆ...

ಖಾಸಗಿ ವೈದ್ಯಕೀಯ ಸಂಸ್ಥೆ ನೋಂದಣಿಗೆ ಕಾಲಾವಕಾಶ ನಿಗದಿ: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ9 March 2021 8:58 PM IST
share
ಖಾಸಗಿ ವೈದ್ಯಕೀಯ ಸಂಸ್ಥೆ ನೋಂದಣಿಗೆ ಕಾಲಾವಕಾಶ ನಿಗದಿ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಮಾ.9: ಕರ್ನಾಟಕ ಖಾಸಗಿ ವೈದ್ಯಕೀಯ ನೋಂದಣಿ ಪ್ರಾಧಿಕಾರದ (ಕೆಪಿಎಂಇ) ಅಡಿಯಲ್ಲಿ ಖಾಸಗಿ ವೈದ್ಯಕೀಯ ಆರೋಗ್ಯ ಸಂಸ್ಥೆಗಳು ಮಾ.31ರವರೆಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಖಾಸಗಿ ವೈದ್ಯಕೀಯ ನೋಂದಣಿ ಪ್ರಾಧಿಕಾರದ ಸಭೆ, ಮಂಗನ ಕಾಯಿಲೆ ನಿಯಂತ್ರಣ ಕಾರ್ಯಕ್ರಮದ ಕುರಿತ ಅಂತರ್ ಇಲಾಖಾ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ನವೀಕರಣದ ಅಡಿಯಲ್ಲಿ 462 ಸಂಸ್ಥೆಗಳ ನವೀಕರಣ ಬಾಕಿ ಇದ್ದು, 147 ಸಂಸ್ಥೆಗಳ ನವೀಕರಣ ಪ್ರಗತಿಯಲ್ಲಿದೆ. 45 ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದ್ದು, 270 ಸಂಸ್ಥೆಗಳಿಗೆ ದೂರವಾಣಿ ಮೂಲಕ ಸೂಚಿಸಲಾಗಿದೆ. ಈಗಾಗಲೇ ನೋಂದಣಿ ಮತ್ತು ನವೀಕರಣ ಮಾಡಲು ಬಾಕಿ ಇರುವ ಖಾಸಗಿ ವೈದ್ಯಕೀಯ ಆರೋಗ್ಯ ಸಂಸ್ಥೆಗಳು ಪ್ರಸ್ತುತ ಸಾಲಿನ ಮಾರ್ಚ್ 31ರವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದರು.

ಕೇರಳ ರಾಜ್ಯ ಸೇರಿದಂತೆ ಹೊರಜಿಲ್ಲೆಗಳಿಂದ ಬರುವ ವೃತ್ತಿಪರರು, ಪ್ರವಾಸಿಗರು, ವಿದ್ಯಾರ್ಥಿಗಳು ಸೇರಿದಂತೆ ಚಿಕಿತ್ಸೆಗಾಗಿ ಬರುವವರು ಹಾಗೂ ಎಲ್ಲ ರೀತಿಯ ವಾಹನ ಸವಾರರಿಗೂ ಕೋವಿಡ್ ತಪಾಸಣೆ ನಡೆಸಿ, ಅವರಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಕಂಡುಬಂದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಬೇಕು. ಇದರ ಬಗ್ಗೆ ಎಲ್ಲ ಖಾಸಗಿ ಆಸ್ಪತ್ರೆಗಳಿಂದ ಎಎಲ್‌ಐ ಹಾಗೂ ಎಸ್‌ಎಆರ್‌ಐ ಪ್ರಕರಣಗಳ ವರದಿಗಳನ್ನು ದಿನನಿತ್ಯ ಈ ಹಿಂದೆ ತಿಳಿಸಿರುವಂತೆ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಿದರು.

ಫೈರ್ ಸೇಫ್ಟಿ ಮತ್ತು ಇಲೆಕ್ಟ್ರಿಕಲ್ ಆಡಿಟ್‌ನ್ನು ಕಾಲಕಾಲಕ್ಕೆ ಸೂಕ್ತ ಪ್ರಾಧಿಕಾರದಿಂದ ತಪ್ಪದೇ ಮಾಡಿಸಬೇಕು. ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಫೈರ್ ಸೇಫ್ಟಿ ಅಳವಡಿಸಬೇಕು. ಒಂದು ವೇಳೆ ಪರಿಶೀಲನೆ ಸಂದರ್ಭದಲ್ಲಿ ಫೈರ್ ಸೇಫ್ಟಿ ಅಳವಡಿಸದಿದ್ದಲ್ಲಿ ಒಂದು ತಿಂಗಳ ಕಾಲಾವಕಾಶ ನೀಡಬೇಕು. ನಂತರವೂ ಅವರು ಜಾಗೃತರಾಗದಿದ್ದಲ್ಲಿ ಅಂತಹ ಆಸ್ಪತ್ರೆಗಳ ಪರವಾನಿಗೆಯನ್ನು ರದ್ದುಮಾಡಬೇಕು ಎಂದು ಸೂಚನೆ ನೀಡಿದರು.

ಕೆ.ಪಿ.ಎಂ.ಇ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 1,884 ಖಾಸಗಿ ವೈದ್ಯಕೀಯ ಸಂಸ್ಥೆಗಳು ದಾಖಲಾಗಿದ್ದು, ಈಗಾಗಲೇ 1,098 ಸಂಸ್ಥೆಗಳಿಗೆ ಭೇಟಿ ನೀಡಲಾಗಿದೆ. 515 ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ್ದು, 74 ಸಂಸ್ಥೆಗಳಿಗೆ ಸಣ್ಣ ಪುಟ್ಟ ತಪ್ಪುಗಳಿಗೆ ನೋಟಿಸ್ ನೀಡಲಾಗಿದೆ ಎಂದರು.
2017ನೇ ಸಾಲಿನಿಂದ ಜಿಲ್ಲೆಯಲ್ಲಿ ನವೀಕರಣಕ್ಕೆ ಬಾಕಿ ಇರುವ ಸಂಸ್ಥೆಗಳಿಗೆ ಈಗಾಗಲೇ ಹೊಸದಾಗಿ ನವೀಕರಣ ಮಾಡಲು ಸೂಚಿಸಲಾಗಿದೆ ಎಂದರು.

ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಯಾವುದೇ ರೀತಿಯ ದೂರುಗಳು ಬಂದಲ್ಲಿ ಜಿಲ್ಲಾಡಳಿತವು ಅನೀರಿಕ್ಷಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಲಿದೆ. ಭೇಟಿ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ದರಪಟ್ಟಿಯನ್ನು ಅಳವಡಿಸದೇ ಇರುವುದು ಕಂಡುಬಂದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಯಾವುದೇ ಸೂಚನೆ ನೀಡದೇ ಪರವಾನಿಗೆಯನ್ನು ರದ್ದು ಪಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 20 ಆಸ್ಪತ್ರೆಗಳು ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿದ್ದು, ತುರ್ತು ಸಂದರ್ಭದಲ್ಲಿ ರೋಗಿಯು ಆಸ್ಪತ್ರೆಗೆ ದಾಖಲಾಗಿ 24 ಗಂಟೆಗಳಲ್ಲಿ ಮರಣ ಹೊಂದಿದ್ದಲ್ಲಿ ಅಂತಹ ರೋಗಿಯಿಂದ ಯಾವುದೇ ರೀತಿಯಲ್ಲಿ ಹಣ ಸಂಗ್ರಹಣೆ ಮಾಡಬಾರದು. ಅವರಿಗೆ ಆಯುಷ್ಮಾನ್ ಯೋಜನೆಯ ಸಂಪೂರ್ಣ ಸೌಲಭ್ಯ ನೀಡಬೇಕು ಎಂದು ಸೂಚಿಸಿದರು.

ಆಸ್ಪತ್ರೆಗೆ ಬರುವ ರೋಗಿಗಳಿಂದ ಅಧಿಕ ಮುಂಗಡ ಹಣವನ್ನು ಸಂಗ್ರಹಣೆ ಮಾಡದೇ ಅವರ ಚಿಕಿತ್ಸೆಗೆ ಅಗತ್ಯವಿರುವ ಪ್ಯಾಕೇಜ್‌ನ ಹಣವನ್ನು ಪಡೆದು ಚಿಕಿತ್ಸೆ ನೀಡಬೇಕು. ದುಬಾರಿ ವೆಚ್ಚ ಪಾವತಿಸುವಂತೆ ಬೇಡಿಕೆ ಇಡಬಾರದು. ಆಸ್ಪತ್ರೆಗಳಲ್ಲಿ ಹಾಸಿಗೆ ವ್ಯವಸ್ಥೆ ಇದ್ದರೂ ರೋಗಿಗಳನ್ನು ದಾಖಲಾತಿ ಮಾಡಿಕೊಳ್ಳದಂತಹ ಸಂದರ್ಭದಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕ್ಯಾಸನೂರು ಕಾಡಿನ ಕಾಯಿಲೆ/ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಕಾಡುಗಳಲ್ಲಿ ಮಂಗಗಳು ಸತ್ತು ಅವುಗಳ ಕಳೆ ಬರಹದಿಂದ ಉಂಟಾಗುವ ಚಿಗಟೆಗಳು ಕಾಡುಗಳಿಗೆ ಮೇಯಲು ಹೋಗುವ ಜಾನುವಾರುಗಳ ಮೇಲೆ ಹತ್ತಿ ನಂತರದಲ್ಲಿ ಜನರಿಗೆ ಚಿಗಟೆಗಳು ಕಡಿಯುವುದರಿಂದ ಮಂಗನ ಕಾಯಿಲೆ ರೋಗವು ಹರಡುತ್ತದೆ. ಇವುಗಳ ನಿಯಂತ್ರಣಕ್ಕೆ ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ನೋಡಲ್ ಅಧಿಕಾರಿ ಡಾ. ರತ್ನಾಕರ್, ವಿಭಾಗೀಯ ಸಂಯೋಜಕಿ ಡಾ. ನೌಶದ್ ಬಾನು, ಅಗ್ನಿಶಾಮಕ ಇಲಾಖೆಯ ಅಧಿಕಾರಿ ಭರತ್ ಕುಮಾರ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷೆ ಡಾ. ದೀಪಾ ಪ್ರಭು, ಜಿಲ್ಲಾ ತಪಾಸಣಾ ಮೇಲ್ವಿಚಾರಣಾ ಸಮಿತಿಯ ಸದಸ್ಯರಾದ ಡಾ.ಅನಿತಾರಾಜ್ ಭಟ್, ಡಾ. ಚಿದಾನಂದ್ ಮೂರ್ತಿ, ಡಾ. ಅಮೃತ ಭಂಡಾರಿ, ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ. ವತ್ಸಲಾ ಕಾಮತ್, ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾದ ಡಾ. ಶೈಲಜಾ, ಡಾ. ರವಿಚಂದ್ರ, ಶೆರ್ಲಿ ಟಿ. ಬಾಬು, ವಸಂತ ಪೆರಾಜೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X