Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ...

ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ ‘ಡಾ.ಎಚ್.ಎನ್’ ಹೆಸರಿಡಲು ಸುರೇಶ್ ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ10 March 2021 11:08 PM IST
share
ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ ‘ಡಾ.ಎಚ್.ಎನ್’ ಹೆಸರಿಡಲು ಸುರೇಶ್ ಕುಮಾರ್ ಮನವಿ

ಬೆಂಗಳೂರು, ಮಾ.10: ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ‘ನಮ್ಮ ಮೆಟ್ರೋ’ ನಿಲ್ದಾಣಕ್ಕೆ ‘ಡಾ.ಎಚ್.ಎನ್.ನಿಲ್ದಾಣ’ ಎಂದು ನಾಮಕರಣ ಮಾಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. 

ರಾಜಧಾನಿ ಬೆಂಗಳೂರಿನ ಜನರ ಸಂಚಾರನಾಡಿಯಾಗಿರುವ ‘ನಮ್ಮ ಮೆಟ್ರೋ’ ರೈಲು ನಿಲ್ದಾಣಗಳಿಗೆ ಆಯಾ ಭಾಗದ ವಿಶೇಷಗಳು ಹಾಗೂ ಆಯಾ ಪ್ರದೇಶದಲ್ಲಿ ತಮ್ಮ ಸೇವೆ ಮೂಲಕ ಪ್ರಸಿದ್ಧರಾಗಿರುವ ಉದ್ಧಾಮರ ಹೆಸರುಗಳನ್ನು ಇಟ್ಟು ವಿಶಿಷ್ಟವಾಗಿ ಗೌರವಿಸಲಾಗಿದೆ.  ಅದೇ ರೀತಿ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೆ ಹಿರಿಯ ಶಿಕ್ಷಣ ಪ್ರೇಮಿ  ಡಾ.ಎಚ್.ನರಸಿಂಹಯ್ಯನವರ ಹೆಸರನ್ನು ನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ. 

ಮೆಟ್ರೋ ನಿಲ್ದಾಣಗಳಿಗೆ ಇಂತಹ ಮಹಾಪುರಷರನ್ನು ಸದಾ ಸ್ಮರಣೆಯಲ್ಲಿಟ್ಟುಕೊಂಡು ಅವರ ಸೇವೆಯನ್ನು ಗುರುತಿಸುವ ಒಂದು ಕ್ರಮವಾಗಿದೆ. ಉದಾಹರಣೆಗೆ ಡಾ.ಬಿ.ಆರ್.ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ನಾಡಪ್ರಭು ಕೆಂಪೇಗೌಡ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ಸರ್.ಎಂ.ವಿಶ್ವೇಶ್ವರಯ್ಯನವರು ಸೇರಿದಂತೆ ಅನೇಕ ಮಹನೀಯರ ಹೆಸರನ್ನು ಮೆಟ್ರೋ ರೈಲು ನಿಲ್ದಾಣಗಳಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.  

ಬೆಂಗಳೂರಿನ ಪ್ರಮುಖ ಭಾಗ ಬಸವನಗುಡಿಯ ನ್ಯಾಷನಲ್ ಕಾಲೇಜು ಪ್ರದೇಶ. ನ್ಯಾಷನಲ್ ಕಾಲೇಜು ಎಂದ ಕೂಡಲೇ ಎಲ್ಲರ ನೆನಪಿಗೆ ಬರುವ ಹೆಸರು ನಮ್ಮೆಲ್ಲರ ಮೆಚ್ಚಿನ ಗೌರವಾನ್ವಿತ  ಡಾ.ಎಚ್. ನರಸಿಂಹಯ್ಯ ಅವರದು. ಅವರು ಪ್ರಗತಿಪರ ಧೋರಣೆಗೆ ಹೆಸರಾಗಿ ಇಡೀ ತಮ್ಮ ಜೀವನವನ್ನು ಇಡೀ ಸಮಾಜಕ್ಕಾಗಿ ಅರ್ಪಿಸಿಕೊಂಡವರು. ಅವರನ್ನು ನೆನಪಿಸಿಕೊಳ್ಳದೆ ನ್ಯಾಷನಲ್ ಕಾಲೇಜು ಹೆಸರನ್ನು ಪ್ರಸ್ತಾಪಿಸಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದ್ದಾರೆ.

ಸರಳತೆಯೇ ಮೈವೆತ್ತಂತಿದ್ದು ಸದಾ ಖಾದಿಯನ್ನೇ ಧರಿಸುತ್ತಿದ್ದ ಡಾ.ಎಚ್.ನರಸಿಂಹಯ್ಯನವರು ಅಧ್ಯಾಪಕರಾಗಿ, ಆಡಳಿತಗಾರರಾಗಿ, ಸ್ನೇಹಮಯ ಮಾನವತಾವಾದಿಯಾಗಿದ್ದರಲ್ಲದೇ ರಾಷ್ಟ್ರೀಯವಾದಿಯೂ ಆಗಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ, ವಿಧಾನಪರಿಷತ್ತಿನ ಸದಸ್ಯರಾಗಿ ಅವರು ತಾವು ಅಲಂಕರಿಸಿದ ಯಾವುದೇ ಸ್ಥಾನಕ್ಕೂ ಗೌರವವನ್ನು ತಂದಿದ್ದರು. ಆ ಹೆಸರೇ ಎಲ್ಲರಿಗೂ ಪ್ರೇರಣೆ ತರುವಂತಹುದು. ಅಸಂಖ್ಯಾತ ಪ್ರತಿಭೆಗಳಿಗೆ ಬೆಳಕು ತೋರಿದವರು ಎಂದು ಸುರೇಶ್ ಕುಮಾರ್ ಪತ್ರದಲ್ಲಿ ವಿವರಿಸಿದ್ದಾರೆ. 

ಬಸವನಗುಡಿಯ ನ್ಯಾಷನಲ್ ಕಾಲೇಜು ‘ನಮ್ಮ ಮೆಟ್ರೋ’ ನಿಲ್ದಾಣಕ್ಕೆ ‘ಡಾ.ಎಚ್.ಎನ್.ನಿಲ್ದಾಣ’ ಎಂದು ನಾಮಕರಣ ಮಾಡುವ ಮೂಲಕ ಇಂತಹ ಮಹಾನ್ ನಿಸ್ವಾರ್ಥ ಸಮಾಜ ಜೀವಿಯ ಸೇವೆಯನ್ನು ಮುಂದಿನ ಪೀಳಿಗೆಗೂ ನೆನಪಿಟ್ಟುಕೊಳ್ಳುವಂತೆ ಮಾಡಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X