'ರಾಜ್ಯದಲ್ಲಿ ವಿದ್ಯಾರ್ಥಿಗಳ ಡ್ರಾಪ್ ಔಟ್ ಸಂಖ್ಯೆ ಹೆಚ್ಚಳ' : ಕ್ಯಾಂಪಸ್ ಫ್ರಂಟ್‌ನಿಂದ ಝೀರೋ ಡ್ರಾಪ್ ಔಟ್ ಅಭಿಯಾನ
ಮಂಗಳೂರು : ಶಾಲಾ ಕಾಲೇಜು ಅರ್ಧದಲ್ಲಿ ಮೊಟಕುಗೊಳಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬದಲಾಗಿ ಕುಟುಂಬ ನಿರ್ವಹಣೆ ಮಾಡಲು ಬೇಸಾಯ ,ಕೂಲಿ, ಕಾರ್ಖಾನೆಗಳಿಗೆ ದುಡಿಮೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿದೆ.
ಇದರ ಗಂಭೀರತೆಯನ್ನು ಮನಗಂಡು ಸಮಾಜದಲ್ಲಿ ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು 'ಉತ್ತಮ ಭವಿಷ್ಯಕ್ಕಾಗಿ ಕಾರ್ಯಪ್ರವೃತ್ತರಾಗೋಣ'ಎಂಬ ಘೋಷಾ ವಾಕ್ಯದೊಂದಿಗೆ "ಝೀರೋ ಡ್ರಾಪ್ ಔಟ್" ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ.
ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿಕ್ಕಿದೆ. ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು, ಪೋಷಕರು, ಅಧಿಕಾರಿಗಳು ಅಭಿಯಾನದಲ್ಲಿ ನಮ್ಮೊಂದಿಗೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಪ್ರಕಟನೆ ತಿಳಿಸಿದೆ.
Next Story





