ಯುವಕ ನಾಪತ್ತೆ

ಉಡುಪಿ, ಮಾ.12: ಉಡುಪಿಯ ಲಾಲ್‌ಬಹದ್ದೂರ್ ಶಾಸ್ತ್ರಿ 4 ನೇ ಅಡ್ಡ ರಸ್ತೆಯಲ್ಲಿರುವ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ನವೀನ ಉದಯ ಗುಡಿಗಾರ್ (33) ಎಂಬುವವರು ಮಾರ್ಚ್ 8ರಿಂದ ನಾಪತ್ತೆಯಾಗಿದ್ದಾರೆ.
ಚಹರೆ: 160 ಸೆಂ.ಮೀ. ಎತ್ತರವಿದ್ದು, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದಾರೆ. ಕನ್ನಡ, ಕೊಂಕಣಿ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





