1-5ರವರೆಗೆ ತರಗತಿ ಪ್ರಾರಂಭಿಸಲು ಅನುಮತಿ ನೀಡಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಮಾ.11: ರಾಜ್ಯದಲ್ಲಿ ಒಂದರಿಂದ ಐದನೆ ತರಗತಿಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆ ಸಮ್ಮತಿ ನೀಡಿಲ್ಲ. ಶಿಕ್ಷಣ ಇಲಾಖೆಯು ಇದನ್ನು ಆಧರಿಸಿ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನನ್ನೊಡನೆ ಮಾತನಾಡಿದ್ದಾರೆ. ಸರಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದರ ಹಿಂದೆ ಮಕ್ಕಳ ಹಿತ, ಯೋಗ ಕ್ಷೇಮಗಳ ಕುರಿತು ಚಿಂತನೆ ಇರುತ್ತದೆ. ಕೆಲ ಖಾಸಗಿ ಶಾಲೆಗಳಲ್ಲಿ ಸರಕಾರದ ಆದೇಶವನ್ನು ಮೀರಿ/ಉಲ್ಲಂಘಿಸಿ ಒಂದರಿಂದ ಐದರವರೆಗೆ ತರಗತಿಯನ್ನು ನಡೆಸುತ್ತಿರುವ ಮಾಹಿತಿ ದೊರಕಿದೆ. ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಯಾರೂ ಸಹ ಮಕ್ಕಳ ಯೋಗ ಕ್ಷೇಮಕ್ಕಾಗಿ ದೀರ್ಘ ಚಿಂತನೆ ನಡೆಸಿ ಕೈಗೊಂಡಿರುವ ಸರಕಾರದ ನಿರ್ಧಾರವನ್ನು/ಆದೇಶಗಳನ್ನು ಮೀರಿ ತಾವೇ ಸ್ವತಃ ಯಾವುದೆ ನಿರ್ಧಾರ ಕೈಗೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





