ಟೆಸ್ಟ್ ರ್ಯಾಂಕಿಂಗ್: ಪಂತ್ ಜೀವನಶ್ರೇಷ್ಠ ಸಾಧನೆ, 2ನೇ ಸ್ಥಾನಕ್ಕೇರಿದ ಅಶ್ವಿನ್
ದುಬೈ, ಮಾ.10: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಭಾರತದ ಯುವ ವಿಕೆಟ್ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಬುಧವಾರ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಜೀವನಶ್ರೇಷ್ಠ 7ನೇ ಸ್ಥಾನ ತಲುಪಿದ್ದಾರೆ.
ಅಹಮದಾಬಾದ್ ಟೆಸ್ಟ್ನಲ್ಲಿ 101 ರನ್ ಗಳಿಸಿದ ಹಿನ್ನೆಲೆಯಲ್ಲಿ ಪಂತ್ 7 ಸ್ಥಾನ ಭಡ್ತಿ ಪಡೆದರು. ಪಂತ್ ಟೆಸ್ಟ್ ರ್ಯಾಂಕಿಂಗ್ನಲ್ಲಿ 7ನೇ ಸ್ಥಾನವನ್ನು ಸಹ ಆಟಗಾರ ರೋಹಿತ್ ಶರ್ಮಾರೊಂದಿಗೆ ಹಂಚಿಕೊಂಡಿದ್ದಾರೆ. ರೋಹಿತ್ 1 ಸ್ಥಾನ ಮೇಲಕ್ಕೇರಿದ್ದಾರೆ. ಕೊಹ್ಲಿ 5ನೇ ಸ್ಥಾನದಲ್ಲಿದ್ದು, ಚೇತೇಶ್ವರ ಪೂಜಾರ 13ನೇ ಸ್ಥಾನದಲ್ಲಿದ್ದಾರೆ. ಕಿವೀಸ್ನ ವಿಲಿಯಮ್ಸನ್, ಆಸ್ಟ್ರೇಲಿಯದ ಸ್ಟೀವನ್ ಸ್ಮಿತ್ ಮೊದಲೆರಡು ಸ್ಥಾನದಲ್ಲಿದ್ದಾರೆ.
ಬೌಲರ್ಗಳ ರ್ಯಾಂಕಿಂಗ್ನಲ್ಲಿ ಅಶ್ವಿನ್ ದ್ವಿತೀಯ ಸ್ಥಾನಕ್ಕೇರಿದರು. ಇಂಗ್ಲೆಂಡ್ ವಿರುದ್ದ ಸರಣಿಯಲ್ಲಿ ಸರಣಿಶ್ರೇಷ್ಠ ಗೌರವಕ್ಕೆ ಪಾತ್ರರಾಗಿರುವ ಅಶ್ವಿನ್ ಆಲ್ರೌಂಡರ್ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
Next Story