Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಅಂತರ್‌ರಾಷ್ಟ್ರೀಯ...

ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ: ಖಾಸಗಿ ಕಂಪೆನಿಗೆ ವಹಿಸದಂತೆ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 March 2021 8:04 PM IST
share
ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವ: ಖಾಸಗಿ ಕಂಪೆನಿಗೆ ವಹಿಸದಂತೆ ಸಿಎಂಗೆ ಮನವಿ

ಬೆಂಗಳೂರು, ಮಾ.11: ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವದ ಆಯೋಜನೆಯನ್ನು ಹೊರಗುತ್ತಿಗೆಯಾಗಿ ಖಾಸಗಿ ಕಂಪೆನಿಗೆ ವಹಿಸುವುದು ಬೇಡ. ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ನೀಡಬೇಕೆಂದು ಹಿರಿಯ ಸಿನೆಮಾ ನಿರ್ದೇಶಕ ಗಿರೀಶ್ ಕಾಸರವಳ್ಳಿ ಸೇರಿದಂತೆ ಹಲವು ನಿರ್ದೇಶಕರು, ಸಿನೆಮಾ ನಟರು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ಚಲನಚಿತ್ರ ಉತ್ಸವದ ಮೂಲಕ ಜಗತ್ತಿನ ವಿವಿಧ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸರಕಾರದ ನೇತೃತ್ವದಲ್ಲಿ ನಡೆದರೆ ನಾಡಿನ ಸಾಂಸ್ಕೃತಿಕತೆಯನ್ನು ಸಾದರ ಪಡಿಸಲು ಉತ್ತಮ ವೇದಿಕೆಯಾಗುತ್ತದೆ. ಆದರೆ, ಅದನ್ನು ಮ್ಯಾನೆಜ್ಮೆಂಟ್ ಕಂಪೆನಿಯೊಂದಕ್ಕೆ ವಹಿಸಿದರೆ, ಕೇವಲ ಒಂದು ಕಾರ್ಯಕ್ರಮವಾಗಿ ಮಾತ್ರ ಉಳಿದು ಬಿಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸುಮಾರು ಆರೇಳು ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವದ ಸಂಪೂರ್ಣ ನಿರ್ವಹಣೆ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ವಹಿಸಬೇಕು. ಆ ಮೂಲಕ ಸಿನೆಮೋತ್ಸವವನ್ನು ನಾಡಿನ ಜನತೆ ತಮ್ಮದೇ ಉತ್ಸವವೆಂದು ಭಾವಿಸಲು ಅವಕಾಶ ಮಾಡಿಕೊಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಅನಗತ್ಯ ವೆಚ್ಚಬೇಡ: ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವದ ಉದ್ಘಾಟನೆ ಹಾಗೂ ಮುಕ್ತಾಯದ ಕಾರ್ಯಕ್ರಮಗಳಿಗೆ ಎರಡರಿಂದ ಮೂರು ಕೋಟಿ ರೂ.ವೆಚ್ಚ ಆಗುತ್ತಿದೆ. ಈ ಸಮಾರಂಭದಿಂದ ಚಲನಚಿತ್ರೋದ್ಯಮಕ್ಕೆ ಯಾವುದೇ ಅನುಕೂಲ ಇಲ್ಲ. ಒಟ್ಟು ಉತ್ಸವಕ್ಕೆ ರಾಜ್ಯ ಸರಕಾರ ನೀಡುವ ಹಣದಲ್ಲಿ ಶೇ.50ರಷ್ಟು ಹಣ ಕೇವಲ ಎರಡು ಗಂಟೆ ನಡೆಯುವ ಉದ್ಘಾಟನೆ, ಮುಕ್ತಾಯ ಸಮಾರಂಭಗಳಿಗೆ ವಿನಿಯೋಗ ಆಗುತ್ತಿದೆ ಎಂದು ಅವರು ವಿಷಾದಿಸಿದ್ದಾರೆ.

ಈ ಅನಗತ್ಯ ವಿಜೃಂಭಣೆಯಿಂದ ಕೂಡಿದ ಉದ್ಘಾಟನೆ ಹಾಗೂ ಮುಕ್ತಾಯ ಕಾರ್ಯಕ್ರಮ ಮತ್ತು ಅದಕ್ಕೆ ಆಗುವ ದುಂದುವೆಚ್ಚವನ್ನು ತಪ್ಪಿಸಬೇಕಾಗಿದೆ. ಅದರ ಬದಲಾಗಿ ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿಗಳಲ್ಲಿ ಚಲನಚಿತ್ರೋತ್ಸವ ನಡೆಸುವಂತಾಗಲಿ ಎಂದು ಅವರು ಆಶಿಸಿದ್ದಾರೆ.

ಚಲನ ಚಿತ್ರೋದ್ಯಮದ ಪರವಾಗಿ ಹಿರಿಯ ನಿರ್ದೇಶಕರಾದ ಬಿ.ಸುರೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ, ಕವಿತಾ ಲಂಕೇಶ್, ಹಿರಿಯ ನಟ ಶಿವರಾಂ, ರಮೇಶ್‍ಭಟ್ ಸೇರಿದಂತೆ ಹಲವು ಗಣ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X