ಖಾಸಗೀಕರಣದ ವಿರುದ್ಧ ಮಾ.15-16ರಂದು ಬ್ಯಾಂಕ್ ನೌಕರರ ಮುಷ್ಕರ

ಹೊಸದಿಲ್ಲಿ,ಮಾ.11: ಬ್ಯಾಂಕ್ ನೌಕರರ ಯೂನಿಯನ್‌ಗಳು ಮತ್ತು ಕೇಂದ್ರ ಸರಕಾರದ ನಡುವೆ ಮಾ.4,9 ಮತ್ತು 10ರಂದು ನಡೆದಿದ್ದ ಸಂಧಾನ ಮಾತುಕತೆಗಳು ವಿಫಲಗೊಂಡಿದ್ದು,ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳ ಖಾಸಗೀಕರಣಕ್ಕೆ ಸರಕಾರದ ನಿರ್ಧಾರವನ್ನು ವಿರೋಧಿಸಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಮಾ.15 ಮತ್ತು 16ರಂದು ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ)ವು ಗುರುವಾರ ತಿಳಿಸಿದೆ.
ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಖಾಸಗೀಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸಲು ಸರಕಾರವು ಒಪ್ಪಿಕೊಂಡರೆ ಮುಷ್ಕರದ ಕರೆಯನ್ನು ಹಿಂದೆಗೆದುಕೊಳ್ಳುವ ಬಗ್ಗೆ ಪರಿಶೀಲಿಸುವುದಾಗಿ ಯೂನಿಯನ್‌ಗಳು ಹೇಳಿವೆ.
Next Story





