ಮೀಸಲಾತಿ ಬೇಡಿಕೆ ಪರಿಶೀಲನೆಗೆ ನ್ಯಾ.ಸುಭಾಶ್ ಆಡಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿ ಆದೇಶ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ, ಪರಿಶಿಷ್ಟ ಪಂಗಡ(ಎಸ್ಟಿ) ಮೀಸಲಾತಿ ಹೆಚ್ಚಳ, ಕುರುಬ ಸಮುದಾಯ ಎಸ್ಟಿ ಸೇರ್ಪಡೆ, ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯ ಕೇಂದ್ರ ಸರಕಾರದ ಒಬಿಸಿ ಪಟ್ಟಿಗೆ ಸೇರ್ಪಡೆ ಸಂಬಂಧ ಪರಿಶೀಲನೆಗೆ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸುಭಾಶ್ ಆಡಿ ಅಧ್ಯಕ್ಷತೆಯಲ್ಲಿ ಮೂರು ಮಂದಿಯ ಸಮಿತಿ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬುಧವಾರ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಪ್ರಭುಲಿಂಗಯ್ಯ ಅವರು ಆದೇಶ ಹೊರಡಿಸಿದ್ದು,
ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಬಿ.ವಿ.ವಸಂತಕುಮಾರ್ ಸದಸ್ಯರಾಗಿದ್ದು, ಸಚಿವ ಸಂಪುಟದ ತೀರ್ಮಾನದಂತೆ ಮೇಲ್ಕಂಡ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.
ಮೈಸೂರು ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ|| ಬಿ.ವಿ.ವಸಂತಕುಮಾರ್ ಸದಸ್ಯರಾಗಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. (2/2)
— CM of Karnataka (@CMofKarnataka) March 10, 2021
Next Story







