ಸಾಲ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಮೈಸೂರು, ಮಾ.11: ಸಾಲ ಬಾಧೆ ತಾಳಲಾರದೇ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಗೂರು ತಾಲೂಕಿನ ಕುಂದೂರು ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೇವಣ್ಣ (31) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು 4 ಲಕ್ಷಕ್ಕೂ ಹೆಚ್ಚು ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೇ ಖಿನ್ನತೆಗೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಎಚ್.ಡಿ.ಕೋಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ರೇವಣ್ಣ ಸಾವಿಗೀಡಾಗಿದ್ದಾರೆ.
Next Story





