ಅಸ್ಸಾಂ ಸಚಿವ ಹಿಮಂತ ಬಿಸ್ವಾ ಶರ್ಮಾ ಹತ್ಯೆಗೆ ಪಿತೂರಿ: ಮೂವರ ಬಂಧನ

ಗುವಾಹಟಿ: ಅಸ್ಸಾಂನ ಸಚಿವ ಹಿಮಂತಾ ಬಿಸ್ವಾ ಶರ್ಮಾ ಅವರ ಹತ್ಯೆಗೆ ಪಿತೂರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂರು ಜನರನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಗುವಾಹಟಿ ಪೊಲೀಸ್ ಆಯುಕ್ತ ಮುನ್ನಾ ಪ್ರಸಾದ್, ಕೊಲೆಯ ಪಿತೂರಿಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಆ ಕುರಿತು ತನಿಖೆ ಆರಂಭಿಸಲಾಗಿದೆ ಎಂದರು.
ಕಳೆದ ರಾತ್ರಿ ನಾವು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆನಂತರ ಆ ಮೂವರನ್ನೂ ಬಂಧಿಸಿದ್ದೆವು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕೊಡಲಾಗಿದೆ ಎಂದು ಹೇಳಿದರು.
ಮೂವರು ಆರೋಪಿಗಳಲ್ಲಿ ಒಬ್ಬ ಉಲ್ಫಾ ಪರವಾದ ಸಂಘಟನೆಯ ಉಪಾಧ್ಯಕ್ಷ ಪ್ರದೀಪ್ ಗೊಗೊಯಿ ಎಂದು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ ಗಳಾದ 120 ಬಿ(ಅಪರಾಧ ಪಿತೂರಿ), 121 ಹಾಗೂ ಸೆಕ್ಷನ್ 18ರ ಅಡಿಯಲ್ಲಿ ಮೂವರ ವಿರುದ್ಧ ಆರೋಪ ದಾಖಲಿಸಲಾಗಿದೆ.
Next Story





