Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘2ಎ’ಗೆ ಪ್ರಬಲ ಜಾತಿಗಳ ಸೇರ್ಪಡೆ ಬೇಡ:...

‘2ಎ’ಗೆ ಪ್ರಬಲ ಜಾತಿಗಳ ಸೇರ್ಪಡೆ ಬೇಡ: ಹಿಂದುಳಿದ ವರ್ಗಗಳ ವೇದಿಕೆಯಿಂದ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ9 March 2021 9:49 PM IST
share
‘2ಎ’ಗೆ ಪ್ರಬಲ ಜಾತಿಗಳ ಸೇರ್ಪಡೆ ಬೇಡ: ಹಿಂದುಳಿದ ವರ್ಗಗಳ ವೇದಿಕೆಯಿಂದ ಸಿಎಂಗೆ ಮನವಿ

ಬೆಂಗಳೂರು, ಮಾ.9: ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು. ಜತೆಗೆ ಈ ಬಗ್ಗೆ ರಚನೆ ಮಾಡಿರುವ ಉನ್ನತ ಮಟ್ಟದ ಸಮಿತಿ ರದ್ದುಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹಿಸಿದೆ.

ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಅವರ ನಿಯೋಗದ ಪ್ರಮುಖ ಸದಸ್ಯರು, ಮನವಿ ಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಪ್ರವರ್ಗ 2(ಎ)ನಲ್ಲಿರುವ 102 ಅತಿ ಹಿಂದುಳಿದ ಜಾತಿ ವರ್ಗಗಳು ಒಂದಾಗಿ ಈ ಮನವಿಯನ್ನು ನೀಡುತ್ತಿದ್ದೇವೆ. ಪ್ರವರ್ಗ 2(ಎ)ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಈಗಾಗಲೇ ಪ್ರವರ್ಗ 2(ಎ)ದಲ್ಲಿರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ. ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿಗಳಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವರ್ಗ 2(ಎ)ದಲ್ಲಿರುವ ಅತಿ ಹಿಂದುಳಿದ ಜಾತಿಗಳ ಅಸ್ತಿತ್ವ ಮತ್ತು ಅಸ್ಮಿತೆ ಕಾಪಾಡುವ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ವೇದಿಕೆಯ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ಧಗೊಂಡಿರುವ ಜಾತಿವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ)ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ ಎಂದು ಹೇಳಿದರು.

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಕಳೆದ ಕೆಲವು ದಿನಗಳಿಂದಲೂ ತಮ್ಮನ್ನು ಪ್ರವರ್ಗ 2(ಎ)ಗೆ ಸೇರಿಸಬೇಕೆಂದು ಸರಕಾರದ ಮೇಲೆ ಒತ್ತಡ ತರುವ ಹೋರಾಟವನ್ನು ಹಮ್ಮಿಕೊಂಡಿರುವ ವೀರಶೈವ, ಪಂಚಮಸಾಲಿ ಸಮುದಾಯ ಮತ್ತು ಇವರ ಹಾದಿಯಲ್ಲೇ ಹೊರಟ ಇತರೇ ಪ್ರಭಾವಿ ಸಮುದಾಯಗಳ ಒತ್ತಡವನ್ನು ಗಮನಿಸಿದರೆ ಈ ರಾಜ್ಯದಲ್ಲಿ ನಮ್ಮಂತಹ ಸಣ್ಣಪುಟ್ಟ ಸಮುದಾಯಗಳ ಭವಿಷ್ಯ ಅತ್ಯಂತ ಧಾರುಣವಾಗುವ ಸೂಚನೆಗಳು ಕಾಣುತ್ತಿವೆ ಎಂದರು.

ಪ್ರವರ್ಗ 2(ಎ)ನಲ್ಲಿ ಶೇ.15ರಷ್ಟು ಮೀಸಲಾತಿ ಇದ್ದು, ಇದನ್ನು 102 ಅತೀ ಹಿಂದುಳಿದ ಸಮುದಾಯಗಳು ಹಂಚಿಕೊಳ್ಳಬೇಕಿದೆ. ಈ ಮೀಸಲಾತಿ ಇನ್ನೂ ಅರ್ಧದಷ್ಟು ಧ್ವನಿಯೇ ಇಲ್ಲದ ಸಮುದಾಯಗಳಿಗೂ ತಲುಪಿಲ್ಲ. ಆಶ್ಚರ್ಯವೆಂದರೆ ಇಲ್ಲಿನ ಅನೇಕ ಸಮುದಾಯಗಳಿಗೆ ಇಷ್ಟು ದಶಕಗಳಲ್ಲಿ ಒಮ್ಮೆಯೂ ಮೀಸಲಾತಿ ಸೌಲಭ್ಯ ದೊರೆತಿಲ್ಲ. ಇದರ ಬಗ್ಗೆ ತಮ್ಮ ಆಯೋಗ ಜಾತಿವಾರು ಸಮೀಕ್ಷೆಗಾಗಿ ಸಂಗ್ರಹಿಸಿರಬಹುದಾದ ದ್ವಿತೀಯ ಮೂಲದ ಮಾಹಿತಿಯನ್ನು ದಯವಿಟ್ಟು ಗಮನಿಸಬಹುದು ಎಂದು ತಿಳಿಸಿದರು.

ವೇದಿಕೆಯ ಗೌರವ ಸಲಹೆಗಾರ ಡಾ.ಸಿ.ಎಸ್.ದ್ವಾರಾಕಾನಾಥ್ ಮಾತನಾಡಿ, ಸುಪ್ರೀಂಕೋರ್ಟ್ ನಿರ್ದೇಶನದ ಮೇಲೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಅಸ್ತಿತ್ವದಲ್ಲಿ ಇರುವಾಗ ಈಗಿನ ಮೀಸಲಾತಿ ಗೊಂದಲದ ಬಗ್ಗೆ ಮತ್ತೊಂದು ಉನ್ನತ ಮಟ್ಟದ ಸಮಿತಿಯನ್ನು ಸರಕಾರ ಮಾಡಹೊರಟಿರುವುದು ಅನೈತಿಕ ಮತ್ತು ಅನಾವಶ್ಯಕ ಎಂದು ಆರೋಪಿಸಿದರು.

ಈಗಿನ ಮೀಸಲಾತಿ ಗೊಂದಲವನ್ನು ಸದರಿ ಆಯೋಗವೇ ಪರಿಹರಿಸಬೇಕೆಂಬುದು ನಮ್ಮ ಆಶಯ. ಈ ಕಾರಣಕ್ಕೆ ಸದರಿ ಸಮಿತಿಯನ್ನು ಈ ಕೂಡಲೇ ರದ್ದು ಪಡಿಸಬೇಕೆಂದು ಸರಕಾರವನ್ನು ನಮ್ರವಾಗಿ ಒತ್ತಾಯಿಸುತ್ತೇವೆ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಏಕೈಕ ಮಾರ್ಗ ಸರಕಾರದ ಮುಂದಿರುವುದೆಂದರೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ "ಜಾತೀವಾರು ಸಮೀಕ್ಷೆ"ಯನ್ನು ಸ್ವೀಕರಿಸಿ ಸಾರ್ವಜನಿಕವಾಗಿ ಚರ್ಚೆಗೆ ಬಿಟ್ಟು ಆಯೋಗ ನೀಡಿರುವ ಅಂಕಿಅಂಶಗಳ ಆಧಾರದ ಮೇಲೆ ಈಗಿರುವ ಪಟ್ಟಿಗಳನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ಪಟ್ಟಿಗಳನ್ನು ರೂಪಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೇದಿಕೆಯ ಉಪಾಧ್ಯಕ್ಷರೂ ಆದ ವಿಧಾನ ಪರಿಷತ್ತಿನ ಸದಸ್ಯ ಪಿ.ಆರ್.ರಮೇಶ್, ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ, ಪ್ರಧಾನ ಕಾರ್ಯದರ್ಶಿ ಎಸ್.ಆರ್.ಯೆಲ್ಲಪ್ಪ, ವೇದಿಕೆಯ ಉಪಾಧ್ಯಕ್ಷರಾದ ಡಾ.ಜಿ.ರಮೇಶ್, ಎಚ್.ಸುಬ್ಬಣ್ಣ, ಸಿ. ನಂಜಪ್ಪ, ಬಿ.ವೆಂಕಟೇಶ್, ಬಸವರಾಜು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಿಪಕ್ಷ ನಾಯಕರಿಗೂ ಮನವಿ

ತಮ್ಮ ಬೇಡಿಕೆಗಳ ಈಡೇರಿಕೆ ಸಂಬಂಧ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಸದಸ್ಯರು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೂ ಮನವಿ ಪತ್ರ ಸಲ್ಲಿಕೆ ಮಾಡಿದರು.

ಹೆಚ್ಚಿನ ಅನುದಾನ ನೀಡುವ ಭರವಸೆ: ಸಿಎಂ

ಈಗಾಗಲೇ ತಮ್ಮ ಬಜೆಟ್‍ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ವೇದಿಕೆಯ ಅಧ್ಯಕ್ಷ ಎಂ.ಸಿ.ವೇಣುಗೋಪಾಲ್ ತಿಳಿಸಿದರು.

ಮಾ.24ಕ್ಕೆ ಸಭೆ

ಮಾ.24 ರಂದು ಪ್ರವರ್ಗ 2(ಎ)ಗೆ ಸೇರಿಸುವಂತೆ ಮನವಿ ಮಾಡಿರುವ ಹಾಗೂ ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ಎಲ್ಲ ಜಾತಿಗಳು ಹಾಗೂ ಸಂಘಟನೆಗಳ ಮುಖಂಡರುಗಳ ಸಭೆಯನ್ನು ಕರೆಯಾಲಾಗಿದೆ. ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸಂವಿಧಾನಾತ್ಮಕವಾದಂತಹ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು.

-ಜಯಪ್ರಕಾಶ್ ಹೆಗ್ಡೆ, ಅಧ್ಯಕ್ಷ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X