Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧಿ ಹಂತಕ ಗೋಡ್ಸೆಯನ್ನು ಪೂಜಿಸುವವರಿಂದ...

ಗಾಂಧಿ ಹಂತಕ ಗೋಡ್ಸೆಯನ್ನು ಪೂಜಿಸುವವರಿಂದ ದೇಶಭಕ್ತಿಯ ಪಾಠ ಕಲಿಯಬೇಕೇ: ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಸಚಿವ ಮನಗೂಳಿ ಪುತ್ರ ಅಶೋಕ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ9 March 2021 10:28 PM IST
share
ಗಾಂಧಿ ಹಂತಕ ಗೋಡ್ಸೆಯನ್ನು ಪೂಜಿಸುವವರಿಂದ ದೇಶಭಕ್ತಿಯ ಪಾಠ ಕಲಿಯಬೇಕೇ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಮಾ.9: ಪ್ರಧಾನಿ ನರೇಂದ್ರ ಮೋದಿ ಹುಟ್ಟಿದ್ದು ಸ್ವಾತಂತ್ರ್ಯ ಬಂದ ನಂತರ, ನಾನು ಸ್ವಾತಂತ್ರ್ಯ ಬರುವ 12 ದಿನ ಮುಂಚೆ ಹುಟ್ಟಿದ್ದೇನೆ. ಅಂತಹವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾ? ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಪೂಜೆ ಮಾಡುವವರಿಂದ ನಾವು ದೇಶಭಕ್ತಿಯನ್ನು ಕಲಿಯಬೇಕಾ? ಎಂದು ಬಿಜೆಪಿ ಹಾಗೂ ಸಂಘಪರಿವಾರದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ನಾಯಕ, ಮಾಜಿ ಸಚಿವ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ನರೇಂದ್ರ ಮೋದಿ ಬಾಯಿ ಬಿಟ್ಟರೆ ಸಾಕು ಬರೀ ಸುಳ್ಳು ಹೇಳುತ್ತಾರೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವವರು ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರನ್ನು ಯಾಕೆ ದೂರ ಇಡುತ್ತಾರೆ. ಅವರ ಕಲ್ಯಾಣಕ್ಕೆ ಯಾವುದೆ ಕಾರ್ಯಕ್ರಮಗಳನ್ನು ಘೋಷಣೆ ಮಾಡದೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಬಿಜೆಪಿ ಅವರು ಏನು ಕೇಳಿದರೂ ಕೊರೋನ ಅಂತಾರೆ. ನಮ್ಮ ರಾಜ್ಯದಲ್ಲಿ ಕೊರೋನ ಸಾಂಕ್ರಮಿಕಕ್ಕಾಗಿ ಖರ್ಚು ಮಾಡಿರುವುದು ಕೇವಲ 5 ಸಾವಿರ ಕೋಟಿ ರೂ.ಮಾತ್ರ. ಅದರಲ್ಲಿಯೂ ಸುಮಾರು 3 ಸಾವಿರ ಕೋಟಿ ರೂ.ಲೂಟಿ ಹೊಡೆದಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡೋವಾಗ, ಬಜೆಟ್ ಮಂಡನೆ ಮಾಡುವಾಗ ಮಾತ್ರ ಹಸಿರು ಶಾಲು ಹಾಕಿಕೊಳ್ಳೋದು. ಆನಂತರ ಹಸಿರು ಶಾಲು ಕಾಣಿಸೋದೆ ಇಲ್ಲ. ಇಂತಹವರನ್ನು ರೈತ ನಾಯಕ ಎಂದು ಕರೆಯಬೇಕಾ ಎಂದು ಸಿದ್ದರಾಮಯ್ಯ ಹೇಳಿದರು.

ಅಶೋಕ್ ಮನಗೂಳಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಉಪಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಘೋಷಣೆಯಾಗುತ್ತದೆ. ಪಕ್ಷದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಈವರೆಗೆ ನಿರ್ಧರಿಸಿಲ್ಲ. ಯಾರಿಗಾದರೂ ಟಿಕೆಟ್ ಸಿಗಲಿ, ಸಿಂಧಗಿಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಧ್ವಜ ಹಾರಬೇಕು. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆ. ನಾಳೆಯೆ ಸಾರ್ವತ್ರಿಕ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಆಗ ಅಧಿಕಾರವನ್ನು ಹಂಚಿಕೊಳ್ಳೋಣ ಎಂದು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದರು.

ಎಂ.ಸಿ.ಮನಗೂಳಿ ತಮ್ಮ ಮಗನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕೋರಿದ್ದರು. ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆದು, ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರುವಂತೆ ಹೇಳಿದ್ದೆ. ಅದರಂತೆ, ಇಂದು ಅಶೋಕ್ ಮನಗೂಳಿ ಬೇಷರತ್ತಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮಾ.13ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ: ರಾಜ್ಯದ ಬಿಜೆಪಿ ಸರಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಇದೇ 13ರಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

‘ಕೊರೋನ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು.

ಇದರ ವಿರುದ್ಧ ಪ್ರತಿಭಟನೆ ಮಾಡಲು ನಾವು ನಿರ್ಧರಿಸಿದ್ದೇವೆ. ಈ ಬಗ್ಗೆ ಸದನದಲ್ಲಿ ಹಾಗೂ ಇತರೆ ಕಡೆಗಳಲ್ಲಿ ಚರ್ಚೆ ಮಾಡಿದ್ದೇವೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್‍ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ. ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ 13ರಂದು ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾವು ಶಿವಮೊಗ್ಗಕ್ಕೆ ತೆರಳಿ ನಮ್ಮ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X