Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ...

ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ ಬಾಗಿಲು ಮುಚ್ಚಿದ 10,113 ಕಂಪೆನಿಗಳು

ವಾರ್ತಾಭಾರತಿವಾರ್ತಾಭಾರತಿ11 March 2021 12:44 PM IST
share
ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದಲ್ಲಿ ಬಾಗಿಲು ಮುಚ್ಚಿದ 10,113 ಕಂಪೆನಿಗಳು

 ಹೊಸದಿಲ್ಲಿ: ಕಳೆದ ವರ್ಷದ ಎಪ್ರಿಲ್ ತಿಂಗಳಿನಿಂದ ಈ ವರ್ಷದ ಫೆಬ್ರವರಿ ತನಕ ದೇಶದಲ್ಲಿ ಸುಮಾರು 10,000ಕ್ಕೂ ಅಧಿಕ ಕಂಪೆನಿಗಳು ಬಂದ್ ಆಗಿವೆ ಎಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕಳೆದ ವರ್ಷ ದೇಶದಲ್ಲಿ ವ್ಯಾಪಕವಾಗಿದ್ದ ಕೋವಿಡ್ ಸಾಂಕ್ರಾಮಿಕ ಹಾಗೂ ಅದನ್ನು ತಡೆಗಟ್ಟಲು ಹೇರಲ್ಪಟ್ಟಿದ್ದ ಅನಿರೀಕ್ಷಿತ ಲಾಕ್ ಡೌನ್‍ನಿಂದಾಗಿ ಎದುರಾದ ಆರ್ಥಿಕ ಸಂಕಷ್ಟವೇ ಈ ಕಂಪೆನಿಗಳು ಖಾಯಂ ಆಗಿ ಮುಚ್ಚಲು ಕಾರಣವೆಂದು ಅಂದಾಜಿಸಲಾಗಿದೆ.

ಕಂಪೆನೀಸ್ ಆ್ಯಕ್ಟ್ 2013 ಇದರ ಸೆಕ್ಷನ್ 248(2)  ಅನ್ವಯ 10,113 ಕಂಪೆನಿಗಳ ಹೆಸರುಗಳನ್ನು ಕೈಬಿಡಲಾಗಿರುವುದು  ಲಭ್ಯ ದಾಖಲೆಗಳಿಂದ ತಿಳಿಯುತ್ತವೆ.  ಸೆಕ್ಷನ್ 248(2) ಅಡಿಯಲ್ಲಿ ಕಂಪೆನಿಗಳು ತಾವಾಗಿಯೇ ಮುಚ್ಚಿವೆ  ಹಾಗೂ ಇತರ ಯಾವುದೇ ಪ್ರಾಧಿಕಾರ ಕೈಗೊಂಡ ಕ್ರಮದಿಂದ ಮುಚ್ಚಿಲ್ಲ ಎಂಬುದು ತಿಳಿಯುತ್ತದೆ.

ಆದರೆ ಯಾವ ಕಂಪೆನಿಗಳು ಮುಚ್ಚಿವೆ ಎಂಬ ಕುರಿತು ಸಚಿವಾಲಯ ದಾಖಲೆಗಳನ್ನು ಇಟ್ಟುಕೊಳ್ಳುವುದಿಲ್ಲವಾದರೂ 2020-21ರ ಅವಧಿಯಲ್ಲಿ 10,113 ಕಂಪೆನಿಗಳು ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು  ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕುರ್ ಸೋಮವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಈ ಕಂಪೆನಿಗಳ ಪೈಕಿ ದಿಲ್ಲಿಯ 2,394 ಕಂಪೆನಿಗಳು ದಿಲ್ಲಿಯಲ್ಲಿ ಮುಚ್ಚಿದ್ದರೆ, ಉತ್ತರ ಪ್ರದೇಶದ 1936, ಮಹಾರಾಷ್ಟ್ರದ 1,279 ಹಾಗೂ ತಮಿಳುನಾಡಿನ 1,322 ಕಂಪೆನಿಗಳು ಮುಚ್ಚಿವೆ. ಈ ಅವಧಿಯಲ್ಲಿ ಕರ್ನಾಟಕದಲ್ಲಿ 836 ಕಂಪೆನಿಗಳು ಮುಚ್ಚಿದ್ದರೆ ಚಂಡಿಗಢದಲ್ಲಿ 501 ಕಂಪೆನಿಗಳು, ರಾಜಸ್ಥಾನದಲ್ಲಿ 479, ತೆಲಂಗಾಣದಲ್ಲಿ 404, ಕೇರಳದಲ್ಲಿ 307, ಜಾರ್ಖಂಡ್‍ನಲ್ಲಿ 137, ಮಧ್ಯಪ್ರದೇಶದಲ್ಲಿ 11 ಹಾಗೂ ಬಿಹಾರದಲ್ಲಿ 104 ಕಂಪೆನಿಗಳು ಮುಚ್ಚಿದ್ದವು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X